
ತಿಪಟೂರು: ಕೆಎಸ್ ಆರ್ ಟಿಸಿ ಬಸ್ ಗೆ ಬೈಕ್ ಡಿಕ್ಕಿ ಹೊಡೆದು 40 ವರ್ಷದ ನಾಗರಾಜು ಮೃತಪಟ್ಟಿದ್ದಾರೆ.
ನಗರದ ಕೆಎಸ್ ಆರ್ ಟಿಸಿ ಬಸ್ ಸ್ಟ್ಯಾಂಡ್ ಮುಂಬಾಗ ಶಿವಮೊಗ್ಗ ಡಿಪೋ ವಿಭಾಗದ ಬಸ್ ಬರುವಾಗ ಹಾಲುಕುರ್ಕೆ ವಾಸಿ ಪ್ರದೀಪ್ ಮತ್ತು ನಾಗರಾಜು ಬೈಕ್ ನಲ್ಲಿ ಬರುತ್ತಿದ್ದಾಗ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನ ಹಿಂಬದಿ ಕುಳಿತಿದ್ದ ನಾಗರಾಜು ಸ್ಥಳದಲ್ಲೇ ಮೃತಪಟ್ಟಿದ್ದು ಪ್ರದೀಪ್ ಗಾಯಗೊಂಡು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳಕ್ಕೆ ತಿಪಟೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಲಾಗಿದೆ. ನಗರ ಪ್ರದೇಶಗಳಲ್ಲಿ ಬಸ್ ನಿಲ್ದಾಣದಲ್ಲಿ ಕಡಿಮೆ ವೇಗದಲ್ಲಿ ಚಲಿಸಬೇಕು ಎಂಬ ಆದೇಶವಿದ್ದರೂ ಚಾಲಕನ ಅತಿ ವೇಗ ಅಜಾಗರೂಕತೆ ಅಪಘಾತಕ್ಕೆ ಕಾರಣವಾಯಿತು ಎಂದು ಸ್ಥಳೀಯರು ತಿಳಿಸಿದರು.
ಕೆಎಸ್ಆರ್ಟಿಸಿ ಬಸ್ ಡಿಕ್ಕಿ- ವ್ಯಕ್ತಿ ಸಾವು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


