ವಿದ್ಯುತ್ ಶಾಕ್ ಗೆ ಬಾಲಕಿ ಬಲಿ

ಬೆಂಗಳೂರು: ನಗರದ ಹೊರವಲಯದ ಆನೇಕಲ್ ಬಳಿ ಮನೆಮುಂದೆ ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ 11 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಮೃತ ಬಾಲಕಿಯನ್ನು ನಾರಾಯಣಘಟ್ಟದ ಖಾಸಗಿ ಶಾಲೆಯಲ್ಲಿ ಐದನೇ ತರಗತಿಯಲ್ಲಿ ಓದುತ್ತಿದ್ದ ತನಿಷ್ಕಾ ಎಸ್. ಎಂದು ಗುರುತಿಸಲಾಗಿದೆ. ಮಂಗಳವಾರ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಪೊಲೀಸರ ಪ್ರಕಾರ, ಬಾಲಕಿ ತನ್ನ ಮನೆಯ ಹೊರಗೆ ಚೆಂಡಿನಿಂದ ಆಟವಾಡುತ್ತಿದ್ದಾಗ, ಮನೆ ಮುಂದೆ ಇದ್ದ ವಿದ್ಯುತ್ ಕಂಬದ ಬಳಿಗೆ ಚೆಂಡು ಹೋಗಿದೆ. ಅದನ್ನು ತೆಗೆದುಕೊಳ್ಳಲು … Read more

ಏರ್ ಇಂಡಿಯಾ ಪತನ- ಘೋರ ದುರಂತ

ಅಹಮದಾಬಾದ್: ಗುಜರಾತ್ನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಏರ್ ಇಂಡಿಯಾ ವಿಮಾನ ‘ಎಐ-171’ ಪತನವಾಗಿದೆ. ಅಹಮದಾಬಾದ್ ನಿಂದ ಮಧ್ಯಾಹ್ನ ಸುಮಾರು 1.30 ಕ್ಕೆ ಹೊರಟ ವಿಮಾನವು ಬೋಯಿಂಗ್ 787-8 ವಿಮಾನದಲ್ಲಿ 242 ಪ್ರಯಾಣಿಕರು ಮತ್ತು ಸಿಬ್ಬಂದಿ ಇದ್ದರು. ಈ ಪೈಕಿ 169 ಭಾರತೀಯ ಪ್ರಜೆಗಳು, 53 ಬ್ರಿಟಿಷ್ ಪ್ರಜೆಗಳು, 1 ಕೆನಡಾ ಪ್ರಜೆ ಮತ್ತು 7 ಪೋರ್ಚುಗೀಸ್ ಪ್ರಜೆ ವಿಮಾನದಲ್ಲಿದ್ದರು. 242 ಪ್ರಯಾಣಿಕರಿದ್ದ ವಿಮಾನ ಗುಜರಾತ್ ನ ಅಹಮದಾಬಾದ್ ವಿಮಾನ ನಿಲ್ದಾಣದ … Read more

ಮನೆಗಳ್ಳತನ ಪ್ರಕರಣ ಭೇದಿಸಿದ ಪೊಲೀಸರು: 33.24 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ದಾವಣಗೆರೆ: ಮನೆ ಬೀಗ ಮುರಿದು ಕಳ್ಳತನ ಮಾಡಿದ ಪ್ರಕರಣ ಭೇದಿಸಿದ ಪೊಲೀಸರು ಆರೋಪಿ ಬಂಧಿಸಿ 33.24 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಚಿತ್ರದುರ್ಗ ನಗರದ ಗೋಳೆರಹಟ್ಟಿ ತಾಜಪೀರ್ ಬಡಾವಣೆಯ ನಿವಾಸಿ ಸೈಯ್ಯದ್ ಅಕ್ಬರ್ (58) ಬಂಧಿತ ಆರೋಪಿ. ವಿದ್ಯಾನಗರ 1ನೇ ಮುಖ್ಯ ರಸ್ತೆ 8ನೇ ಕ್ರಾಸ್ ನ ಶಂಕರಯ್ಯ ಎಂಬುವರು ಮೇ 19ರಂದು ಮನೆಗೆ ಬೀಗ ಹಾಕಿಕೊಂಡು ಬೆಂಗಳೂರಿಗೆ ಹೋಗಿದ್ದರು. ಜೂ.6ರಂದು ಬೆಂಗಳೂರಿನಿಂದ ಮನೆಗೆ ವಾಪಸ್ ಬಂದಾಗ ಈ ಕೃತ್ಯ ಬೆಳಕಿಗೆ ಬಂದಿದ್ದು, … Read more

ಕಾಲ್ತುಳಿತದಲ್ಲಿ ಸಾವು- ಮನೋಜ್ ಕುಟುಂಬಕ್ಕೆ ಪರಿಹಾರ

ತುಮಕೂರು: ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ವಿಜಯೋತ್ಸವ ವೀಕ್ಷಿಸಲು ಹೋಗಿ ಕಾಲ್ತುಳಿತದಲ್ಲಿ ಮೃತಪಟ್ಟ ಕುಣಿಗಲ್ ಅಮೃತೂರಿನ ಮನೋಜ್ ಕುಮಾರ್ ತಂದೆಗೆ ಸರ್ಕಾರ ವತಿಯಿಂದ 25 ಲಕ್ಷ ರೂ. ಪರಿಹಾರ ವಿತರಿಸಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೃತ ಮನೋಜ್ ತಂದೆ ದೇವರಾಜುಗೆ ಪರಿಹಾರದ ಚೆಕ್ ವಿತರಿಸಿ ಮಾತನಾಡಿದ ಜಿಲ್ಲಾಧಿಕಾರಿ ಶುಭಕಲ್ಯಾಣ್ ಮುಖ್ಯಮಂತ್ರಿ ಗಳ ರಿಲೀಫ್ ಫಂಡ್ ನಿಂದ ನಮಗೆ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಿಂದ ತಕ್ಷಣ 25 ಲಕ್ಷ ರೂ. ಪರಿಹಾರ ನೀಡುವಂತೆ ಆದೇಶ … Read more

ಸ್ಥಳಾಂತರವಾಗುತ್ತಾ ಚಿನ್ನಸ್ವಾಮಿ ಸ್ಟೇಡಿಯಂ

ಬೆಂಗಳೂರು: ಆರ್ ಸಿಬಿ ತಂಡದ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತದ ಘಟನೆಯಲ್ಲಿ 11 ಜನರ ಸಾವಿನ ದುರಂತ ಇಡೀ ಸರ್ಕಾರಕ್ಕೆ ಮುಜುಗರವುಂಟು ಮಾಡಿದೆ. ಇನ್ನೊಂದೆಡೆ ಪ್ರತಿಪಕ್ಷಗಳು ಮಾತ್ರವಲ್ಲ ಹೈಕೋರ್ಟ್ ಸಹ ಘಟನೆ ಟೀಕಿಸಿ ರಾಜ್ಯ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದೆ. ರಾಜ್ಯಕ್ಕೆ ಈ ಘಟನೆ ಕಪ್ಪುಚುಕ್ಕೆಯಾಗಿರುವ ಬೆನ್ನಲ್ಲೇ ಇದೀಗ ಚಿನ್ನಸ್ವಾಮಿ ಸ್ಟೇಡಿಯಂ ಸ್ಥಳಾಂತರದ ಬಗ್ಗೆ ಚರ್ಚೆಗಳು ಆರಂಭವಾಗಿದೆ. ಮೊನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಅವರು, ಕಡಿಮೆ ಸಾರ್ಮಥ್ಯವಿರುವ ಕ್ರಿಕೆಟ್ ಕ್ರೀಡಾಂಗಣವನ್ನು ಬೇರೆಡೆಗೆ ಸ್ಥಳಾಂತರಿಸುವ ಬಗ್ಗೆ ಸರ್ಕಾರ ಗಮನಹರಿಸಿದೆಯೇ ಎಂಬ ಬಗ್ಗೆ … Read more

ರಾಜ್ಯದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ

ಬೆಂಗಳೂರು: ರಾಜ್ಯದ ದೇವಸ್ಥಾನಗಳಲ್ಲಿ ಆಗ್ಟ್ 15 ರಿಂದ ಪ್ಲಾಸ್ಟಿಕ್ ಬಳಕೆ ಮಾಡುವಂತಿಲ್ಲ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಕಳೆದ ಮೂರು ತಿಂಗಳಲ್ಲಿ 1,253 ದೇವಾಲಯಗಳನ್ನು ಗುರುತಿಸಲಾಗಿದೆ.11,322 ಆಸ್ತಿ ಗುರುತಿಸಿ ನಮೂದಿಸಲಾಗಿದೆ ಎಂದರು. ಹೊರರಾಜ್ಯಗಳಲ್ಲಿ ವಸತಿ ಗೃಹಗಳನ್ನು ನಿರ್ಮಿಸಲು ಯೋಜಿಸಲಾಗಿದೆ. ತಿರುಪತಿಯ ಗಾಂಧಿ ರಸ್ತೆಯಲ್ಲಿರುವ ಜಾಗದಲ್ಲಿ ವಸತಿ ಗೃಹ ನಿರ್ಮಿಸಲಾಗುತ್ತಿದೆ. ವಸತಿ ಗೃಹ ಸಂಕೀರ್ಣ ನಿರ್ಮಾಣ ಮಾಡಲು ಸೂಚಿಸಲಾಗಿದೆ ಎಂದರು. ದೇವಾಲಯದ ಅರ್ಚಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸೌಲಭ್ಯ … Read more

ಸಾಲ ಭಾದೆ- ರೈತ ಆತ್ಮಹತ್ಯೆ

ಪಟ್ಟನಾಯಕನ ಹಳ್ಳಿ: ಸಾಲ ಭಾದೆ, ಜಿಗುಪ್ಸೆಗೆ ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿರಾ ತಾಲೂಕಿನ ಬಂದ ಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋವಿಂದನಹಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ರೈತ ಜಯರಾಮಯ್ಯ (68) ಎನ್ನಲಾಗಿದೆ. ಪಿಎಲ್ ಡಿ ಬ್ಯಾಂಕ್ ನಲ್ಲಿ 50 ಸಾವಿರ ರೂಪಾಯಿ ಸಾಲ ಮಾಡಿದ್ದು, ಬ್ಯಾಂಕ್ ನವರು ಒತ್ತಡ ಮಾಡುತ್ತಿದ್ದ ಕಾರಣ ಬೇರೆಯವರ ಹತ್ತಿರ ಕೈ ಸಾಲ ಮಾಡಿ ಇತ್ತೀಚೆಗೆ ಕಟ್ಟಿದ್ದರು, 2 ಎಕರೆ ಜಮೀನಿನಲ್ಲಿ ಇದ್ದ ತೋಟ ನೀರಿಲ್ಲದೆ … Read more

ಕೃಷಿ ಹೊಂಡಕ್ಕೆ ಕಾಲು ಜಾರಿ ಬಿದ್ದು ಯುವಕ ಸಾವು

ಕೊರಟಗೆರೆ: ಜಮೀನು ಉಳುಮೆ ಮಾಡುತ್ತಿದ್ದ ಯುವಕ ಮಧ್ಯಹ್ನ ಊಟಕ್ಕೆಂದು ಕೃಷಿ ಹೊಂಡದಲ್ಲಿ ಕೈ ತೊಳೆಯಲು ಹೋಗಿ ಆಯಾ ತಪ್ಪಿ ನೀರಿಗೆ ಬಿದ್ದಿದ್ದು ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಕೊರಟಗೆರೆ ತಾಲ್ಲೂಕಿನ ಕಸಬಾ ಹೋಬಳಿ ಚೀಲಗಾನಹಳ್ಳಿ ಗ್ರಾಮದ ಜಮೀನು ಒಂದರಲ್ಲಿ ಟ್ರಾಕ್ಟರ್ ಮೂಲಕ ಉಳುಮೆ ಮಾಡುತ್ತಿದ್ದ ಯುವಕ ಮಧ್ಯಹ್ನ ಊಟಕ್ಕೆಂದು ಉಳುಮೆ ನಿಲ್ಲಿಸಿ ಕೃಷಿ ಹೊಂಡದಲ್ಲಿ ಕೈ ತೊಳೆಯಲು ಹೋಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಮೃತ ಯುವಕ ಚಂದನ್ ಕುಮಾರ್ (21) … Read more

ನಾಲ್ವರು ಕಾರ್ಯಕ್ರಮ ಆಯೋಜಕರ ಬಂಧನ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರುತಂಡದ ಸಂಭ್ರರಮಾಚರಣೆ ವೇಳೆ ಉಂಟಾದ ಕಾಲ್ತುಳಿತದಿಂದ 11 ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ, ಈಗಾಗಲೇ ನಗರ ಪೊಲೀಸ್ ಕಮಿಷನರ್ ಆಗಿದ್ದ ಬಿ.ದಯಾನಂದ್ ಸೇರಿದಂತೆ ಕೆಲ ಅಧಿಕಾರಿಗಳನ್ನು ಅಮಾನತು ಮಾಡಿದೆ. ದುರಂತಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ಮೂವರು ಆಯೋಜಕರು ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ. ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ … Read more

ಸಂತಾಪ ಸೂಚಿಸಿದ ವಿರಾಟ್ ಕೊಹ್ಲಿ

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಭೀಕರ ಕಾಲ್ತುಳಿತದಿಂದ 11 ಜನರು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ವಿರಾಟ್ ಕೊಹ್ಲಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಪೋಸ್ಟ್ ಮಾಡಿರುವ ಅವರು, ಮಾತುಗಳೇ ಬರುತ್ತಿಲ್ಲ, ತೀವ್ರ ನೋವಾಗಿದೆ ಎಂದು ಆರ್ ಸಿಬಿ ಸ್ಟೇಟ್ ಮೆಂಟ್ ಪೋಸ್ಟ್ ಮಾಡಿದ್ದಾರೆ. ತಂಡದ ಆಗಮನದ ನಿರೀಕ್ಷೆಯಲ್ಲಿ ಬೆಂಗಳೂರಿನಾದ್ಯಂತ ಸಾರ್ವಜನಿಕ ಸಭೆಗಳ ಕುರಿತು ಮಾಧ್ಯಮ ವರದಿಗಳ ಮೂಲಕ ಬೆಳಕಿಗೆ ಬಂದಿರುವ ದುರಾದೃಷ್ಟಕರ ಘಟನೆಗಳಿಂದ ನಾವು ತೀವ್ರ ದುಃಖಿತರಾಗಿದ್ದೇವೆ. ಪ್ರತಿಯೊಬ್ಬರ ಸುರಕ್ಷತೆ ಮತ್ತು ಯೋಗಕ್ಷೇಮ ನಮಗೆ … Read more