--ಇಲ್ಲಿ ಜಾಹೀರಾತು--

ಸಂಸದ ಸುಧಾಕರ್ ಹೆಸರು ಬರೆದಿಟ್ಟು ಚಾಲಕ ಆತ್ಮಹತ್ಯೆ

On: August 7, 2025 2:50 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಚಿಕ್ಕಬಳ್ಳಾಪುರ: ಮಾಜಿ ಸಚಿವ ಬಿಜೆಪಿ ಸಂಸದ ಸುಧಾಕರ್ ಹೆಸರನ್ನು ಡೆತ್ ನೋಟ್ ನಲ್ಲಿ ಉಲ್ಲೇಖಿಸಿ ಕಾರು ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಿಕ್ಕಬಳ್ಳಾಪುರದ ಬಾಪೂಜಿನಗರದ ನಿವಾಸಿ ಬಾಬು (32) ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಿಲ್ಲಾ ಪಂಚಾಯತಿ ಸಿಇಒ ಕಾರು ಚಾಲಕನಾಗಿದ್ದ ಬಾಬು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜಿಲ್ಲಾ ಪಂಚಾಯತಿ ಸಭಾಂಗಣದ ಹಿಂಭಾಗದಲ್ಲಿರುವ ಮರದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನನ್ನ ಸಾವಿಗೆ ಸಂಸದ ಡಾ.ಕೆ.ಸುಧಾಕರ್ ಕಾರಣ. ಚಿಕ್ಕಕಾಡಿಗಾನಹಳ್ಳಿ ನಾಗೇಶ್ ಸರ್ಕಾರಿ ಕೆಲಸ ಕೊಡಿಸುವುದಾಗಿ ಹೇಳಿ 25 ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಜಿಲ್ಲಾ ಪಂಚಾಯತಿ ಲೆಕ್ಕ ಸಹಾಯಕರ ವಿರುದ್ದವೂ ಡೆತ್ ನೋಟ್ನಲ್ಲಿ ಬಾಬು ಹಲವು ಆರೋಪ ಮಾಡಿದ್ದಾರೆ. ಸ್ಥಳಕ್ಕೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ಇನ್ನೂ ಚಾಲಕ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದಲ್ಲಿ ರಾಜಕೀಯ ಒತ್ತಡವಿಲ್ಲದೆ ತನಿಖೆ ಆಗಲಿದೆ ಎಂದು ಚಿಕ್ಕಬಳ್ಳಾಪುರ ಉಸ್ತುವಾರಿ ಸಚಿವ ಎಂ.ಸಿ ಸುಧಾಕರ್ ತಿಳಿಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now