
ತುಮಕೂರು : ಕುಣಿಗಲ್ ಬೈಪಾಸ್ನಲ್ಲಿ ಕಾರು ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿ
ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಕುಣಿಗಲ್ ಬೈಪಾಸ್ ನಲ್ಲಿರುವ ಉಗಿಬಂಡಿ ರೆಸ್ಟೋರೆಂಟ್ ಬಳಿ ಘಟನೆ ನಡೆದಿದ್ದು ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೊಸ್ಟ್ ನ ಒಂದೇ ಕುಟುಂಬ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಯೂ ಟರ್ನ್ ತೆಗೆದುಕೊಳ್ಳುವಾಗ ಕಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲಿದ್ದ ಕುಟುಂಬದ ಗಂಡ, ಹೆಂಡತಿ, ಮಗ, ಮಗಳು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಮೃತದೇಹಗಳನ್ನು ಕುಣಿಗಲ್ ತಾಲ್ಲೂಕು ಆಸ್ಪತ್ರೆಯ ಶವಗಾರಕ್ಕೆ ರವಾನಿಸಿದ್ದಾರೆ.
ಕಾರು ಅಪಘಾತ ನಾಲ್ವರ ಸಾವು







