--ಇಲ್ಲಿ ಜಾಹೀರಾತು--

ವಿಜಯಲಕ್ಷ್ಮಿ ಅಸಭ್ಯ ಕಮೆಂಟ್- ದೂರು ದಾಖಲು

On: August 29, 2025 2:58 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಬಗ್ಗೆ ಅಸಭ್ಯ ಕಮೆಂಟ್ ಮಾಡಲಾಗಿದ್ದು, ಈ ಸಂಬಂಧ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ.
ದರ್ಶನ್ ಪತ್ನಿ ವಿಜಯಲಕ್ಷ್ಮಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯವಾಗಿ ಕಮೆಂಟ್ ಹಾಕಲಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗ ಬೆಂಗಳೂರು ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದೆ.
ಈ ಬಗ್ಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸುದ್ದಿಗಾರರ ಜತೆ ಮಾತನಾಡಿ, ವಿಜಯಲಕ್ಷ್ಮಿ ದರ್ಶನ್ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯವಾಗಿ ಕಮೆಂಟ್ ಮಾಡಲಾಗಿದೆ. ಈ ಬಗ್ಗೆ ಮಹಿಳಾ ಆಯೋಗಕ್ಕೆ ದೂರು ಬಂದಿದೆ. ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಕಿಡಿಗೇಡಿಗಳು ಹೇಗೆ ಅಸಭ್ಯ ಸಂದೇಶಗಳನ್ನು ರವಾನಿಸಿದ್ದರೋ ಅದೇ ರೀತಿ ವಿಜಯಲಕ್ಷ್ಮಿ ಅವರಿಗೂ ಅಸಭ್ಯವಾಗಿ, ಕೆಟ್ಟದಾಗಿ ಕಮೆಂಟ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಿ 15 ದಿನಗಳಲ್ಲಿ ವರದಿ ನೀಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now