
ಬೆಂಗಳೂರು: 7ನೇ ತರಗತಿಯ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟುವಿನಲ್ಲಿ ನಡೆದಿದೆ.
ಮೃತ ಬಾಲಕನನ್ನು 14 ವರ್ಷದ ಗಾಂಧಾರ್ ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಸದ್ಯ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಗಾಂಧಾರ್, ಗಿಟಾರ್ ತಂತಿ ಕಿತ್ತು ಅದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸೋಮವಾರ ಬೆಳಗ್ಗೆ ತಂದೆ ಬಾಲಕನ ರೂಮ್ಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.
ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


