ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಬೆಂಗಳೂರು: 7ನೇ ತರಗತಿಯ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನ ಚೆನ್ನಮ್ಮನ ಕೆರೆ ಅಚ್ಚುಕಟ್ಟುವಿನಲ್ಲಿ ನಡೆದಿದೆ. ಮೃತ ಬಾಲಕನನ್ನು 14 ವರ್ಷದ ಗಾಂಧಾರ್ ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ, ಸದ್ಯ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಂಧಾರ್, ಗಿಟಾರ್ ತಂತಿ ಕಿತ್ತು ಅದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸೋಮವಾರ ಬೆಳಗ್ಗೆ ತಂದೆ ಬಾಲಕನ ರೂಮ್ಗೆ ಹೋಗಿ ನೋಡಿದಾಗ ಘಟನೆ … Read more

19 ನವಿಲು ನಿಗೂಢ ಸಾವು- ಅನುಮಾನ

ಮಧುಗಿರಿ: ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಹನುಮಂತಪುರ ಗ್ರಾಮದ ಕೆರೆಯ ಕೋಡಿ ನೀರು ಹರಿಯುವ ಹಳ್ಳದ ಪಕ್ಕದ ಜಮೀನಿನಲ್ಲಿ 19 ನವಿಲು ಸಾವನ್ನಪ್ಪಿರುವ ಘಟನೆ ನಡೆದಿದ್ದು, ಅನುಮಾನಕ್ಕೆ ಕಾರಣವಾಗಿದೆ. ಜಮೀನು ಒಂದರಲ್ಲಿ ರಾತ್ರಿ ಸಮಯದಲ್ಲಿ ಈ ದುರ್ಘಟನೆ ನಡೆದಿದ್ದು, ಜಮೀನಿಗೆ ತೆರಳಿದ್ದ ಮಾಲೀಕರು ಜಮೀನಿನ ಅಲ್ಲಲ್ಲಿ ಸತ್ತು ಬಿದ್ದ ನವಿಲುಗಳನ್ನು ಕಂಡು ಸ್ಥಳೀಯ ಪೊಲೀಸರಿಗೂ ಹಾಗೂ ವಲಯದ ಅರಣ್ಯಾಧಿಕಾರಿಗಳಿಗೂ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಅರಣ್ಯಾಧಿಕಾರಿಗಳು ತಾಲ್ಲೂಕು ಪಶು ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದು ಪರಿಶೀಲಿಸಿ 5 … Read more

ರಮ್ಯಾಗೆ ಅವಹೇಳನ- ಮೂವರ ಬಂಧ

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಟಿ ರಮ್ಯಾಗೆ ಅವಹೇಳನಕಾರಿ ಸಂದೇಶ ಕಳುಹಿಸಿದ್ದ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೋಲಾರ, ಚಿತ್ರದುರ್ಗ ಮೂಲದ ಮೂವರನ್ನು ಬಂಧಿಸಲಾಗಿದೆ. ಈ ಮೂವರು ಅಶ್ಲೀಲ ಕಮೆಂಟ್ ಹಾಕಿ ಸವಾಲ್ ಹಾಕಿದ್ದರು. ನಟಿ ರಮ್ಯಾ ದೂರು ನೀಡುವ ವೇಳೆ 43 ಅಕೌಂಟ್ ಗಳ ಹೆಸರು ಉಲ್ಲೇಖಿಸಿ ದೂರು ದಾಖಲಿಸಿದ್ದರು. ಐಪಿ ಅಡ್ರೆಸ್ ಆಧರಿಸಿ ಪ್ರಕರಣದಲ್ಲಿ ಮೂವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಎಫ್ ಐಆರ್ ದಾಖಲಾದ ತಕ್ಷಣ ಬಹುತೇತ ಅಕೌಂಟ್ ಗಳು ಡಿಲೀಟ್ ಆಗಿದ್ದವು. ಅಷ್ಟರಲ್ಲಿ ಪೊಲೀಸರು … Read more

ಹುಡುಗಿ ಮೃತ ದೇಹ ನೋಡಿದ್ದೆ ಎಂದ ಮಾಸ್ಕ್ ಮ್ಯಾನ್

ಬೆಂಗಳೂರು: ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಭೌತಿಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಅನಾಮಿಕ ವ್ಯಕ್ತಿ ತೋರಿಸಿದ ಜಾಗದಲ್ಲಿ ಎಸ್ಐಟಿ ಅಧಿಕಾರಿಗಳು ನೆಲ ಅಗೆದು ಅಸ್ತಿಪಂಜರ ಹುಡುಕಾಟದಲ್ಲಿ ತೊಡಗಿದೆ, ಈಗಾಗಲೇ ಪಾಯಿಂಟ್ ನಂಬರ್ ಆರಲ್ಲಿ ಮನುಷ್ಯನ ದೇಹದ ಹಲವು ಮೂಳೆಗಳು ಸಿಕ್ಕಿದ್ದು ಅಧಿಕಾರಿಗಳು ತನಿಖೆ ಮತ್ತಷ್ಟು ಚುರುಕುಗೊಳಿಸಿದ್ದಾರೆ. ಇದರ ಬೆನ್ನಲ್ಲೇ ದೂರುದಾರ ಮತ್ತೊಂದು ಸ್ಪೋಟಕ ಹೇಳಿಕೆ ನೀಡಿದ್ದು, ನಾನು ಹದಿಹರೆಯದ ಹುಡುಗಿಯ ಮೃತ ದೇಹ ನೋಡಿದ್ದೆ. ವಯಸ್ಸು 12 ರಿಂದ 15 ವರ್ಷಗಳ ನಡುವೆ ಇತ್ತು, ಆ ಬಾಲಕಿ ಶಾಲಾ … Read more

ರೇಬಿಸ್ ರೋಗದಿಂದ 17 ಜನರ ಸಾವು

ಬೆಂಗಳೂರು: ರೇಬಿಸ್ ರೋಗದಿಂದ ಬೆಂಗಳೂರಿನಲ್ಲಿ 17 ಜನರ ಸಾವು, ಬೆಂಗಳೂರಿನಲ್ಲಿ ರೇಬೀಸ್ ಪ್ರಕರಣಗಳು ಭಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿವೆ. ಕಳೆದ ಆರು ತಿಂಗಳಲ್ಲಿ 17 ಜನರು ರೇಬೀಸ್ ನಿಂದ ಮೃತಪಟ್ಟಿದ್ದಾರೆ. ನಾಯಿ ಕಡಿತದ ಪ್ರಕರಣಗಳು ಕೂಡ ಹೆಚ್ಚುತ್ತಿದ್ದು, ಜನರಲ್ಲಿ ಆತಂಕ ಹೆಚ್ಚಿದೆ.ರೇಬೀಸ್ ನ ಲಕ್ಷಣಗಳು, ತಡೆಗಟ್ಟುವಿಕೆ ಮತ್ತು ಚಿಕಿತ್ಸೆಯ ಬಗ್ಗೆ ಜಾಗೃತಿ ಮೂಡಿಸುವುದು ಅತ್ಯಂತ ಮುಖ್ಯ. ಬೆಂಗಳೂರಿನಲ್ಲಿ 17 ಜನರು ರೇಬಿಸ್ ರೋಗದಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 23 ಜನರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕಳೆದ … Read more

ಅಪಹರಿಸಿ ಉಪನ್ಯಾಸಕನ ಪುತ್ರನ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಘಟನೆಯೊಂದು ನಡೆದಿದೆ. ಪ್ರತಿಷ್ಠಿತ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರೊಬ್ಬರ ಪುತ್ರನನ್ನು ಅಪಹರಿಸಿ ಕೊಲೆ ಮಾಡಲಾಗಿದೆ. ಅರಕೆರೆಯ ವಿಜಯ ಬ್ಯಾಂಕ್ ಕಾಲೋನಿಯ ಜೆ.ಸಿ.ಅಶ್ವತ್ಥ್ ಅವರ ಪುತ್ರ ನಿಶ್ಚಿತ್ (13) ಹತ್ಯೆಯಾದ ಬಾಲಕ.13 ವರ್ಷದ ಬಾಲಕ ನಿಶ್ಚಿತ್ ನನ್ನು ಟ್ಯೂಷನ್ ಗೆ ಹೋಗಿ ಬರುವ ವೇಳೆ ಕಿಡ್ನಾಪ್ ಮಾಡಿ ಬರ್ಬರವಾಗಿ ಕೊಲೆ ಮಾಡಲಾಗಿದೆ.ಟ್ಯೂಷನ್ ಗೆ ಹೋಗಿದ್ದ ಬಾಲಕ ಮನೆಗೆ ಬಾರದಿದ್ದಾಗ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಠಾಣೆ ಡಿಸಿಪಿ ನಾರಾಯಣ್ ಸೇರಿದಂತೆ … Read more

5 ಜನರಿಗೆ ದಾಳಿ ನಡೆಸಿದ್ದ ಚಿರತೆ ಸೆರೆ

ತುರುವೇಕೆರೆ: ತಾಲೂಕಿನ ಗೋಣಿ ತುಮಕೂರು ಬಳಿಯಲ್ಲಿ 5 ಜನರಿಗೆ ದಾಳಿ ನಡೆಸಿದ್ದ ತೋಟದ ಮನೆಯಲ್ಲಿ ಬಂಧಿಯಾಗಿದ್ದ ಚಿರತೆಯನ್ನು ಬುಧವಾರ ರಾತ್ರಿಯೇ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆಯವರು ಯಶಸ್ವಿಯಾದರು. ಬುಧವಾರ ಸುಮಾರು ಐದು ಜನರಿಗೆ ದಾಳಿ ನಡೆಸಿದ್ದ ಚಿರತೆಯನ್ನು ರೈತರು ಧೈರ್ಯ ಮಾಡಿ ತೋಟದ ಮನೆಯಲ್ಲಿ ಕೂಡಿ ಹಾಕಿದ್ದರು, ಸ್ಥಳಕ್ಕೆ ಧಾವಿಸಿದ ತಹಶೀಲ್ದಾರ್ ಕುಂ.ಇ.ಅಹಮದ್ ನೇತೃತ್ವದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಬಂಧಿಸಲು ಕಾರ್ಯಾಚರಣೆ ಪ್ರಾರಂಭಿಸಿದ್ದರು, ಕೆಲವು ಕಾಲ ಕಾರ್ಯಾಚರಣೆ ನಡೆಸಿದರೂ ಬೋನಿಗೆ ಕೆಡವಲು ಸಾಧ್ಯವಾಗದೆ ಮೈಸೂರಿನ ಪಶು … Read more