
ದೊಡ್ಡಬಳ್ಳಾಪುರ: ಸೆ.7 ರಂದು ಭಾನುವಾರ ಮಧ್ಯರಾತ್ರಿ ಚಂದ್ರಗ್ರಹಣ ಗೋಚರಿಸಲಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀಘಾಟಿ ಸುಬ್ರಹಣ್ಯ ದೇವಾಲಯವನ್ನ ಸಂಜೆ 4:30 ಗಂಟೆಗೆ ಬಂದ್ ಮಾಡಲಾಗುತ್ತಿದೆ.
ಗ್ರಹಣದ ಅಂಗವಾಗಿ 8:30ಕ್ಕೆ ಕ್ಲೋಸ್ ಮಾಡಲಾಗುತ್ತಿದ್ದ ದೇವಾಲಯದ ಬಾಗಿಲನ್ನ ಈ ವರ್ಷ ಸಂಜೆ 4:30ಕ್ಕೆ ಮುಚ್ಚಲಾಗುತ್ತದೆ.
ಇನ್ನೂ ಗ್ರಹಣದ ನಂತರ ಎಂದಿನಂತೆ ಮರುದಿನ ಬೆಳಿಗ್ಗೆ ಶುದ್ದೀಕರಣ ಮಾಡಿ ಬಳಿಕ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಹೀಗಾಗಿ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.
ಸೆ.7ಕ್ಕೆ ಘಾಟಿ ಸುಬ್ರಹಣ್ಯ ದೇವಾಲಯ ಬಂದ್

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


