ವಿಜಯಲಕ್ಷ್ಮಿ ಅಸಭ್ಯ ಕಮೆಂಟ್- ದೂರು ದಾಖಲು

ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಬಗ್ಗೆ ಅಸಭ್ಯ ಕಮೆಂಟ್ ಮಾಡಲಾಗಿದ್ದು, ಈ ಸಂಬಂಧ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ. ದರ್ಶನ್ ಪತ್ನಿ ವಿಜಯಲಕ್ಷ್ಮಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯವಾಗಿ ಕಮೆಂಟ್ ಹಾಕಲಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದೆ. ಈ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸುದ್ದಿಗಾರರ ಜತೆ ಮಾತನಾಡಿ, ವಿಜಯಲಕ್ಷ್ಮಿ ದರ್ಶನ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯವಾಗಿ ಕಮೆಂಟ್ ಮಾಡಲಾಗಿದೆ. … Read more

ರಾಜಗೋಪಾಲ ನಗರದಲ್ಲಿ ಪುಂಡರ ಗುಂಪಿನಿಂದ ಕೃತ್ಯ ಇನ್ಸ್ಪೆಕ್ಟರ್ ಮೇಲೆ ಕಾರು ಹತ್ತಿಸಲು ಯತ್ನ

ಬೆಂಗಳೂರು: ರಾತ್ರಿಯ ವೇಳೆ ಕುಡಿದು ವಾಹನ ಚಲಾಯಿಸುವವರ ಸಂಖ್ಯೆ ಹೇರುತ್ತಲೇ ಇದೆ. ಇದಕ್ಕೆ ಕಡಿವಾಣ ಹಾಕಲು ಪೊಲೀಸರು ರಾತ್ರಿಯ ವೇಳೆ ಗಸ್ತು ಹೆಚ್ಚು ಮಾಡಿದ್ದಾರೆ. ಇದೀಗ ಕುಡಿದು ವಾಹನ ಚಲಾಯಿಸುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ ಸಬ್ ಇನ್ಸ್ ಪೆಕ್ಟರ್ ಮೇಲೆ ಪುಂಡರಗುಂಪು ಕಾರು ಹತ್ತಿಸೋಕೆ ಯತ್ನಿಸಿರೋ ಘಟನೆ ರಾಜಗೋಪಾಲನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುರುವಾರ ರಾತ್ರಿ ರಾಜಗೋಪಾಲನಗರ ಠಾಣಾ ವ್ಯಾಪ್ತಿಯ ಬಾಟಲ್ ಮಾರ್ಕ್ ಬಾರ್ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ನಾಲ್ಕೈದು ಜನರ ಪುಂಡರ ಗುಂಪೊಂದು ಡ್ರಿಂಕ್ಸ್ ಮಾಡುತ್ತಿದ್ದರು. ಇದನ್ನು … Read more

ಮಾಸ್ಕ್ ಮ್ಯಾನ್ ಚಿನ್ನಯ್ಯ ವಿರುದ್ಧ ದೂರು

ಧರ್ಮಸ್ಥಳ: ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಸೌಜನ್ಯ ಅವರ ತಾಯಿ ಮತ್ತೆ ಎಸ್ ಐಟಿ ವಶದಲ್ಲಿರುವ ಮಾಸ್ಕ್ ಮ್ಯಾನ್ ಚಿನ್ನಯ್ಯ ವಿರುದ್ಧ ಸೌಜನ್ಯ ತಾಯಿ ಕುಸುಮ ದೂರು ನೀಡಿದ್ದಾರೆ. ಗುರುವಾರ ಬೆಳ್ತಂಗಡಿಯ ಎಸ್ ಐಟಿ ಕಚೇರಿಗೆ ಆಗಮಿಸಿದ ಕುಸುಮಾ ಚಿನ್ನಯ್ಯ ಅವರ ಈ ಹಿಂದಿನ ಹೇಳಿಕೆಗಳನ್ನು ಆಧರಿಸಿ ದೂರು ಕೊಟ್ಟಿದ್ದಾರೆ. ಎಸ್ ಐಟಿ ತನಿಖೆ ಆರಂಭಕ್ಕೂ ಮುನ್ನ ಚಿನ್ನಯ್ಯ ಯೂಟ್ಯೂಬ್ ಗೆ ಸಂದರ್ಶನ ಕೊಡುವ ವೇಳೆ ತಾನು ಸೌಜನ್ಯ ಹೆಣವನ್ನು ಹೊತ್ತುಕೊಂಡು ಹೋಗಿದ್ದನ್ನು … Read more

ಶ್ರೀಗಂಧ ಕಳ್ಳ ಸಾಗಾಣೆ- ಆರೋಪಿ ಬಂಧನ

ಗುಬ್ಬಿ: ಗುಬ್ಬಿ ಪ್ರಾದೇಶಿಕ ವಲಯದ ಮಾರಶೆಟ್ಟಿಹಳ್ಳಿ ರಾಜ್ಯ ಮೀಸಲು ಅರಣ್ಯ ಪ್ರದೇಶದಲ್ಲಿ 02 ಶ್ರೀಗಂಧದ ಮರಗಳನ್ನು ಕಡಿದು ಕಳ್ಳ ಸಾಗಾಣಿಕೆ ಮಾಡಲು ಯತ್ನಿಸುತ್ತಿದ್ದವರನ್ನು ಅರಣ್ಯ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಆರೋಪಿಗಳು ತುಮಕೂರು ತಾಲ್ಲೂಕು, ಕೋರಾ ಹೋಬಳಿ ಗಂಗನಾಲ ಗ್ರಾಮ ವಾಸಿಗಳಾಗಿದ್ದು, 03 ಜನ ಆರೋಪಿಗಳ ಪೈಕಿ ಸುರೇಶ್.ಜಿ.ಎಸ್. ನನ್ನು ಅರಣ್ಯ ಸಿಬ್ಬಂದಿ ದಸ್ತಗಿರಿ ಮಾಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಉಳಿದ ಗುಂಡ ಹಾಗೂ ವೇಲು ಎಂಬುವವನು ನಾಪತ್ತೆಯಾಗಿದ್ದು ಸದರಿ ಅರೋಪಿಗಳನ್ನು ಸೆರೆಹಿಡಿಯಲು ಬಲೆ … Read more

ಜಮ್ಮು, ಕಾಶ್ಮೀರದಲ್ಲಿ ಮೇಘ ಸ್ಫೋಟ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಮತ್ತೆ ಮೇಘ ಸ್ಫೋಟವಾಗಿದ್ದು, ಭಾರೀ ಮಳೆಯಿಂದ ಮೂವರು ಸಾವನ್ನಪ್ಪಿದ್ದಾರೆ ಮತ್ತು ಎರಡು ಡಜನ್ ಗೂ ಹೆಚ್ಚು ಮನೆಗಳು ಹಾಗೂ ಸೇತುವೆಗಳು ಕೊಚ್ಚಿ ಹೋಗಿವೆ. ಬಹುತೇಕ ಎಲ್ಲಾ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನಗರ ಮತ್ತು ಇತರೆಡೆ ಹಲವಾರು ತಗ್ಗು ಪ್ರದೇಶಗಳು ಮತ್ತು ರಸ್ತೆಗಳು ಮುಳುಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಪ್ರಾಂತ್ಯದ ಹಲವು ಭಾಗಗಳಲ್ಲಿ ಪರಿಸ್ಥಿತಿ ಸಾಕಷ್ಟು ಗಂಭೀರವಾಗಿದೆ ಮತ್ತು ಪರಿಸ್ಥಿತಿಯನ್ನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡಲು ಶ್ರೀನಗರದಿಂದ … Read more

ಬರ್ಬರವಾಗಿ ಪ್ರಿಯತಮೆ ಕೊಂದ ಪ್ರಿಯಕರ

ಮೈಸೂರು: ಮೈಸೂರಿನ ಸಾಲಿಗ್ರಾಮನ ಭೇರ್ಯ ಗ್ರಾಮದ ಲಾಡ್ಜ್ ವೊಂದರಲ್ಲಿ 20 ವರ್ಷದ ವಿವಾಹಿತ ಮಹಿಳೆ ಬರ್ಬರವಾಗಿ ಹತ್ಯೆಯಾಗಿದ್ದು ಪ್ರಿಯಕರನೇ ಈ ದುಷ್ಕೃತ್ಯ ಎಸಗಿದ್ದಾನೆ. ಮೃತ ಮಹಿಳೆಯನ್ನು ಗೆರಸನಹಳ್ಳಿ ಗ್ರಾಮದ ರಕ್ಷಿತಾ ಎಂದು ಗುರುತಿಸಲಾಗಿದೆ. ಪ್ರಿಯಕರ ಸಿದ್ದರಾಜು ಎಂಬಾತ ರಕ್ಷಿತಾ ಬಾಯಿಗೆ ಜಿಲೆಟಿನ್ ಕಡ್ಡಿ ಇಟ್ಟು ಸ್ಫೋಟಿಸಿ ಕೊಂದಿರುವುದಾಗಿ ತಿಳಿದು ಬಂದಿದೆ. ಪ್ರಕರಣ ಸಂಬಂಧ ಸಾಲಿಗ್ರಾಮದ ಪೊಲೀಸರು ಸಿದ್ದರಾಜುನನ್ನು ಬಂಧಿಸಿದ್ದಾರೆ. ಕೇರಳ ಮೂಲದ ಯುವಕನನ್ನು ರಕ್ಷಿತಾ ಮದುವೆಯಾಗಿದ್ದರೂ ಸಿದ್ದರಾಜು ಜೊತೆ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಕಪ್ಪಡಿ ಕ್ಷೇತ್ರಕ್ಕೆ … Read more

ಅಕ್ರಮ ಗೊಬ್ಬರ ಮಾರಾಟ- 5 ಅಂಗಡಿ ಲೈಸನ್ಸ್ ರದ್ದು

ಬಳ್ಳಾರಿ: ಯೂರಿಯಾ ಗೊಬ್ಬರ ಅಕ್ರಮ ಪ್ರಕ್ರಣಕ್ಕೆ ಸಂಬಂಧಿಸಿದಂತೆ 5 ಗೊಬ್ಬರ ಮಾರಾಟ ಅಂಗಡಿಗಳ ಲೈಸನ್ಸ್ ರದ್ದು ಮಾಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಯೂರಿಯಾ ಗೊಬ್ಬರ ದಾಸ್ತಾನು ಇದ್ದರೂ ಇಲ್ಲ ಎಂದು ಹೇಳಿ ಅವುಗಳನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ಕಂಪ್ಲಿ ತಾಲೂಕಿನ ಐದು ರಸಗೊಬ್ಬರ ಮತ್ತು ಪರಿಕರ ಮಾರಾಟ ಅಂಗಡಿಗಳ ಪರವಾನಗಿ ರದ್ದು ಮಾಡಲಾಗಿದೆ.ಈ ಬಗ್ಗೆ ಕಷಿ ಇಲಾಖೆ ಜಂಟಿ ನಿರ್ದೇಶಕ ಸೋಮಸುಂದರ್ ಮಾಹಿತಿ ನೀಡಿದ್ದಾರೆ. ಕುರಗೋಡಿನಲ್ಲಿ 54 ಚೀಲ ಯೂರಿಯಾವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ರೈತ … Read more

ಹಣಕ್ಕೆ ಬೇಡಿಕೆ- ಯೂಟ್ಯೂಬರ್ ಬಂಧನ

ಕುಣಿಗಲ್: ಸ್ವಾಮೀಜಿ ಒಬ್ಬರಿಗೆ ಬೆದರಿಕೆ ಹಾಕಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬ್ ಚಾನಲ್ ಪ್ರತಿನಿಧಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ತಾಲೂಕಿನ ಹುಲಿಯೂರು ದುರ್ಗ ಹೋಬಳಿಯ ಹಂಗರಹಳ್ಳಿ ಗ್ರಾಮದಲ್ಲಿನ ವಿದ್ಯಾ ಚೌಡೇಶ್ವರಿ ಮಠದ ಬಾಲ ಮಂಜುನಾಥ ಸ್ವಾಮಿ ಎಂಬುವರಿಗೆ ತುಮಕೂರಿನ ಯುಟ್ಯೂಬ್ ಚಾನೆಲ್ ಒಂದರ ಪ್ರತಿನಿಧಿ ಹಣಕ್ಕಾಗಿ ಬೇಡಿಕೆ ಇಟ್ಟು ಕಳೆದ ಕೆಲ ತಿಂಗಳದಿಂದ ಪೀಡಿಸುತ್ತಿದ್ದರು ಎನ್ನಲಾಗಿದೆ. ಮುಂದುವರೆದು ಮಠದ ಕೆಲ ಅಭಿಮಾನಿಗಳಿಗೆ ಕರೆ ಮಾಡಿ ಮಠಕ್ಕೆ ಸಂಬಂಧಿಸಿದಂತ ಹಲವು … Read more

ದರ್ಶನ್ ಗ್ಯಾಂಗ್ ನ 5 ಆರೋಪಿಗಳಿಗೆ ಸಂಕಷ್ಟ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನ ಸುಪ್ರೀಂ ಕೋರ್ಟ್ ರದ್ದು ಮಾಡಿದ ನಂತರ 7 ಜನ ಆರೋಪಿಗಳು ಮತ್ತೆ ಜೈಲು ಪಾಲಾಗಿದ್ದಾರೆ, ಆದರೆ ಇದೀಗ ಜಾಮೀನಿನ ಮೇಲೆ ಹೊರಗೆ ಇರುವ ಇನ್ನೂ 5 ಆರೋಪಿಗಳಿಗೆ ಸಂಕಷ್ಟ ಆರಂಭವಾಗಿದೆ. ಕಳೆದ ಆಗಸ್ಟ್ 14ರಂದು ಸುಪ್ರೀಂಕೋರ್ಟ್ 7 ಜನರ ಜಾಮೀನು ರದ್ದು ಮಾಡಿದ ಬೆನ್ನಲ್ಲೆ ಕರ್ನಾಟಕ ಪೊಲೀಸರು ಮತ್ತೆ 5 ಆರೋಪಿಗಳ ಜಾಮೀನು ರದ್ದು ಮಾಡಬೇಕು ಎಂದು ಸರ್ಕಾರಕ್ಕೆ ಪೂರ್ವಾನುಮತಿ ಕೇಳಿ ಮನವಿ ಸಲ್ಲಿಸಿದ್ದರು. … Read more

ಪೊಲೀಸ್ ಠಾಣೆಯ ಶೌಚದಲ್ಲಿ ಕಳ್ಳನ ಶವ ಪತ್ತೆ

ರಾಮನಗರ: ದೇವಾಲಯಗಳು ಮತ್ತು ಅಂಗನವಾಡಿಯಲ್ಲಿ ಕಳ್ಳತನ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 59 ವರ್ಷದ ಕಳ್ಳನೊಬ್ಬ ಬುಧವಾರ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯ ಶೌಚಾಲಯದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮಂಡ್ಯದ ಮದ್ದೂರಿನ ದುಂಡನಹಳ್ಳಿ ಮೂಲದ ರಮೇಶ್ ಎಂದು ಗುರುತಿಸಲಾಗಿದೆ. ಶೌಚಾಲಯದಲ್ಲಿ ರಮೇಶ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಈತ ತನ್ನ ಪಂಚೆ ಬಳಸಿ ಈ ಕೃತ್ಯ ಎಸಗಿದ್ದಾನೆ. ಮತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ … Read more