--ಇಲ್ಲಿ ಜಾಹೀರಾತು--

ಕೊಲೆ ಪ್ರಕರಣದಲ್ಲಿ ಶಾಸಕರ ಕಾರು ಚಾಲಕ ಬಂಧನ

On: July 23, 2025 1:50 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಚಿತ್ರದುರ್ಗ: ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಗೋವಿಂದಪ್ಪ ಕಾರು ಚಾಲಕ ಯಶವಂತ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬಿ.ಜಿ.ಗೋವಿಂದಪ್ಪ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಕಾಂಗ್ರೆಸ್ ಶಾಸಕರಾಗಿದ್ದು, ಕೊಲೆ ಪ್ರಕರಣದಲ್ಲಿ ಶಾಸಕರ ಚಾಲಕ ಯಶವಂತನ್ನು ಇದೀಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಾರ್ಚ್ 17 ರಂದು ಜಾನಕಲ್ ಗ್ರಾಮದ ಪ್ರಸನ್ನ (45) ಎನ್ನುವ ವ್ಯಕ್ತಿ ನಾಪತ್ತೆಯಾಗಿದ್ದರು. ಮಾರ್ಚ್ 21ರಂದು ಈ ಕುರಿತು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಚಿಕ್ಕಮಗಳೂರು ಜಿಲ್ಲೆಯ ಲಿಂಗದಳ್ಳಿ ಬಳಿ ಪ್ರಸನ್ನ ಅವರ ಶವ ಪತ್ತೆಯಾಗಿತ್ತು. ಕೊಲೆ ಮಾಡಿ ಲಿಂಗದಳ್ಳಿ ಬಳಿಯ ಅರಣ್ಯದಲ್ಲಿ ಪ್ರಸನ್ನ ಶವ ಎಸದಿದ್ದರು.ಪ್ರಸನ್ನ ಪತ್ನಿ ಗಾಯತ್ರಿ ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ಸಂಬಂಧ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರಸನ್ನ ಪತ್ನಿ ಗಾಯತ್ರಿ, ಶಾಸಕ ಗೋವಿಂದಪ್ಪ ಕಾರು ಚಾಲಕ ಯಶವಂತ್, ಲೋಹಿತ್ ಹಾಗೂ ವೀರೇಶನ್ನು ಹೊಸದುರ್ಗ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಲಿಂಗದಳ್ಳಿ ಮತ್ತು ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now