
ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾಗೆ ಅವಹೇಳನಕಾರಿ ಸಂದೇಶ ಕಳುಹಿಸಿದ್ದ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ, ಚಿತ್ರದುರ್ಗ ಮೂಲದ ಮೂವರನ್ನು ಬಂಧಿಸಲಾಗಿದೆ. ಈ ಮೂವರು ಅಶ್ಲೀಲ ಕಮೆಂಟ್ ಹಾಕಿ ಸವಾಲ್ ಹಾಕಿದ್ದರು.
ನಟಿ ರಮ್ಯಾ ದೂರು ನೀಡುವ ವೇಳೆ 43 ಅಕೌಂಟ್ ಗಳ ಹೆಸರು ಉಲ್ಲೇಖಿಸಿ ದೂರು ದಾಖಲಿಸಿದ್ದರು. ಐಪಿ ಅಡ್ರೆಸ್ ಆಧರಿಸಿ ಪ್ರಕರಣದಲ್ಲಿ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಎಫ್ ಐಆರ್ ದಾಖಲಾದ ತಕ್ಷಣ ಬಹುತೇತ ಅಕೌಂಟ್ ಗಳು ಡಿಲೀಟ್ ಆಗಿದ್ದವು. ಅಷ್ಟರಲ್ಲಿ ಪೊಲೀಸರು ಸಂಬಂಧಪಟ್ಟ ಸಂಸ್ಥೆಗಳಿಗೆ ಪತ್ರ ಬರೆದು ಐಪಿ ಅಡ್ರೆಸ್ ಗಳು ,ಅಕೌಂಟ್ ಡಿಟೇಲ್ಸ್ ಕೊಡುವಂತೆ ಮನವಿ ಮಾಡಿದ್ದರು.ಇದರಿಂದಾಗಿ ಪ್ರಕರಣಕ್ಕೆ ಸಂಬಂಧಿಸಿದಂತೆ 40 ಮಂದಿಯ ಚಹರೆ ಗುರುತು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ರಮ್ಯಾಗೆ ಅವಹೇಳನ- ಮೂವರ ಬಂಧ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


