--ಇಲ್ಲಿ ಜಾಹೀರಾತು--

ರಸಗೊಬ್ಬರ ಪೂರೈಕೆಯಲ್ಲಿ ರಾಜ್ಯ ಸರ್ಕಾರ ವಿಫಲ ಮಣ್ಣು ತಿಂದು ಪ್ರತಿಭಟನೆ ನಡೆಸಿದ ರೈತ

On: July 30, 2025 3:11 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಕೊಪ್ಪಳ: ರಸಗೊಬ್ಬರ ಪೂರೈಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು, ಎಲ್ಲಿಯೂ ರಸಗೊಬ್ಬರ ಸಿಗದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ರೈತನೊಬ್ಬ ಮಣ್ಣು ತಿಂದು ಪ್ರತಿಭಟನೆ ನಡೆಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಕುಣಿಕೇರಿ ತಾಂಡಾದ ಚಂದ್ರಪ್ಪ ಮತ್ತು ನೂರಾರು ರೈತರು ಯೂರಿಯಾ ಖರೀದಿಸಲು ಕೊಪ್ಪಳ ಎಪಿಎಂಸಿಯಲ್ಲಿ ಸಾಲುಗಟ್ಟಿ ನಿಂತಿದ್ದರು. ಶನಿವಾರ ಬೆಳಿಗ್ಗೆ 4 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ರಸಗೊಬ್ಬರಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದರು. ಆದರೆ, ಹಲವು ಗಂಟೆಗಳ ಕಾಲ ನಿಂತರೂ ಗೊಬ್ಬರ ಸಿಗದ ಕಾರಣ ಬರಿಗೈಯಲ್ಲಿ ವಾಪಸ್ಸಾಗಬೇಕಾಯಿತು. ಇದರಿಂದ ಸಿಟ್ಟಿಗೆದ್ದ ರೈತರು ಮಣ್ಣು ತಿಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರೈತ ಚಂದ್ರಪ್ಪ ಮಣ್ಣು ತಿಂದು ಪ್ರತಿಭಟನೆ ನಡೆಸುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಸರ್ಕಾರದ ವಿರುದ್ಧ ಹಲವು ಟೀಕೆಗಳು ವ್ಯಕ್ತವಾಗುತ್ತಿವೆ.
ಹೊಲಗಳಿಗೆ ರಸಗೊಬ್ಬರ ಹಾಕಲು ಇದು ಸೂಕ್ತ ಸಮಯವಾಗಿದೆ. ಆದರೆ, ಸರ್ಕಾರ ನೀಡುತ್ತಿಲ್ಲ. ಸೂಕ್ತ ಸಮಯಕ್ಕೆ ರಸಗೊಬ್ಬರ ಸಿಗದಿದ್ದರೆ ನಾವು ಮಣ್ಣು ತಿನ್ನಬೇಕಾಗುತ್ತದೆ. ಸರ್ಕಾರ ನಮಗೆ ರಸಗೊಬ್ಬರ ಒದಗಿಸಬೇಕೆಂದು ರೈತ ಚಂದ್ರಪ್ಪ ಅವರು ಹೇಳಿದ್ದಾರೆ,
ಕೊಪ್ಪಳ ಕೃಷಿ ಇಲಾಖೆಯ ಅಧಿಕಾರಿಯೊಬ್ಬರು ಮಾತನಾಡಿ, ರೈತರು ಯೂರಿಯಾವನ್ನು ಮಿತವಾಗಿ ಬಳಸಬೇಕು. ನಮ್ಮ್ಮಲ್ಲಿ ಸಂಗ್ರಹ ಮಿತವಾಗಿದ್ದು, ರೈತರು ಯೂರಿಯಾ ಬದಲಿಗೆ ನೈಸರ್ಗಿಕ ಗೊಬ್ಬರಗಳನ್ನು ಬಳಸುವುದನ್ನು ಪ್ರಾರಂಭಿಸಬೇಕು ಎಂದು ತಿಳಿಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now