
ಬೆಂಗಳೂರು: ಶುಶ್ರುತಿ ಸೌಹಾರ್ದ ಸಹಕಾರ ಬ್ಯಾಂಕ್ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನಲ್ಲಿ 10ಕ್ಕೂ ಹೆಚ್ಚು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದೆ.
ಶುಶ್ರುತಿ ಸೌಹಾರ್ದ ಸಹಕಾರ ಬ್ಯಾಂಕ್, ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಬೆಂಗಳೂರಿನಲ್ಲಿ ಇಂದು ಬೆಳ್ಳ ಬೆಳಗ್ಗೆ ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿ ನಡೆಸಿ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.ಈ ಹಿಂದೆ ಬೆಂಗಳೂರಿನ ಶುಶತಿ ಸೌಹಾರ್ದ ಸಹಕಾರ ಬ್ಯಾಂಕ್ ನಲ್ಲಿ ಹಗರಣ ನಡೆದಿರುವ ಆರೋಪ ಕೇಳಿ ಬಂದಿತ್ತು. ಕೋಟ್ಯಂತರ ರೂಪಾಯಿ ಠೇವಣಿ ಇಟ್ಟಿದ್ದ ಹಣ ವಾಪಸ್ ನೀಡದೆ ಮೋಸ ಮಾಡಲಾಗಿದೆ ಎಂಬ ಆರೋಪಿಸಿ ಬ್ಯಾಂಕ್ನ ಅಧ್ಯಕ್ಷ ಶ್ರೀನಿವಾಸಮೂರ್ತಿ ಸೇರಿದಂತೆ ನಿರ್ದೇಶಕರ ವಿರುದ್ಧ ರಾಜಗೋಪಾಲನಗರ ಹಾಗೂ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಗಳಲ್ಲಿ ಎಫ್ ಐ ಆರ್ ಗಳು ಕೂಡ ದಾಖಲಾಗಿದ್ದವು. ಬ್ಯಾಂಕ್ ಮೇಲೆ ಸಿಸಿಬಿ ದಾಳಿಯನ್ನೂ ನಡೆಸಿತ್ತು.
ಬ್ಯಾಂಕ್ ವಂಚನೆ- ಇಡಿ ಪರಿಶೀಲನೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


