--ಇಲ್ಲಿ ಜಾಹೀರಾತು--

ಮತ್ತೆ ಮೂರು ದಿನ ಚೆನ್ನಯ್ಯ ಎಸ್ ಐಟಿ ಕಸ್ಟಡಿಗೆ

On: September 3, 2025 2:36 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ದೂರುದಾರ ಚೆನ್ನಯ್ಯನ ಎಸ್ ಐಟಿ ಕಸ್ಟಡಿ ಅಂತ್ಯಗೊಂಡಿದ್ದು, ಈ ಹಿನ್ನಲೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಅಧಿಕಾರಿಗಳು ಮತ್ತೆ ಮೂರು ದಿಗಳ ಕಾಲ ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದಾರೆ.
ಸಮಾಧಿ ಶೋಧ ಪ್ರಕ್ರಿಯೆ ಬಳಿಕ ಎಸ್ ಐಟಿ ಚೆನ್ನಯ್ಯನನ್ನು ಬಂಧಿಸಿತ್ತು. ಅದಾದ ಬಳಿಕ ಹೆಚ್ಚಿನ ವಿಚಾರಣೆ ಅಗತ್ಯವಿರುರುವ ಹಿನ್ನಲೆಯಲ್ಲಿ ಆತನನ್ನು 12 ದಿನಗಳ ಕಾಲ ತಮ್ಮ ಕಸ್ಟಡಿಗೆ ಪಡೆದುಕೊಂಡಿತ್ತು. ಇದೀಗ ಕಸ್ಟಡಿ ಅವಧಿ ಪೂರ್ಣಗೊಂಡಿದ್ದು, ವಿಚಾರಣೆ ಇನ್ನೂ ಅಗತ್ಯವಿರುವ ಹಿನ್ನೆಲೆಯಲ್ಲಿ ಮತ್ತೆ ಮೂರು ದಿನ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಲಾಗಿತ್ತು. ಈ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿದೆ. ಸೆ.6ರಂದು ಚಿನ್ನಯ್ಯನನ್ನು ಎಸ್ ಐಟಿ ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now