
ಬೆಂಗಳೂರು: ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಪ್ರತಿಷ್ಠಿತ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರೊಬ್ಬರ ಪುತ್ರನನ್ನು ಅಪಹರಿಸಿ ಕೊಲೆ ಮಾಡಲಾಗಿದೆ.
ಅರಕೆರೆಯ ವಿಜಯ ಬ್ಯಾಂಕ್ ಕಾಲೋನಿಯ ಜೆ.ಸಿ.ಅಶ್ವತ್ಥ್ ಅವರ ಪುತ್ರ ನಿಶ್ಚಿತ್ (13) ಹತ್ಯೆಯಾದ ಬಾಲಕ.13 ವರ್ಷದ ಬಾಲಕ ನಿಶ್ಚಿತ್ ನನ್ನು ಟ್ಯೂಷನ್ ಗೆ ಹೋಗಿ ಬರುವ ವೇಳೆ ಕಿಡ್ನಾಪ್ ಮಾಡಿ ಬರ್ಬರವಾಗಿ ಕೊಲೆ ಮಾಡಲಾಗಿದೆ.ಟ್ಯೂಷನ್ ಗೆ ಹೋಗಿದ್ದ ಬಾಲಕ ಮನೆಗೆ ಬಾರದಿದ್ದಾಗ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಠಾಣೆ ಡಿಸಿಪಿ ನಾರಾಯಣ್ ಸೇರಿದಂತೆ ಹಿರಿಯ ಅಧಿಕಾರಿಗಳು ಪರಿಶೀಲಿಸಿದ್ದಾರೆ.
ಪೋಷಕರಿಗೆ ಕರೆ ಮಾಡಿದ್ದ ಅಪಪಹರಣಕಾರರು 5 ಲಕ್ಷ ಹಣಕ್ಕೆ ಒತ್ತಾಯಿಸಿದ್ದರು. ಆದರೆ, ಪೊಲೀಸರು ಆರೋಪಿಗಳ ಸುಳಿವು ಪತ್ತೆ ಹಚ್ಚುವ ವೇಳೆಗೆ ಕೊಲೆ ಮಾಡಿದ್ದಾರೆ. ನಿಶ್ಚಿತ್ ಮನೆಯ ಸಮೀಪ ಟ್ಯೂಷನ್ ಗೆ ಹೋಗಿ ಮರಳುವಾಗ ಗುರುವಾರ ಸಂಜೆ 7.30ಕ್ಕೆ ಅಪಹರಿಸಿದ ದುಷ್ಕರ್ಮಿಗಳು ಬನ್ನೇರುಘಟ್ಟ ರಸ್ತೆಯ ಸಮೀಪ ಕತ್ತು ಸೀಳಿ ಕೊಲೆ ಮಾಡಿ ಶವಕ್ಕೆ ಬೆಂಕಿ ಹಚ್ಚಿದ್ದಾರೆ. ಆನೇಕಲ್ ತಾಲೂಕು ವ್ಯಾಪ್ತಿಯ ಕಗ್ಗಲೀಪುರ ರಸ್ತೆಯ ನಿರ್ಜನ ಪ್ರದೇಶದಲ್ಲಿ ಶವ ಪತ್ತೆಯಾಗಿತ್ತು. ಮನೆಯಲ್ಲಿ ಕೆಲಸ ಮಾಡುತ್ತಿದ್ದ ಚಾಲಕನೇ ಕೃತ್ಯದ ಹಿಂದಿದ್ದಾನೆ ಎನ್ನಲಾಗಿದೆ.
ಸುಟ್ಟ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದ್ದು, ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.ನಗರದ ಆಗ್ನೇಯ ಭಾಗದಲ್ಲಿ 13 ವರ್ಷದ ಬಾಲಕನನ್ನು ಅಪರಿಚಿತ ಶಂಕಿತರು ಅಪಹರಿಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಬನ್ನೇರುಘಟ್ಟ ರಸ್ತೆಯ ಬಳಿ ನಗರದ ಹೊರವಲಯದಲ್ಲಿ ಮೃತನ ಶವವನ್ನು ಛಿದ್ರಗೊಳಿಸಿ ಸುಟ್ಟು ಹಾಕಲಾಗಿದೆ. ಪೊಲೀಸರ ಪ್ರಕಾರ, ಅರೆಕೆರೆಯ ನಿವಾಸಿಗಳಾದ ಮೃತನ ಪೋಷಕರು ಜುಲೈ 30 ರಂದು ರಾತ್ರಿ 10.30 ಕ್ಕೆ ತಮ್ಮ ಮಗ ಕಾಣೆಯಾಗಿದ್ದಾನೆ ಎಂದು ದೂರು ದಾಖಲಿಸಿದ್ದರು.
ಅಪಹರಿಸಿ ಉಪನ್ಯಾಸಕನ ಪುತ್ರನ ಕೊಲೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


