--ಇಲ್ಲಿ ಜಾಹೀರಾತು--

ವ್ಯಕ್ತಿ ಮೇಲೆ ಹುಲಿ ದಾಳಿ- ಸರ್ಕಾರದಿಂದ ಚಿಕಿತ್ಸೆ ವೆಚ್ಚ

On: October 17, 2025 2:23 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಮೈಸೂರು: ಬಡಗಲಾಪುರದಲ್ಲಿ ಹುಲಿ ದಾಳಿಗೆ ತುತ್ತಾದ ಮಹದೇವಗೌಡ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಕುಟುಂಬಕ್ಕೆ ಸಂಪೂರ್ಣ ಪರಿಹಾರದ ಮೊತ್ತ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದರು.
ಮಣಿಪಾಲ್ ಆಸ್ಪತ್ರೆಗೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಚಿಕಿತ್ಸೆಗೆ ಒಳಗಾಗಿರುವ ಮಹದೇವಗೌಡ ಅವರ ಕುಟುಂಬದವರ ಜೊತೆ ಚರ್ಚಿಸಿದ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎರಡು ಕಣ್ಣುಗಳ ದೃಷ್ಟಿ ಮತ್ತೆ ಬರುವ ಸಾಧ್ಯತೆ ಇಲ್ಲ ಎಂದು ವೈದ್ಯರು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಪರಿಹಾರವನ್ನು ಗಾಯಾಳು ಲೆಕ್ಕದಲ್ಲಿ ಕೊಡಬಾರದು. ಬದುಕು ಕಳೆದುಕೊಂಡ, ಕುಟುಂಬದ ಆಸರೆ ಕಳೆದುಕೊಂಡವರ ಲೆಕ್ಕದಲ್ಲಿ ಪೂರ್ತಿ ಪರಿಹಾರ ಒದಗಿಸುವಂತೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now