ಉಮಾಶ್ರೀಗೆ ಡಾ.ರಾಜ್ ಕುಮಾರ್ ಪ್ರಶಸ್ತಿ

ಬೆಂಗಳೂರು: 2019ನೇ ವರ್ಷದ ಡಾ.ರಾಜ್ ಕುಮಾರ್ ಪ್ರಶಸ್ತಿಯನ್ನು ಸ್ಯಾಂಡಲ್ ವುಡ್ ಹಿರಿಯ ನಟಿ ಉಮಾಶ್ರೀಗೆ ನೀಡಲಾಗಿದೆ. ಅಲ್ಲದೇ ಪುಟ್ಟಣ್ಣ ಕಣಗಾಲ್, ಡಾ.ವಿಷ್ಣುವರ್ಧನ್ ಪ್ರಶಸ್ತಿಯನ್ನು ಸರ್ಕಾರ ಘೋಷಿಸಿದೆ.ಈ ಸಂಬಂಧ ಕನ್ನಡ, ಸಂಸ್ಕೃತಿ ಮತ್ತು ವಾರ್ತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, 2019ನೇ ಕ್ಯಾಲೆಂಡರ್ ವರ್ಷದ ಡಾ.ರಾಜ್ ಕುಮಾರ್ ಪ್ರಶಸ್ತಿ, ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ಮತ್ತು ಡಾ.ವಿಷ್ಣುವರ್ಧನ್ ಪ್ರಶಸ್ತಿ, ಚಲನಚಿತ್ರ ಸಾಹಿತ್ಯ ವಾರ್ಷಿಕ ಪ್ರಶಸ್ತಿ ಹಾಗೂ ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಿರುವುದಾಗಿ ತಿಳಿಸಿದ್ದಾರೆ. ಹೀಗಿದೆ … Read more

ಸಂಪ್ ನಲ್ಲಿ ವಿದ್ಯಾರ್ಥಿ ಶವ ಪತ್ತೆ

ಕೋಲಾರ: ಕೋಲಾರದಲ್ಲಿ ಘೋರ ಘಟನೆ ನಡೆದಿದ್ದು, ಶಾಲೆ ಆವರಣದಲ್ಲಿದ್ದ ಸಂಪ್ ನಲ್ಲಿ ವಿದ್ಯಾರ್ಥಿ ಬಿದ್ದು ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕಡದನಹಳ್ಳಿಯಲ್ಲಿ ಈ ಒಂದು ಘಟನೆ ಸಂಭವಿಸಿದೆ. ಸಂಪ್ ನಲ್ಲಿ 3ನೇ ತರಗತಿ ವಿದ್ಯಾರ್ಥಿ ನರೇಂದ್ರ (9) ವಿದ್ಯಾರ್ಥಿಯ ಮೃತ ದೇಹ ಪತ್ತೆ ಆಗಿದೆ. ನರೇಂದ್ರ ಕಡದನಹಳ್ಳಿಯ ಸರ್ಕಾರಿ ಪ್ರಾರ್ಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿಯಾಗಿದ್ದು, ಬೆಳಗ್ಗೆ ವಿದ್ಯಾರ್ಥಿ ನರೇಂದ್ರ ಶಾಲೆಗೆ ಬಂದಿದ್ದ ಅದಾದ ಬಳಿಕ ಆತ ನಾಪತ್ತೆಯಾಗಿದ್ದ ವಿದ್ಯಾರ್ಥಿ ನರೇಂದ್ರಗಾಗಿ ಪೋಷಕರು ಗ್ರಾಮದ … Read more

ಸತ್ಯ ಹೇಳಿದ ಸ್ನೇಹಿತನ ಮರ್ಡರ್ ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸಿದ ಕೊಲೆ ಕೇಸ್!

ಬೆಂಗಳೂರು: ತನ್ನ ಮನೆಯಲ್ಲೇ ತಾನೇ ಕಳ್ಳತನ ಮಾಡಿದ್ದ ರಹಸ್ಯವನ್ನು ತಾಯಿಯ ಬಳಿ ಮತ್ತು ಸ್ನೇಹಿತರ ಬಳಿ ಬಯಲು ಮಾಡಿದನೆಂಬ ಸಿಟ್ಟಿಗೆ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತನ್ನ ಆಪ್ತ ಗೆಳೆಯನನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಭೀಕರ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದೆ. ಘಟನೆಯ ವಿವರ: ಕೊಲೆಯಾದ ಯುವಕ ರಾಹುಲ್ ಮತ್ತು ಆರೋಪಿ ಪ್ರೀತಂ ಇಬ್ಬರೂ ಸ್ನೇಹಿತರು. ಕೃಷ್ಣಪ್ಪ ಲೇಔಟ್ ನಲ್ಲಿ ವಾಸವಿರುವ ಪ್ರೀತಂ ಇಂಜಿನಿಯರಿಂಗ್ ಓದುತ್ತಿದ್ದರೆ, ರಾಹುಲ್ ಪಿಯುಸಿ ಡ್ರಾಪ್ ಔಟ್ ಆಗಿದ್ದ. ಇಬ್ಬರೂ ಪ್ರತಿ ದಿನ ಒಟ್ಟಿಗೆ … Read more

ನಕಲಿ ನೋಟು ವರ್ಗಾವಣೆ- ಮೂವರ ಬಂಧನ

ಬೆಂಗಳೂರು: ಐದು ನೂರು ರೂಪಾಯಿ ಮುಖಬೆಲೆಯ ನಕಲಿ ನೋಟು ವರ್ಗಾವಣೆ ಮಾಡುತ್ತಿದ್ದ ಆರೋಪ ಪ್ರಕರಣ ಸಂಬಂಧ ಮೂವರನ್ನು ಇಲ್ಲಿನ ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡು ಮೂಲದ ರಾಜೇಶ್ವರನ್, ಮೀರನ್ ಮತ್ತು ಶೇಕ್ ಮುಹಮ್ಮದ್ ಬಂಧಿತ ಆರೋಪಿಗಳೆಂದು ಪೊಲೀಸರು ಹೇಳಿದ್ದಾರೆ. ಸೂಟ್ ಕೇಸ್ ವೊಂದರಲ್ಲಿ ಯಾರಿಗೂ ಅನುಮಾನ ಬಾರದ ರೀತಿ ಮೇಲೆ ಹಾಗೂ ಕೆಳಗೆ 500 ರೂ. ಮುಖ ಬೆಲೆಯ ಅಸಲಿ ನೋಟುಗಳನ್ನು ಇಟ್ಟು ಮಧ್ಯದಲ್ಲಿ ನೋಟಿನ ರೀತಿಯಲ್ಲಿರುವ ಬಿಳಿ ಖಾಲಿ ಪೇಪರ್ ಗಳನ್ನು ಜೋಡಿಸಿಕೊಂಡು ಬಂದಿದ್ದು, … Read more

ಲಂಚ ಸ್ವೀಕರಿಸುವಾಗ ಶಿರಸ್ತೇದಾರ್ ಬಲೆಗೆ

ಹಾವೇರಿ: ಆರ್ಟಿಸಿ ದುರಸ್ಥಿ ಕಾರ್ಯಕ್ಕಾಗಿ 12 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ ಸೇರಿ ಮೂವರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ ತಮ್ಮಣ್ಣ ಕಾಂಬಳೆ ಹಾಗೂ ದ್ವಿತೀಯ ದರ್ಜೆ ಸಹಾಯಕರು ಗೂಳಪ್ಪ ಮನಗೂಳಿ ಮತ್ತು ಶಿವಾನಂದ ಬಡಿಗೇರರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೊಮ್ಮನಹಳ್ಳಿ ಗ್ರಾಮದ ಶಂಕ್ರಪ್ಪ ಗುಮಗುಂಡಿ ಅವರ ಆರ್ ಟಿ ಸಿ ದುರಸ್ಥಿ ಅರ್ಜಿಯ ಪ್ರಕ್ರಿಯೆ ಮಾಡಲು ಲಂಚ ಬೇಡಿಕೆಯಿಟ್ಟಿದ್ದ ಮೂವರೂ, ಹಣ … Read more

ವ್ಯಕ್ತಿ ಮೇಲೆ ಹುಲಿ ದಾಳಿ- ಸರ್ಕಾರದಿಂದ ಚಿಕಿತ್ಸೆ ವೆಚ್ಚ

ಮೈಸೂರು: ಬಡಗಲಾಪುರದಲ್ಲಿ ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು. ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಚಿಕಿತ್ಸೆಗೆ ಒಳಗಾಗಿರುವ ಮಹದೇವಗೌಡ ಅವರ ಕುಟುಂಬದವರ ಜೊತೆ ಚರ್ಚಿಸಿದ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು. ಎರಡು ಕಣ್ಣುಗಳ ದೃಷ್ಟಿ ಮತ್ತೆ ಬರುವ ಸಾಧ್ಯತೆ ಇಲ್ಲ ಎಂದು ವೈದ್ಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪರಿಹಾರವನ್ನು ಗಾಯಾಳು ಲೆಕ್ಕದಲ್ಲಿ ಕೊಡಬಾರದು. ಬದುಕು ಕಳೆದುಕೊಂಡ, … Read more

ದೇವೇಗೌಡರ ಆಶೀರ್ವಾದ ಪಡೆದ ರಿಷಬ್ ಶೆಟ್ಟಿ

ಬೆಂಗಳೂರು: ‘ಕಾಂತಾರ ಚಾಪ್ಟರ್ 1’ ಸಿನಿಮಾ ಅಭೂತಪೂರ್ವ ಯಶಸ್ಸನ್ನು ಸಂಭ್ರಮಿಸುತ್ತಿದೆ. ಈ ಮಧ್ಯೆ ರಿಷಬ್ ಶೆಟ್ಟಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ. ದೇವೇಗೌಡ ಅವರೊಂದಿಗಿನ ಫೋಟೊವನ್ನು ರಿಷಬ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದು ಬರೀ ಭೇಟಿಯಲ್ಲ, ನಮ್ಮ ನಾಡಿನ ಹಿರಿಯ ಚೇತನದೊಂದಿಗಿನ ಒಂದು ಸುಂದರ ಸಂವಾದ. ನಾಡಿನ ಅತ್ಯುನ್ನತ ಸ್ಥಾನಕ್ಕೆ ಏರಿ, ಕನ್ನಡಿಗರ ಕೀರ್ತಿಯನ್ನು ಹೆಚ್ಚಿಸಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಆಶೀರ್ವಾದ ಪಡೆದ ಕ್ಷಣಗಳು. ಅವರ ಅನುಭವದ ಮಾತುಗಳು ಮತ್ತು ಪ್ರೀತಿಯ … Read more

ಕುಸುಮಾ ವಿರುದ್ಧ ಮುನಿರತ್ನ ವಾಗ್ದಾಳಿ

ಬೆಂಗಳೂರು: ರಾಜರಾಜೇಶ್ವರಿ ಕ್ಷೇತ್ರದ ಶಾಸಕ ಮುನಿರತ್ನ ತಮ್ಮ ಕ್ಷೇತ್ರದಲ್ಲಿ ಪಟಾಕಿ ಹಂಚುವ ವೇಳೆ ತಮ್ಮ ಜೊತೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕುಸುಮಾ ಹನುಮಂತರಾಯಪ್ಪ ವಿರುದ್ಧ ಕಿಡಿಕಾರಿದ್ದಾರೆ. ಮುನಿರತ್ನ ಜನರಿಗೆ ಹಂಚಲೆಂದು ಪಟಾಕಿ ತಂದಿದ್ದ ಕಾರಣ ಪೊಲೀಸರು ಅವರ ಕಚೇರಿಗೆ ಬೀಗ ಜಡಿದಿದ್ದಾರೆ. ಇನ್ನು ಕುಸುಮಾ ಹಾಗೂ ಮುನಿರತ್ನ ಇಬ್ಬರೂ ಪರಸ್ಪರ ಚುನಾವಣೆಗೆ ಸ್ಪರ್ಧಿಸಿದಾಗಿನಿಂದಲೂ ಹಾವು ಮುಂಗುಸಿಯಂತೆ ಆರೋಪ ಪ್ರತ್ಯಾರೋಪ ಮಾಡಿಕೊಳ್ಳುತ್ತಾ ಬಂದಿರುವ ಇವರು ಈಗಲೂ ತಮ್ಮ ವಾಕ್ಸಮರ ಮುಂದುವರಿಸುತ್ತಿದ್ದಾರೆ. ಪಟಾಕಿ ಹಂಚುವ ವೇಳೆ ಮಾತನಾಡಿದ ಮುನಿರತ್ನ ಕುಸುಮಾ … Read more

ಯುವತಿ ಕೊಂದಿದ್ದ ಆರೋಪಿ ಅರೆಸ್ಟ್

ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಕೋ ಕಿಲ್ಲರ್ ವಿಘ್ನೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಬಳಿಕ ಆರೋಪಿ ವಿಘ್ನೇಶ್ ತಮಿಳುನಾಡಿಗೆ ಪರಾರಿಯಾಗಿದ್ದ ಎಂದು ಶಂಕೆ ವ್ಯಕ್ತವಾಗಿತ್ತು. ಆರೋಪಿ ಪತ್ತೆಗೆ ಪ್ರತ್ಯೇಕ ಎರಡು ತಂಡಗಳನ್ನ ರಚನೆ ಮಾಡಿ ಹುಡುಕಾಟ ನಡೆಸಿದ್ದು, ಸದ್ಯ ಆರೋಪಿಯನ್ನು ಅರ್ಟ್ ಮಾಡಿದ್ದಾರೆ. ಸದ್ಯ ಶ್ರೀರಾಂಪುರ ಠಾಣೆ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ವಿಘ್ನೇಶ್ ಜೊತೆಗೆ ಹರೀಶನನ್ನ ಬಂಧಿಸಲಾಗಿದೆ. ಕೊಲೆಯ ಬಳಿಕ ವಿಘ್ನೇಶ್ ನನ್ನು ಬೈಕ್ ನಲ್ಲಿ ಹರೀಶ್ … Read more

ನಟ ದರ್ಶನ್ ಆರೋಗ್ಯ ತಪಾಸಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್, ಅನಾರೋಗ್ಯದ ಸಂಬಂಧ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳಿಗೆ ಮತ್ತೆ ಪತ್ರ ಬರೆದು, ಚಿಕಿತ್ಸೆಗೆ ಮನವಿ ಮಾಡಿದ್ದಾರೆ. ದರ್ಶನ್ ಅವರು ಈ ಹಿಂದೆ ಬೆನ್ನು ನೋವಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವುದಾಗಿ ಹೇಳಿ ನ್ಯಾಯಾಲಯದಿಂದ ಷರತ್ತುಬದ್ಧ ಮಧ್ಯಂತರ ಜಾಮೀನು ಪಡೆದು ಬಿಡುಗಡೆಯಾಗಿದ್ದರು. ನಂತರ ಡೆವಿಲ್ ಸಿನಿಮಾದ ಚಿತ್ರೀಕರಣದಲ್ಲೇ ಹೆಚ್ಚಿನ ಸಮಯ ಕಳೆದಿದ್ದ ಅವರು ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿರಲಿಲ್ಲ. ಈ ಮಧ್ಯೆ ಸುಪ್ರೀಂ ಕೋರ್ಟ್ ಅವರ ಜಾಮೀನು ರದ್ದುಪಡಿಸಿದ್ದರಿಂದ ಮತ್ತೆ ಜೈಲು … Read more