ಬೆಂಗಳೂರು: ಎಲ್ಲಾ ಇಲಾಖೆಗಳಲ್ಲಿಯೂ ಪೂರ್ಣ ಪ್ರಮಾಣದಲ್ಲಿ ಕನ್ನಡ ಕಡ್ಡಾಯವಾಗಿ ಬಳಸಬೇಕು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಎಲ್ಲಾ ಇಲಾಖೆಯ ಕಚೇರಿಯ ನಾಮಲಕಗಳು, ದಾಖಲೆಗಳು ಕನ್ನಡದಲ್ಲಿಯೇ ಇರಬೇಕು. ಅರ್ಜಿ, ಪತ್ರಗಳಿಗೂ ಕನ್ನಡದಲ್ಲಿಯೇ ಉತ್ತರ ನೀಡಬೇಕು.ವಿಧಾನಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರಗಳು ಕನ್ನಡದಲ್ಲಿಯೇ ಇರಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.
ಆಡಳಿತದಲ್ಲಿ ಕಡ್ಡಾಯವಾಗಿ ಕನ್ನಡ ಬಳಸಬೇಕು. ಭಾಷಾ ನೀತಿಯನ್ನು ಜಾರಿಗೊಳಿಸುವುದು ಅಧಿಕಾರಿಗಳು ಹಾಗೂ ನೌಕರರ ಕರ್ತವ್ಯ. ವಿಶ್ವವಿದ್ಯಾಲಯಗಳು, ಅನುದಾನಿತ ಸಂಘ-ಸಂಸ್ಥೆಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು, ನೌಕರರು ಕಟ್ಟುನಿಟ್ಟಿನಲ್ಲಿ ನಿಯಮ ಪಾಲಿಸಬೇಕು ಸೂಚನೆ ಉಲ್ಲಂಸುವವರ ವಿರುದ್ಧ ವೈಯಕ್ತಿಕವಾಗಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಎಚ್ಚರಿಕೆ ನೀಡಿದ್ದಾರೆ.
ಇಲಾಖೆಗಳಲ್ಲಿ ಕನ್ನಡ ಕಡ್ಡಾಯ- ಸುತ್ತೋಲೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು