--ಇಲ್ಲಿ ಜಾಹೀರಾತು--

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

On: July 1, 2025 2:28 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್ನಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಐಸಿಯುನಲ್ಲಿದ್ದ 5 ಮಂದಿ ರೋಗಿಗಳು ಸೇರಿ ಒಟ್ಟು 26 ರೋಗಿಗಳನ್ನು ಸುರಕ್ಷಿತವಾಗಿ ತಕ್ಷಣವೇ ಬೇರೆ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ.
ಆಸ್ಪತ್ರೆಯ ಬರ್ನಿಂಗ್ ವಾರ್ಡ್ನಲ್ಲಿ ಸ್ವಿಚ್ ಬೋರ್ಡ್ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಈ ಅಗ್ನಿ ಅವಘಟ ಸಂಭವಿಸಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣವೇ ರೋಗಿಗಳನ್ನು ಬೇರೆ ವಾರ್ಡ್ಗೆ ಸ್ಥಳಾಂತರಿಸಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಮಂಗಳವಾರ ಬೆಳಗ್ಗೆ 3 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದ್ದು, ರಿಜಿಸ್ಟರ್ ಬುಕ್, ಬೆಡ್ ಎಲ್ಲಾ ಸುಟ್ಟು ಕರಕಲಾಗಿವೆ. ಫ್ರಿಡ್ಜ್ ಗೆ ಬೆಂಕಿ ತಗುಲಿ ಸುಟ್ಟ ಗಾಯಗಳ ವಿಭಾಗದ ಗ್ರೌಂಡ್ ಫ್ಲೋರ್ ತುಂಬಾ ಬೆಂಕಿ ಆವರಿಸಿದೆ. ಕಾಣಿಸಿಕೊಂಡ ತಕ್ಷಣ ರೋಗಿಗಳನ್ನ ಶಿಫ್ಟ್ ಮಾಡಲಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ. ಬೆಂಕಿ ಕಾಣಿಸಿಕೊಂಡ ಕಟ್ಟಡದ ಎಲ್ಲಾ ರೋಗಿಗಳನ್ನ ಹೆಚ್ ಬ್ಲಾಕ್ ಗೆ ಶಿಫ್ಟ್ ಮಾಡಲಾಗಿದೆ. 14 ಪುರುಷರು, 5 ಮಹಿಳೆಯರು ಮತ್ತು 7 ಮಂದಿ ಮಕ್ಕಳು ಸೇರಿ ಒಟ್ಟು 26 ರೋಗಿಗಳನ್ನು ರವಾನೆ ಮಾಡಲಾಗಿದೆ.ಕರ್ತವ್ಯದಲ್ಲಿದ್ದ ವೈದ್ಯರ ಸಮಯ ಪ್ರಜ್ಞೆಯಿಂದ ಭಾರೀ ದುರಂತ ತಪ್ಪಿದೆ. ವೈದ್ಯೆ ದಿವ್ಯಾ ನೇತತ್ವದ ತಂಡ ರಾತ್ರಿ ವೇಳೆ ಕೆಲಸ ಮಾಡುತ್ತಿದ್ದರು.
ಮುಂಜಾನೆ 3.30ರ ಸುಮಾರಿಗೆ ಡಾ.ದಿವ್ಯಾ ಮೊದಲ ಮಹಡಿಗೆ ಹೋಗಿದ್ದರು. ಈ ವೇಳೆ ಸೆಮಿನರ್ ರೂಂನಲ್ಲಿ ಹೊಗೆ ಕಾಣಿಸಿಕೊಂಡಿತ್ತು. ಶಬ್ದ ಕೇಳಿ ಕೂಡಲೇ ಅಲರ್ಟ್ ಆದ ಅವರು ಮತ್ತು ಸಿಬ್ಬಂದಿ ಕೋಡ್ ರೆಡ್ ಅಲರ್ಟ್ ಮಾಡಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ತಕ್ಷಣ ಈ ಬಗ್ಗೆ ಸೂಪರಿಂಟೆಂಡೆಂಟ್ ಗಳಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಬೆಂಕಿ ನಂದಿಸುವ ಪ್ರಯತ್ನದ ಜೊತೆಗೆ ಹಿರಿಯ ಅಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ. ಅಲ್ಲದೇ ಅಗ್ನಿ ಶಾಮಕ ಸಿಬ್ಬಂದಿಗೆ ಹಾಗೂ ಪೊಲೀಸರಿಗೂ ತಿಳಿಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now