
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನ ಸುಪ್ರೀಂ ಕೋರ್ಟ್ ರದ್ದು ಮಾಡಿದ ನಂತರ 7 ಜನ ಆರೋಪಿಗಳು ಮತ್ತೆ ಜೈಲು ಪಾಲಾಗಿದ್ದಾರೆ, ಆದರೆ ಇದೀಗ ಜಾಮೀನಿನ ಮೇಲೆ ಹೊರಗೆ ಇರುವ ಇನ್ನೂ 5 ಆರೋಪಿಗಳಿಗೆ ಸಂಕಷ್ಟ ಆರಂಭವಾಗಿದೆ.
ಕಳೆದ ಆಗಸ್ಟ್ 14ರಂದು ಸುಪ್ರೀಂಕೋರ್ಟ್ 7 ಜನರ ಜಾಮೀನು ರದ್ದು ಮಾಡಿದ ಬೆನ್ನಲ್ಲೆ ಕರ್ನಾಟಕ ಪೊಲೀಸರು ಮತ್ತೆ 5 ಆರೋಪಿಗಳ ಜಾಮೀನು ರದ್ದು ಮಾಡಬೇಕು ಎಂದು ಸರ್ಕಾರಕ್ಕೆ ಪೂರ್ವಾನುಮತಿ ಕೇಳಿ ಮನವಿ ಸಲ್ಲಿಸಿದ್ದರು. ಪೊಲೀಸರ ಮನವಿಯನ್ನ ಸರ್ಕಾರ ಪರಿಗಣಿಸಿದ್ದು, ಇದೀಗ ಅನುಮತಿ ನೀಡಿದೆ. ಹಾಗಾಗಿ ಸೆಷನ್ ಕೋರ್ಟ್ ನಿಂದ ಜಾಮೀನು ಪಡೆದುಕೊಂಡಿದ್ದ ಪವನ್, ರಾಘವೇಂದ್ರ, ವಿನಯ್, ಧನ್ರಾಜ್ ಮತ್ತು ನಂದೀಶ್ ಜಾಮೀನು ರದ್ದು ಮಾಡುವಂತೆ ಪೊಲೀಸರು ಶುಕ್ರವಾರ ಹೈಕೋರ್ಟ್ಗೆ ಅರ್ಜಿ ಹಾಕಲಿದ್ದಾರೆ ಎನ್ನಲಾಗಿದೆ.
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಗೆ ಇದೀಗ ಮತ್ತೊಂದು ಆಘಾತ ಎದುರಾಗಿದೆ. ಈ ಪ್ರಕರಣವನ್ನು ಫಾಸ್ಟ್ ಟ್ರ್ಯಾಕ್ ಕೋರ್ಟ್ಗೆ ನೀಡಲು ಖಾಕಿ ಸಿದ್ಧತೆ ಮಾಡಿಕೊಂಡಿದೆ ಎನ್ನಲಾಗುತ್ತಿದೆ.ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತ್ವರಿತಗತಿಯಲ್ಲಿ ಕೇಸ್ ಇತ್ಯರ್ಥಕ್ಕೆ ಸೂಚನೆ ನೀಡಿದೆ. ಇದೇ ಕಾರಣಕ್ಕೆ ಫಾಸ್ಟ್ ಟ್ರ್ಯಾಕ್ ಕೋರ್ಟ್ ರಚಿಸುವಂತೆ ಸರ್ಕಾರಕ್ಕೆ ಮನವಿ ಮಾಡಲು ಪೊಲೀಸರು ಮುಂದಾಗಿದ್ದಾರೆ ಎನ್ನುವ ಮಾಹಿತಿ ಇದೆ.6 ತಿಂಗಳ ಒಳಗೆ ಟ್ರಯಲ್ ಮುಗಿಸಿ ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡುವುದಲ್ಲದೇ ಆರೋಪಿಗಳಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಪೊಲೀಸರು ಈ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕಾನೂನು ಇಲಾಖೆ ಜೊತೆಗೆ ಚರ್ಚಿಸಿ ಸರ್ಕಾರಕ್ಕೆ ಮನವಿ ಮಾಡುವ ಸಾಧ್ಯತೆಗಳಿಗೆ ಎಂದು ಉನ್ನತ ಮೂಲಗಳು ತಿಳಿಸಿವೆ.
ದರ್ಶನ್ ಗ್ಯಾಂಗ್ ನ 5 ಆರೋಪಿಗಳಿಗೆ ಸಂಕಷ್ಟ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


