
ಬೆಂಗಳೂರು: ಜೂನ್ 4ರಂದು ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಮುಂದಾಗಿದೆ.
ಜುಲೈ 17ರದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ಈ ದೊಡ್ಡ ಹೆಜ್ಜೆಯನ್ನಿಡಲು ತೀರ್ಮಾನಿಸಿತ್ತು.ಚಿನ್ನಸ್ವಾಮಿ ಕಾಲ್ತುಳಿತಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯೇ ಕಾರಣ ಅದರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ತಂಡ ಈ ವರದಿಯನ್ನು ಸಿದ್ದಪಡಿಸಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದರು.
ಅದರಂತೆ ಇದೀಗ ಕ್ರಿಮಿನಲ್ ಪ್ರಕರಣ ದಾಖಲಿಸಲು ಕ್ಯಾಬಿನೆಟ್ ನಲ್ಲಿ ತೀರ್ಮಾನಿಸಲಾಗಿದೆ.ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಾತ್ರವಲ್ಲದೇ ಕೆಎಸ್ ಸಿಎ ಹಾಗೂ ಡಿಎನ್ಎ ನೆಟ್ ವರ್ಕ್ ವಿರುದ್ಧವೂ ಸಹ ಕ್ರಿಮಿನಲ್ ಪ್ರಕರಣದ ದಾಖಲಾಗಲಿದೆ.
ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿಜಯೋತ್ಸವ ಕಾರ್ಯಕ್ರಮಕ್ಕೆ ಸಾವಿರಾರು ಅಭಿಮಾನಿಗಳು ಬಂದಿದ್ದಾ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದರು.
ಕಾಲ್ತುಳಿತ ಪ್ರಕರಣ- ಆರ್ ಸಿಬಿ ವಿರುದ್ಧ ಕ್ರಿಮಿನಲ್ ಕೇಸ್

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


