--ಇಲ್ಲಿ ಜಾಹೀರಾತು--

ಅ.9ಕ್ಕೆ ದರ್ಶನ್ ಅರ್ಜಿ ತೀರ್ಪು

On: October 6, 2025 2:16 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ಕೋರ್ಟ್ ಆದೇಶ ನೀಡಿದರೂ ಜೈಲಿನಲ್ಲಿ ಯಾವುದೇ ಸವಲತ್ತು ನೀಡದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯ ತೀರ್ಪನ್ನು ಕೋರ್ಟ್ ಅ. 9ಕ್ಕೆ ಕಾಯ್ದಿರಿಸಿದೆ.
ದರ್ಶನ್ ಗೆ ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ, ತಲೆ ದಿಂಬು ಸೇರಿದಂತೆ ಕೆಲ ಸವಲತ್ತು ನೀಡುವಂತೆ ಕೋರ್ಟ್ ಆದೇಶ ನೀಡಿದ್ದರೂ ಜೈಲಧಿಕಾರಿಗಳು ಯಾವುದೇ ಸವಲತ್ತು ನೀಡಿಲ್ಲ. ಈ ಮೂಲಕ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಾರೆ.
ದರ್ಶನ್ ಗೆ ಯಾವುದೇ ಸವಲತ್ತು ನೀಡಲಾಗಿಲ್ಲ ಎಂಬ ಬಗ್ಗೆ ಖುದ್ದು ಜೈಲಿನಲ್ಲಿ ಪರಿಶೀಲನೆ ನಡೆಸುವಂತೆ ಕೋರಿ ಸಿಆರ್ ಪಿಸಿ ಸೆಕ್ಷನ್ 310ರ ಅಡಿ ದರ್ಶನ್ ಪರ ವಕೀಲ ಸುನೀಲ್ ಬೆಂಗಳೂರಿನ 57ನೇ ಸಿಸಿ ಹೆಚ್ ಕೋರ್ಟ್ ಗೆ ಅರ್ಜಿ ಸಲ್ಲಿಸಿದರು.ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ಕೋರ್ಟ್ ವಿಚಾರಣೆಯನ್ನು ಅಕ್ಟೋಬರ್ 9ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now