ಕ್ಷುಲ್ಲಕ ಕಾರಣಕ್ಕೆ ದೊಣ್ಣೆಯಿಂದ ಹಲ್ಲೆ- ವೃದ್ಧ ಸಾವು

ಪಾವಗಡ: ದ್ವಿಚಕ್ರ ವಾಹನಕ್ಕೆ ಬಾಲಕ ಅಡ್ಡಬಂದನೆಂಬ ಕಾರಣಕ್ಕೆ ವಾಹನ ಸವಾರ ಬಾಲಕನ ಕುಟುಂಬದವರ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿದ ಪರಿಣಾಮ ವೃದ್ಧರೊಬ್ಬರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಅರಸೀಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳಿಬಟ್ಲು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಹನುಮಂತರಾಯಪ್ಪ (60) ಎನ್ನಲಾಗಿದ್ದು, ಹಲ್ಲೆ ಮಾಡಿದ ಆರೋಪಿ ಅದೇ ಗ್ರಾಮದ ವಾಲ್ಮೀಕಿ ಅಲಿಯಾಸ್ ಓಬಳಪತಿ (45) ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆತನ ಬಂಧನಕ್ಕಾಗಿ ಶೋಧ ನಡೆಸಿದ್ದಾರೆ. ಸೆಪ್ಟೆಂಬರ್ 10 ಬುಧವಾರ ಬೆಳ್ಳಿಬಟ್ಲು ಗ್ರಾಮದ ಬಾಲಾಜಿ … Read more

ಚಾಕುವಿ ನಿಂದ ಇರಿದು ಯುವಕನ ಕೊಲೆ

ಮಂಡ್ಯ: ಚಾಕುವಿ ನಿಂದ ಇರಿದು ಯುವಕನೊಬ್ಬನನ್ನು ಕೊಲೆ ಮಾಡಿರುವ ಘಟನೆ ಮಳವಳ್ಳಿ ತಾಲೂಕಿನ ಅವ್ವೇರಹಳ್ಳಿ ದೊಡ್ಡಬೂಹಳ್ಳಿ ನಡುವಿನ ಕಾಲುವೆ ರಸ್ತೆಯಲ್ಲಿ ನಡೆದಿದೆ. ತಾಲೂಕಿನ ರಾಗಿಬೊಮ್ಮನಹಳ್ಳಿ ಗ್ರಾಮದ ವಾಸಿ ಮಹಾದೇವ ಸ್ವಾಮಿ ಎಂಬುವರ ಮಗನಾದ 24 ವರ್ಷದ ಮೋಹನ್ ಕುಮಾರ್ ಎಂಬಾತನೇ ಕೊಲೆಯಾಗಿರುವ ಯುವಕ. ಗುರುವಾರ ರಾತ್ರಿ 10.30 ರ ಸಮಯದಲ್ಲಿ ಮೋಹನ್ ಕುಮಾರ್ ಅವ್ವೇರಹಳ್ಳಿ ದೊಡ್ಡಬೂಹಳ್ಳಿ ನಡುವಿನ ಕಾಲುವೆ ರಸ್ತೆಯ ಬಳಿ ಸತ್ತು ಬಿದ್ದಿರುವುದು ಬೆಳಕಿಗೆ ಬಂದಿದೆ. ಯಾರೋ ದುಷ್ಕರ್ಮಿಗಳು ಮುಖದ ಮೇಲೆಲ್ಲಾ ಗಾಯ ಮಾಡಿ ಚಾಕುವಿನಿಂದ … Read more

ಸಿಎಂ ನಿವಾಸದ ಬಳಿ ಕಾರಿಗೆ ಬೆಂಕಿ

ಬೆಂಗಳೂರು: ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿ ಬಳಿ ಇದ್ದಕ್ಕಿದ್ದಂತೆ ಕಾರಿಗೆ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದ ಘಟನೆ ಶುಕ್ರವಾರ ನಡೆದಿದೆ. ಬೆಳಗ್ಗೆ ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಾರಿನಲ್ಲಿದ್ದ ಸಾಫ್ಟ್ ವೇರ್ ಎಂಜಿನಿಯರ್ ಹಾಗೂ ಚಾಲಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಾಫ್ಟ್ ವೇರ್ ಇಂಜಿನಿಯರ್ ಸಚಿನ್ ಎಂಬುವವರು ಕಾರಿನಲ್ಲಿ ಕೋರಮಂಗಲದಿಂದ ಗಂಗಾನಗರದಲ್ಲಿರುವ ಸಬ್ ರಿಜಿಸ್ಟ್ರರ್ ಕಚೇರಿಗೆ ಆಸ್ತಿ ನೋಂದಣಿಗಾಗಿ ತೆರಳುತ್ತಿದ್ದರು. ಸಿಎಂ ಮನೆ ಸಮೀಪದ ಅರಮನೆ ರಸ್ತೆಯ … Read more

ಚಿನ್ನದ ಸರ ಕಿತ್ತು ಪರಾರಿಯಾಗಿದ್ದವರ ಬಂಧನ

ಬೆಂಗಳೂರು: ವಾಕಿಂಗ್ ಮುಗಿಸಿ ಮನೆಗೆ ಹೋಗುತ್ತಿದ್ದ ನಿವೃತ್ತ ಎಸಿಪಿ ಮೇಲೆ ಹಲ್ಲೆ ಮಾಡಿ ಚಿನ್ನದ ಸರ, ಬ್ರೇಸ್ ಲೆಟ್ ಕಿತ್ತುಕೊಂಡು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಇಲ್ಲಿನ ಸಂಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಡಿ.ಜೆ.ಹಳ್ಳಿಯ ನಿವಾಸಿಗಳಾದ ಸೈಯ್ಯದ್ ಮೊಹ್ಸಿನ್ (30), ಮೊಹಮ್ಮದ್ ಸಲ್ಮಾನ್ (20) ಹಾಗೂ ಸೈಯ್ಯದ್ ಇರ್ಫಾನ್ (23) ಬಂಧಿತ ಆರೋಪಿಗಳು.ಕೆಲ ದಿನಗಳ ಹಿಂದೆ ಹೆಬ್ಬಾಳದ ಪಶು ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಬಳಿ ಹಾಡಹಗಲೇ ನಿವೃತ್ತ ಎಸಿಪಿ ಹೆಚ್.ಸುಬ್ಬಣ್ಣ ಅವರ ಮೇಲೆ ಚಾಕುವಿ ನಿಂದ ಹಲ್ಲೆಗೈದಿದ್ದ ಆರೋಪಿಗಳು … Read more

ನಾಲ್ವರ ದರೋಡೆಕೋರರ ಬಂಧನ

ಬೆಂಗಳೂರು: ನಗರದ ಹೊರವಲಯದ ಜ್ಯೂವೆಲ್ಲರಿ ಶಾಪ್ ಗೆ ನುಗ್ಗಿ ಮಾಲೀಕನಿಗೆ ಆಟಿಕೆ ಪಿಸ್ತೂಲಿನಿಂದ ಬೆದರಿಸಿ 90 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ನಾಲ್ವರ ದರೋಡೆಕೋರರನ್ನು ಮಾದನಾಯಕನ ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರ ಹಾಗೂ ನಗರದ ನಾಲ್ವರು ದರೋಡೆಕೋರ ಬಂಧನದಿಂದ 40ಕ್ಕೂ ಹೆಚ್ಚು ದರೋಡೆ ಪ್ರಕರಣಗಳು ಬೆಳಕಿಗೆ ಬಂದಿವೆ.ಈ ದರೋಡೆಕೋರರ ಗ್ಯಾಂಗ್ ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ರಾಜ್ಯದ ಹಲವು ಕಡೆಗಳಲ್ಲಿ ದರೋಡೆ ಹಾಗೂ ಕಳ್ಳತನ ಮಾಡಿರುವುದು ಪೊಲೀಸರ ವಿಚಾರಣೆಯಿಂದ ಬೆಳಕಿಗೆ ಬಂದಿದೆ. ಕಳೆದ ಜುಲೈ 21 … Read more

ಸೆ.7ಕ್ಕೆ ಘಾಟಿ ಸುಬ್ರಹಣ್ಯ ದೇವಾಲಯ ಬಂದ್

ದೊಡ್ಡಬಳ್ಳಾಪುರ: ಸೆ.7 ರಂದು ಭಾನುವಾರ ಮಧ್ಯರಾತ್ರಿ ಚಂದ್ರಗ್ರಹಣ ಗೋಚರಿಸಲಿರುವ ಹಿನ್ನೆಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀಘಾಟಿ ಸುಬ್ರಹಣ್ಯ ದೇವಾಲಯವನ್ನ ಸಂಜೆ 4:30 ಗಂಟೆಗೆ ಬಂದ್ ಮಾಡಲಾಗುತ್ತಿದೆ. ಗ್ರಹಣದ ಅಂಗವಾಗಿ 8:30ಕ್ಕೆ ಕ್ಲೋಸ್ ಮಾಡಲಾಗುತ್ತಿದ್ದ ದೇವಾಲಯದ ಬಾಗಿಲನ್ನ ಈ ವರ್ಷ ಸಂಜೆ 4:30ಕ್ಕೆ ಮುಚ್ಚಲಾಗುತ್ತದೆ. ಇನ್ನೂ ಗ್ರಹಣದ ನಂತರ ಎಂದಿನಂತೆ ಮರುದಿನ ಬೆಳಿಗ್ಗೆ ಶುದ್ದೀಕರಣ ಮಾಡಿ ಬಳಿಕ ದೇವಾಲಯದ ಬಾಗಿಲು ತೆರೆಯಲಾಗುತ್ತದೆ. ಹೀಗಾಗಿ ಭಕ್ತಾದಿಗಳು ಸಹಕರಿಸುವಂತೆ ದೇವಾಲಯದ ಆಡಳಿತಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.

ಹೆಡ್ ಕಾನ್ ಸ್ಟೇಬಲ್, ಇಂಜಿನಿಯರ್ ಲೋಕಾ ಬಲೆಗೆ

ಬೆಂಗಳೂರು: ಲಂಚ ಸ್ವೀಕಾರದ ವೇಳೆ ನಗರದ ವೈಯಾಲಿ ಕಾವಲ್ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಹಾಗೂ ಬೆಸ್ಕಾಂನ ಕಾರ್ಯನಿರ್ವಾಹಕ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. 70 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟು, 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಸಮಯದಲ್ಲಿ ದೇವನಹಳ್ಳಿ ಪೊಲೀಸ್ ಠಾಣಾ ಸಿಬ್ಬಂದಿ ಅಮರೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಹಿಳೆಯೊಬ್ಬರು ನೀಡಿದ್ದ ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳಿಂದ ಕಾರ್ಯಾಚರಣೆ ನಡೆಸಲಾಗಿತ್ತು. ಲೋಕಾಯುಕ್ತ ಎಸ್ಪಿ ವಂಶಿಕೃಷ್ಣ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ದೇವನಹಳ್ಳಿ ಠಾಣೆ ಪಿಎಸ್ ಐ ಜಗದೇವಿ, ಕಾನ್ಸ್ ಟೇಬಲ್ … Read more

ಇಂದು ಕೃಷ್ಣೆಯ ಜಲಧಿಗೆ ಸಿಎಂರಿಂದ ಬಾಗಿನ

ವಿಜಯಪುರ: ಉತ್ತರ ಕರ್ನಾಟಕದ ಜೀವನದಿ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದ್ದು, ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಕೃಷ್ಣೆಯ ಜಲಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೆ.6ರಂದು ಬಾಗಿನ ಅರ್ಪಿಸಲಿದ್ದಾರೆ. ಜಲಾಶಯದ ಒಳಹರಿವು ಸ್ಥಿರವಾಗಿ ಮುಂದುವರೆದಿದೆ, ಇದರಿಂದಾಗಿ ಆಲಮಟ್ಟಿ ಜಲಾಶಯ ಭರ್ತಿಯಾಗಿದೆ. ಶುಕ್ರವಾರ ಜಲಾಶಯ ತನ್ನ ಪೂರ್ಣ ಸಂಗ್ರಹ ಸಾಮರ್ಥ್ಯವಾದ 519.60 ಮೀಟರ್ ಅನ್ನು ತಲುಪಿದ್ದು, ಅಣೆಕಟ್ಟಿನಲ್ಲಿ 123.081 ಟಿಎಂಸಿಎಫ್ ಟಿ ನೀರು ಸಂಗ್ರಹವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಲಾಶಯದ ಒಳಹರಿವು 59,312 … Read more

ಸುವರ್ಣ ವಿಧಾನಸೌಧದ ವಿದ್ಯುತ್ ಬಿಲ್ ಬಾಕಿ

ಬೆಳಗಾವಿ: ರಾಜ್ಯದ ಎರಡನೇ ಶಕ್ತಿಸೌಧ ಬೆಳಗಾವಿ ಸುವರ್ಣ ವಿಧಾನಸೌಧದ ವಿದ್ಯುತ್ ಬಿಲ್ ನ್ನು ಪಾವತಿಸದೇ ಅಧಿಕಾರಿಗಳು ಬಾಕಿ ಉಳಿಸಿಒಂಡಿರುವ ಘಟನೆ ಬೆಳಕಿಗೆ ಬಂದಿದೆ. ಸುವರ್ಣಸೌಧದ ವಿದ್ಯುತ್ ಬಿಲ್ 1.20 ಲಕ್ಷ ರೂಪಾಯಿಯನ್ನು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಹೆಸ್ಕಾಂ ಇಲಾಖೆಗೆ ಇನ್ನೂ ಪಾವತಿಸಿಲ್ಲ. ಈ ತಿಂಗಳು ಬಾಕಿ ಬಿಲ್ ಪಾವತಿ ಮಾಡದಿದ್ದರೆ ಸುವರ್ಣಸೌಧದ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತೇವೆ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಹೆಸ್ಕಾಂ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಇನ್ನು ಸುವರ್ಣಸೌಧಕ್ಕೆ ಬಣ್ಣ ಬಳಿಯಲು ಲೋಕೋಪಯೋಗಿ ಇಲಾಖೆ ಸಲ್ಲಿಸಿದ್ದ … Read more

ಯುವತಿಗೆ ಲೈಂಗಿಕ ಕಿರುಕುಳ- ಕಾರ್ಮಿಕ ಬಂಧನ

ಬೆಂಗಳೂರು: ಬೆಂಗಳೂರಿನ ಮಹಿಳಾ ಪೇಯಿಂಗ್ ಗೆಸ್ಟ್ (ಪಿಜಿ) ವೊಂದಕ್ಕೆ ನುಗ್ಗಿ 21 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಿ, ಹಲ್ಲೆ ನಡೆಸಿ ನಂತರ ಹಣ ದೋಚಿ ಪರಾರಿಯಾಗಿದ್ದ ಗಿಗ್ ಕಾರ್ಮಿಕನನ್ನು ಗುರುವಾರ ಬಂಧಿಸಲಾಗಿದೆ. ಈ ಆಘಾತಕಾರಿ ಘಟನೆ ಆಗಸ್ಟ್ 29 ರಂದು ನಡೆದಿದ್ದು, ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಬಂಧಿತ ಆರೋಪಿ 30 ವರ್ಷದ ನರೇಶ್ ಪಟ್ಟಮ್, ಬಿಟಿಎಂ ಲೇಔಟ್ 1ನೇ ಹಂತದ ಮಹಿಳಾ ಪಿಜಿಯ … Read more