ಹಾಸ್ಯ ನಟ ಸಂಜು ಬಸಯ್ಯ ಪತ್ನಿಗೆ ಅಶ್ಲೀಲ ಸಂದೇಶ
ಬೆಳಗಾವಿ: ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಸ್ಯ ನಟ ಸಂಜು ಬಸಯ್ಯ ಪತ್ನಿ ಪಲ್ಲವಿ ಅವರಿಗೆ ಯುವಕನೋರ್ವ ಅಶ್ಲೀಲ ಸಂದೇಶ ರವಾನಿಸಿ ಸಿಕ್ಕಿಬಿದ್ದಿರುವ ಘಟನೆ ವರದಿಯಾಗಿದೆ. ಕನ್ನಡ ಕಿರುತೆರೆಯಲ್ಲಿ ಹಾಸ್ಯ ಕಾರ್ಯಕ್ರಮಗಳ ಮೂಲಕ ಪ್ರಸಿದ್ಧಿಯಾಗಿರುವ ಹಾಸ್ಯಕಲಾವಿದ ಸಂಜು ಬಸಯ್ಯ ಅವರ ಪತ್ನಿ ಪಲ್ಲವಿ ಅವರಿಗೆ ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಮ್ ಮೂಲಕ ಯುವಕನೋರ್ವ ಅಶ್ಲೀಲ ಸಂದೇಶಗಳನ್ನು ರವಾನಿಸಿ ವಿಕೃತಿ ಮೆರೆದಿದ್ದಾನೆ. ಮೂಲಗಳ ಪ್ರಕಾರ ವಿಜಯನಗರ ಜಿಲ್ಲೆಯ ಪಿಯುಸಿ ಓದುವ ವಿದ್ಯಾರ್ಥಿಯೊಬ್ಬ ಪಲ್ಲವಿ ಅವರಿಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಾನೆ ಎನ್ನಲಾಗಿದೆ. … Read more






