
ರಾಮನಗರ: ವಿಷ ಕುಡಿದು ಗ್ರಾಮ ಪಂಚಾಯತಿ ಸದಸ್ಯೆ ಪತಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂಬುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಗ್ರಾಮ ಪಂಚಾಯತಿ ಸದಸ್ಯೆ ತನ್ನ ಪತಿ ಹತ್ಯೆಗೆ ಸುಪಾರಿ ನೀಡಿರೋದು ವಿಚಾರಣೆಯಲ್ಲಿ ಬಹಿರಂಗವಾಗಿದೆ.
ಕಳೆದ ಜೂನ್ 24 ರಂದು ಚನ್ನಪಟ್ಟಣ ತಾಲೂಕಿನ ಮಾಕಳಿ ಗ್ರಾಪಂ ಸದಸ್ಯೆ ಚಂದ್ರಕಲಾ ಪತಿ ಲೋಕೇಶ್ (38) ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ಚನ್ನಪಟ್ಟಣ ತಾಲೂಕಿನ ಕೃಷ್ಣಾಪುರದೊಡ್ಡಿ ಗ್ರಾಮದಲ್ಲಿ ಲೋಕೇಶ್ ಮೃತದೇಹ ಪತ್ತೆಯಾಗಿತ್ತು. ಲೋಕೇಶ್ ಶವದ ಬಳಿ ವಿಷದ ಬಾಟಲಿ ಇಟ್ಟು ಸೂಸೈಡ್ ಎಂದು ಬಿಂಬಿಸಲಾಗಿತ್ತು. ಈ ಸಂಬಂಧ ಚನ್ನಪಟ್ಟಣ ತಾಲೂಕಿನ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪತ್ನಿ ಚಂದ್ರಕಲಾ ತಾನೇ ಸುದ್ದಿಗೋಷ್ಠಿ ನಡೆಸಿ ಪತಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಳು.
ಈ ಪ್ರಕರಣದ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಚಂದ್ರಕಲಾ ನಿಂದ ಮಹತ್ವದ ಸುಳಿವು ಸಿಕ್ಕಿದೆ. ಗ್ರಾ.ಪಂ ಸದಸ್ಯೆ ಚಂದ್ರಕಲಾ ಯೋಗೇಶ್ ಎಂಬಾತನ ಅನೈತಿಕ ಸಂಬಂಧ ಇಟ್ಟುಕೊಂಡಿದ್ದು ಬೆಳಕಿಗೆ ಬಂದಿದೆ. ಇದಕ್ಕೆ ಪತಿ ಅಡ್ಡಿಯಾಗಿದ್ದ ಹಿನ್ನೆಲೆ ಪ್ರಿಯಕರನ ಜೊತೆ ಸೇರಿ ಕೊಲೆಗೆ ಸ್ಕೆಚ್ ಹಾಕಿ, ಬೆಂಗಳೂರಿನ ನಾಲ್ವರು ಸುರಿ ಕಿಲ್ಲರ್ ಗೆ ಹಣ ಕೊಟ್ಟು ಲೋಕೇಶ್ ಹತ್ಯೆ ಮಾಡಿಸಿದ್ದಾಳೆ. ಸದ್ಯ ಗ್ರಾ.ಪಂ ಸದಸ್ಯೆ ಚಂದ್ರಕಲಾ ವಶಕ್ಕೆ ಪಡೆದು ವಿಚಾರಣೆ ನಡೆಸ್ತಿರೋ ಪೊಲೀಸರು, ಉಳಿದ ಆರೋಪಿಗಳ ಸೆರೆಗೆ ಬಲೆ ಬೀಸಿದ್ದಾರೆ.
ಪತಿ ಹತ್ಯಗೆ ಪತ್ನಿಯಿಂದಲೇ ಸುಪಾರಿ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


