--ಇಲ್ಲಿ ಜಾಹೀರಾತು--

ಯುವತಿ ಕೊಂದಿದ್ದ ಆರೋಪಿ ಅರೆಸ್ಟ್

On: October 17, 2025 2:17 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೈಕೋ ಕಿಲ್ಲರ್ ವಿಘ್ನೇಶ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆ ಬಳಿಕ ಆರೋಪಿ ವಿಘ್ನೇಶ್ ತಮಿಳುನಾಡಿಗೆ ಪರಾರಿಯಾಗಿದ್ದ ಎಂದು ಶಂಕೆ ವ್ಯಕ್ತವಾಗಿತ್ತು. ಆರೋಪಿ ಪತ್ತೆಗೆ ಪ್ರತ್ಯೇಕ ಎರಡು ತಂಡಗಳನ್ನ ರಚನೆ ಮಾಡಿ ಹುಡುಕಾಟ ನಡೆಸಿದ್ದು, ಸದ್ಯ ಆರೋಪಿಯನ್ನು ಅರ್ಟ್ ಮಾಡಿದ್ದಾರೆ.
ಸದ್ಯ ಶ್ರೀರಾಂಪುರ ಠಾಣೆ ಪೊಲೀಸರು ಇಬ್ಬರನ್ನು ಅರೆಸ್ಟ್ ಮಾಡಿದ್ದಾರೆ. ವಿಘ್ನೇಶ್ ಜೊತೆಗೆ ಹರೀಶನನ್ನ ಬಂಧಿಸಲಾಗಿದೆ. ಕೊಲೆಯ ಬಳಿಕ ವಿಘ್ನೇಶ್ ನನ್ನು ಬೈಕ್ ನಲ್ಲಿ ಹರೀಶ್ ಕರೆದೋಯ್ದಿದ್ದ. ಬೈಕ್ ನಲ್ಲಿ ಸೋಲದೇವನ ಹಳ್ಳಿ ಕಡೆಗೆ ಕರೆದುಕೊಂಡು ಹೋಗಿದ್ದ. ರಾತ್ರಿ ಇಡೀ ಕಾರ್ಯಾಚರಣೆ ನಡೆಸಿದ ಪೊಲೀಸರು, ಸೋಲದೇವನ ಹಳ್ಳಿ ಮನೆಯೊಂದರಲ್ಲಿ ಇದ್ದಾರೆ ಎಂಬ ಮಾಹಿತಿ ಬಂದಿದೆ. ಕೊಲೆ ನಡೆದ 14 ಗಂಟೆಯೊಳಗೆ ಇಬ್ಬರು ಆರೋಪಿಗಳನ್ನ ಅರೆಸ್ಟ್ಮಾಡಿದ್ದಾರೆ.

ಮೃತ ಯುವತಿಗೆ ಬಲವಂತವಾಗಿ ಮಾಂಗಲ್ಯ ಕೂಡ ಕಟ್ಟಿದ್ದನಂತೆ, ಈ ವಿಚಾರ ಮನೆಯಲ್ಲಿ ತಿಳಿಸಿದ್ರೆ ಕೊಲೆ ಮಾಡ್ತೇನೆ ಎಂದು ಬೆದರಿಸಿದ್ದನಂತೆ. ಇನ್ನೂ ಇಬ್ಬರು ಒಂದೇ ಏರಿಯಾದವರಾಗಿದ್ದು, ಆಕೆಯ ಪೋಷಕರಿಗೆ ಹೆಣ್ಣು ಕೇಳಿದ್ದನಂತೆ, ಆದರೆ ಅವರು ನಿರಾಕರಿಸಿದ್ದರು. ಬಳಿಕ ಒಂದು ಸಾರಿ ಗಲಾಟೆ ಮಾಡಿದಾಗ ಆತನ ವಿರುದ್ಧ ಯಾಮಿನಿ ಪೋಷಕರು ದೂರು ಕೊಟ್ಟಿದ್ದರು ಎಂದು ತನಿಖೆ ವೇಳೆ ತಿಳಿದುಬಂದಿದೆ.

ಯಾಮಿನಿ ಮನೆ ಬಳಿಯೇ ಇದ್ದ ವಿಘ್ನೇಶ್ ಹಲವು ವರ್ಷಗಳಿಂದ ಇದ್ದುದ್ದರಿಂದ ಆತ ಪರಿಚಿತ. ಜೊತೆಗೆ ಆಕೆಯನ್ನು ಪ್ರೀತಿ ಮಾಡುತ್ತಿದ್ದ. ಯಾಮಿನಿಗೆ ಆತ ಇಷ್ಟವಿರಲಿಲ್ಲ. ಹಾಗಾಗಿ ಪ್ರೀತಿ ನಿರಾಕರಿಸಿದ್ದಳು. ಪ್ರೀತಿಸು ಎಂದು ಹಿಂದೆ ಬಿದ್ದಿದ್ದ. ಆದರೂ ಒಪ್ಪದ ಕಾರಣ ಆಕೆ ಕಾಲೇಜಿನಿಂದ ಮನೆಗೆ ಬರುವುದನ್ನು ತಿಳಿದಿದ್ದ ಆತ ಸರಿಯಾದ ಸಮಯ ಗೊತ್ತು ಮಾಡಿಕೊಂಡು ಕೊಲೆ ಮಾಡಿದ್ದಾನೆ.

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now