--ಇಲ್ಲಿ ಜಾಹೀರಾತು--

ಸಿಲಿಂಡರ್ ಸ್ಫೋಟ- ಓರ್ವ ಬಾಲಕ ಬಲಿ

On: August 15, 2025 2:05 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ವಿಲ್ಸನ್ ಗಾರ್ಡನ್ ನ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಬಾಲಕ ಜೀವ ಕಳೆದುಕೊಂಡಿದ್ದು 9 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪ್ರಾಣ ಕಳೆದುಕೊಂಡ ಬಾಲಕನ ಕುಟುಂಬಕ್ಕೆ 5 ಲಕ್ಷ ರೂಪಾಯಿ ನೀಡಲಾಗುವುದು. ಗಾಯಾಳುಗಳ ಖರ್ಚು ಸರ್ಕಾರ ನೋಡಿಕೊಳ್ಳುತ್ತದೆ. ಘಟನೆಯಲ್ಲಿ ಒಟ್ಟು 13 ಮನೆಗಳಿಗೆ ಹಾನಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಮಾತನಾಡಿದ ಸಿಎಂ, ಮೇಲ್ನೋಟಕ್ಕೆ ಇದು ಸಿಲಿಂಡರ್ ಸ್ಫೋಟದಂತೆ ಕಾಣಿಸುತ್ತದೆ. ಕಸ್ತೂರಮ್ಮ ಎನ್ನುವರ ಮನೆಯಲ್ಲಿ ಸ್ಫೋಟವಾಗಿದ್ದು ಅವರು ಕೂಡ ಗಾಯಗೊಂಡಿದ್ದಾರೆ. ಓರ್ವ ಬಾಲಕ ಕಣ್ಮುಚ್ಚಿದ್ದಾನೆ. ಬಾಲಕನ ಕುಟುಂಬಕ್ಕೆ 5 ಲಕ್ಷ ರೂಪಾಯಿ ಪರಿಹಾರ ರೀತಿ ನೀಡಲಾಗುವುದು. ಇನ್ನು ಗಾಯಾಳುಗಳ ಖರ್ಚು ಸರ್ಕಾರವೇ ಭರಿಸುತ್ತದೆ ಎಂದು ಸಿಎಂ ಹೇಳಿದ್ದಾರೆ.
ಇನ್ನು ಈ ಮನೆ ಕಸ್ತೂರಮ್ಮ ಎನ್ನುವರ ಮನೆಯಾಗಿದೆ. ಇವರು ಕೂಡ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದು ಅವರನ್ನು ನಗರದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಫಾತೀಮಾ (8), ಸರಸಮ್ಮ (50), ಕಯಾಲ (8) ಶಬ್ರೀನಾ ಬಾನು (35) ಸಂಜಯ್ ಗಾಂಧಿ ಆಸ್ಪತ್ರೆ, ಮೃತ ಬಾಲಕ ಮುಬಾರಕ್ (10) ಮೃತದೇಹ ಸಂಜಯ್ ಗಾಂಧಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸುಬ್ರಹ್ಮಣಿ (62) ಅಗಡಿ ಆಸ್ಪತ್ರೆ ಹಾಗೂ ಶೇಕ್ ನಜೀಬ್ ಉಲ್ಲಾ (37) ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಆಡುಗೋಡಿ ಪೊಲೀಸ್ ಮತ್ತು ದಕ್ಷಿಣ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೊದಲ ಮಹಡಿಯಲ್ಲಿದ್ದ ಕಸ್ತೂರಮ್ಮ, 8 ವರ್ಷದ ಬಾಲಕಿ, ಸರಸಮ್ಮ ಎನ್ನುವವರಿಗೆ ಗಂಭೀರ ಗಾಯಗಳಾಗಿವೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now