ಮಧುಗಿರಿ: ಪ್ರಿಯಕರನ ಜೊತೆಗೂಡಿ ಗಂಡನ ಕೊಲೆ ಮಾಡಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 50 ಸಾವಿರ ದಂಡ ವಿಧಿಸಿ ಇಲ್ಲಿನ 3ನೇ ಅಧಿಕ ಮತ್ತು ವಿಶೇಷ ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಯಶೋಧ ಕೋಂ ಆಂಜಿನಪ್ಪ (32) ಮತ್ತು ಮಂಜುನಾಥ ಬಿನ್ ನಾರಾಯಣಪ್ಪ ಜೀವಾವಧಿ ಶಿಕ್ಷೆಗೊಳಗಾದ ಆರೋಪಿಗಳು.
ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಮೃತ ಆಂಜಿನಪ್ಪ ಅವರ ಪತ್ನಿ ಯಶೋಧ ಮತ್ತು ಮಂಜುನಾಥ ಇಬ್ಬರಿಗೂ ಅನೈತಿಕ ಸಂಬಂಧವಿದ್ದು, ಈ ಬಗ್ಗೆ ಗಂಡನಿಗೆ ತಿಳಿದಿದ್ದರಿಂದ ಮೃತನು ಯಾವಾಗಲೂ ಹೆಂಡತಿಯ ಮೇಲೆ ಗಲಾಟೆ ಮಾಡಿ ಹೊಡೆಯುತ್ತಿದ್ದು, ಇದರಿಂದಾಗಿ ಬೇಸತ್ತ ಯಶೋಧ ತನ್ನ ಪ್ರಿಯಕರ ಮಂಜುನಾಥನೊಂದಿಗೆ ಸೇರಿಕೊಂಡು 2018 ಮೇ 12 ರಂದು ಮಧ್ಯರಾತ್ರಿ 1 ಗಂಟೆ ಸಮಯದಲ್ಲಿ ತನ್ನ ಗಂಡ ಆಂಜಿನಪ್ಪ ರನ್ನು ಕೊಲೆ ಮಾಡಿದ್ದು, ಈ ಬಗ್ಗೆ ಕೊಡಿಗೇನಹಳ್ಳಿ ಠಾಣಾ ಪ್ರಕರಣ ದಾಖಲಾಗಿತ್ತು.
ತುಮಕೂರಿನ 3ನೇ ಅಧಿಕ ಮತ್ತು ವಿಶೇಷ ಜಿಲ್ಲಾ ಸತ್ರ ನ್ಯಾಯಾಲಯ ದೋಷಾರೋಪ ಪತ್ರ ಸಲ್ಲಿಸಿದ್ದರು, ನ್ಯಾಯಾಲಯವು ವಿಚಾರಣೆ ನಡೆಸಿ ಸದರಿ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಮೇಲ್ಕಂಡಂತೆ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಜ್ಯೋತಿ ವಾದ ಮಂಡಿಸಿದ್ದರು.
ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು