ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಮಧುಗಿರಿ: ಪ್ರಿಯಕರನ ಜೊತೆಗೂಡಿ ಗಂಡನ ಕೊಲೆ ಮಾಡಿದ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 50 ಸಾವಿರ ದಂಡ ವಿಧಿಸಿ ಇಲ್ಲಿನ 3ನೇ ಅಧಿಕ ಮತ್ತು ವಿಶೇಷ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಯಶೋಧ ಕೋಂ ಆಂಜಿನಪ್ಪ (32) ಮತ್ತು ಮಂಜುನಾಥ ಬಿನ್ ನಾರಾಯಣಪ್ಪ ಜೀವಾವಧಿ ಶಿಕ್ಷೆಗೊಳಗಾದ ಆರೋಪಿಗಳು. ತಾಲೂಕಿನ ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಮೃತ ಆಂಜಿನಪ್ಪ ಅವರ ಪತ್ನಿ ಯಶೋಧ ಮತ್ತು ಮಂಜುನಾಥ ಇಬ್ಬರಿಗೂ ಅನೈತಿಕ ಸಂಬಂಧವಿದ್ದು, ಈ ಬಗ್ಗೆ … Read more

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಬರ್ನಿಂಗ್ ವಾರ್ಡ್ನಲ್ಲಿ ಮಂಗಳವಾರ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಐಸಿಯುನಲ್ಲಿದ್ದ 5 ಮಂದಿ ರೋಗಿಗಳು ಸೇರಿ ಒಟ್ಟು 26 ರೋಗಿಗಳನ್ನು ಸುರಕ್ಷಿತವಾಗಿ ತಕ್ಷಣವೇ ಬೇರೆ ವಾರ್ಡ್ಗೆ ಶಿಫ್ಟ್ ಮಾಡಲಾಗಿದೆ. ಆಸ್ಪತ್ರೆಯ ಬರ್ನಿಂಗ್ ವಾರ್ಡ್ನಲ್ಲಿ ಸ್ವಿಚ್ ಬೋರ್ಡ್ನಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಈ ಅಗ್ನಿ ಅವಘಟ ಸಂಭವಿಸಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣವೇ ರೋಗಿಗಳನ್ನು ಬೇರೆ ವಾರ್ಡ್ಗೆ ಸ್ಥಳಾಂತರಿಸಲಾಗಿದೆ. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ. … Read more

ಭೀಕರ ಅಪಾಘಾತ- ಐದು ಮಂದಿ ಸಾವು

ದೊಡ್ಡಬಳ್ಳಾಪುರ: ರಾಜ್ಯ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಐದು ಮಂದಿ ಮೃತಪಟ್ಟಿರುವ ದಾರುಣ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಗ್ಗೆ ನಡೆದಿದೆ. ಮೃತರನ್ನು ದೊಡ್ಡಬಳ್ಳಾಪುರದ ಕರೇನಹಳ್ಳಿಯ ನಿವಾಸಿಗಳಾದ ನಾರಾಯಣಪ್ಪ (70), ಪುರುಷೋತ್ತಮ (62), ಕಾಳಪ್ಪ (69), ಡಿ.ಎನ್.ಈಶ್ವರಪ್ಪ (75), ಕಾರು ಚಾಲಕ ನರಸಿಂಹಮೂರ್ತಿ (50) ಎಂದು ಗುರುತಿಸಲಾಗಿದೆ. ದೊಡ್ಡಬಳ್ಳಾಪುರದಿಂದ ಗೌರಿಬಿದನೂರು ಸಮೀಪದ ಮಂಚೇನಹಳ್ಳಿಯ ಭೀಮೇಶ್ವರ ಬೆಟ್ಟಕ್ಕೆ ಇನ್ನೋವಾ ಕಾರಿನಲ್ಲಿ 8 ಮಂದಿ ಹೋಗುತ್ತಿದ್ದರು. ದೊಡ್ಡಬಳ್ಳಾಪುರ-ಗೌರಿಬಿದನೂರು ರಸ್ತೆಯ ರಾಜ್ಯ ಹೆದ್ದಾರಿಯ … Read more