--ಇಲ್ಲಿ ಜಾಹೀರಾತು--

ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ಐವರು ಉಪನ್ಯಾಸಕರ ವಿರುದ್ಧ ಎಫ್ ಐಆರ್

On: September 20, 2025 2:41 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ವಿವಿಯ ಐವರು ಉಪನ್ಯಾಸಕರ ವಿರುದ್ಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿರುವುದಾಗಿ ವರದಿಯಾಗಿದೆ. ಸಂತ್ರಸ್ತ ಅತಿಥಿ ಉಪನ್ಯಾಸಕಿ ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು ವಿವಿಯ ಉಪನ್ಯಾಸಕರಾದ ಸ್ವರೂಪ್ ಕುಮಾರ್, ರಾಮಾಂಜನೇಯ, ರಂಗಸ್ವಾಮಿ, ಜಗನ್ನಾಥ ಹಾಗೂ ಶಿವರಾಮ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಈ ಪ್ರಕರಣದ ವ್ಯಾಪ್ತಿ ರಾಮನಗರಕ್ಕೆ ಬರುವ ಹಿನ್ನೆಲೆ ರಾಮನಗರ ಠಾಣೆಗೆ ಎಫ್ ಐಆರ್ ವರ್ಗಾಹಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಐವರು ಆರೋಪಿ ಉಪನ್ಯಾಸಕರು ವಿವಿಧ ಸಂದರ್ಭಗಳಲ್ಲಿ ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಜ್ಞಾನಭಾರತಿ ಆವರಣದಲ್ಲೇ ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಇಂಟರ್ನಲ್ ಮಾಕ್ಸ್ ನೀಡಲು ಲಂಚಕ್ಕೆ ಬೇಡಿಕೆ! ವಿವಿಯ ಸಮಾಜಶಾಸ್ತ್ರ ವಿಭಾಗದ ಉಪನ್ಯಾಸಕ ರಾಮಾಂಜನೇಯ ಅವರ ವಿರುದ್ಧ ಇಂಟರ್ನಲ್ ಮಾಕ್ಸ್ ನೀಡಲು ಹಣಕ್ಕೆ ಬೇಡಿಕೆ ಇಟ್ಟ ಆರೋಪವೂ ಸಹ ಕೇಳಿಬಂದಿದೆ. ಅಂಧ ವಿದ್ಯಾರ್ಥಿಯೊಬ್ಬನಿಗೆ ಇಂಟರ್ನಲ್ ನೀಡಲು ಸಾವಿರಾರು ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now