ಕಾರು ಅಪಘಾತ- ವ್ಯಕ್ತಿ ಸ್ಥಳದಲ್ಲೇ ಸಾವು

ಪಾವಗಡ: ಪಾವಗಡ ಪಟ್ಟಣದ ಹೊರ ವಲಯದ ಕಣಿವೇನಹಳ್ಳಿ ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತವಾಗಿ ಆಂಧ್ರ ಮೂಲದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಜರುಗಿದೆ. ಗೋಪಾಲಪ್ಪ ಮತ್ತು ನರಸಿಂಹಮೂರ್ತಿ ಎಂಬುವರು ಸತ್ಯ ಸಾಯಿ ಜಿಲ್ಲೆಯ ಮಡಕಶಿರಾ ತಾಲೂಕಿನ ರೇಕಲಕುಂಟೆ ಗ್ರಾಮದವರು, ಪಾವಗಡ ತಾಲೂಕಿನ ಕಡಪಲಕೆರೆಗೆ ಮೂರ್ತಿ ಅವರ ಮಗ ನರೇಶ್ ಅವರನ್ನು ಮಾತನಾಡಿಸಿಕೊಂಡು ಕಾರಿನಲ್ಲಿ ಹಿಂತಿರುವಾಗ ನಾಯಿ ಅಡ್ಡ ಬಂದ ಕಾರಣ ಅದನ್ನು ತಪ್ಪಿಸಲು ಹೋಗಿ ಪಕ್ಕದಲ್ಲಿರುವ ಗುಣಿಗೆ ಎಗರಿ ಕಾರು ಅಪಘಾತವಾಗಿದ್ದು ಸ್ಥಳದಲ್ಲೇ ಗೋಪಾಲಪ್ಪ (50) ಸಾವನ್ನಪ್ಪಿದ್ದಾರೆ. … Read more

ಅ.9ಕ್ಕೆ ದರ್ಶನ್ ಅರ್ಜಿ ತೀರ್ಪು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಗೆ ಕೋರ್ಟ್ ಆದೇಶ ನೀಡಿದರೂ ಜೈಲಿನಲ್ಲಿ ಯಾವುದೇ ಸವಲತ್ತು ನೀಡದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯ ತೀರ್ಪನ್ನು ಕೋರ್ಟ್ ಅ. 9ಕ್ಕೆ ಕಾಯ್ದಿರಿಸಿದೆ. ದರ್ಶನ್ ಗೆ ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ, ತಲೆ ದಿಂಬು ಸೇರಿದಂತೆ ಕೆಲ ಸವಲತ್ತು ನೀಡುವಂತೆ ಕೋರ್ಟ್ ಆದೇಶ ನೀಡಿದ್ದರೂ ಜೈಲಧಿಕಾರಿಗಳು ಯಾವುದೇ ಸವಲತ್ತು ನೀಡಿಲ್ಲ. ಈ ಮೂಲಕ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದ್ದಾರೆ. ದರ್ಶನ್ ಗೆ ಯಾವುದೇ … Read more

ದ್ವಿಚಕ್ರ ವಾಹನದ ಮೇಲೆ ಮರ ಬಿದ್ದು ಯುವತಿ ಸಾವು

ಬೆಂಗಳೂರು: ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಬೃಹತ್ ಗಾತ್ರದ ಅರಳಿಮರ ಬಿದ್ದ ಪರಿಣಾಮ ಯುವತಿ ಸ್ಥಳದಲ್ಲೇ ಉಸಿರು ಚೆಲ್ಲಿರುವ ಘಟನೆ ಸೋಲದೇವನಹಳ್ಳಿ ಪೋಲಿಸ್ ಠಾಣೆ ಸಮೀಪ ನಡೆದಿದೆ. ಮೃತ ಯುವತಿಯನ್ನ ಹೆಬ್ಬಾಳ ನಿವಾಸಿ ಕೀರ್ತನಾ ಎಂದು ಗುರುತಿಸಲಾಗಿದೆ. ಘಟನೆ ವೇಳೆ ಮತ್ತೋರ್ವ ಬೈಕ್ ಸವಾರನಿಗೂ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಮರದ ಕೆಳಗೆ ಪ್ರತಿದಿನ ಪೋಲಿಸರು ನಿಲ್ಲುತ್ತಿದ್ದರಂತೆ. ಮರ ಬಿದ್ದ ಶಬ್ದ ಕೇಳಿ ಪೊಲೀಸರು ಓಡೋಡಿ ಬಂದಿದ್ದು, ಸ್ಥಳೀಯರ ಜೊತೆ ಗಾಯಾಳು ರಕ್ಷಣೆ … Read more

ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿಗೆ ಅವಕಾಶ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಮಾತ್ರ ಬಳಕೆ ಮಾಡಬೇಕು. ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಿದರೆ ಅಂತಹ ಅಂಗಡಿ ಲೈಸ್ಸ್ ಕ್ಯಾನ್ಸಲ್ ಮಾಡುವುದಾಗಿ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ದೀಪಾವಳಿಯಲ್ಲಿ ಹಸಿರು ಪಟಾಕಿ ಮಾತ್ರ ಹಚ್ಚಬೇಕು. ಈ ಸಂಬಂಧ ಸುಪ್ರೀಂ ಕೋರ್ಟ್ ಆದೇಶ ಇದೆ, ಸುಪ್ರೀಂ ಕೋರ್ಟ್ ಆದೇಶ ಇದ್ದರೂ, ಭಾರ ಇರುವ, ಲೋಹ ಭರಿತ ಪಟಾಕಿ ಬಳಕೆ ಆಗುತ್ತಿದೆ. ಅಧಿಕಾರಿಗಳಿಗೆ ಸೂಚನೆ ಕೊಡುತ್ತಿದ್ದೇನೆ. ಯಾವುದೇ ಹಸಿರು … Read more

ಕಾರಿಗೆ ಸಿಲುಕಿ ಮಗು ಸಾವು

ಬೆಂಗಳೂರು: ಕಾರು ರಿವರ್ಸ್ ತೆಗೆಯುವಾಗ ಆಕಸ್ಮಿಕವಾಗಿ ಚಕ್ರಕ್ಕೆ ಸಿಲುಕಿ 11 ತಿಂಗಳ ಮಗು ಸಾವನ್ನಪ್ಪಿದ ದಾರುಣ ಘಟನೆ ಸೋಮವಾರ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತನ ಮಗುವನ್ನು ಅಜಾನ್ ಎಂದು ಗುರುತಿಸಲಾಗಿದ್ದು, ಮಾಗಡಿ ರಸ್ತೆಯಲ್ಲಿರುವ ಮನೆಯಲ್ಲಿ ಸೋಮವಾರ ಬೆಳಗ್ಗೆ 9.45 ರ ಸುಮಾರಿಗೆ ಈ ದುರಂತ ನಡೆದಿದೆ. ಮನೆ ಮಾಲೀಕರು ತಮ್ಮ ಕಾರನ್ನು ರಿವರ್ಸ್ ತೆಗೆಯುವಾಗ ಬಾಡಿಗೆದಾರರ ಮಗು ಆಕಸ್ಮಿಕವಾಗಿ ವಾಹನದ ಹಿಂದಿನಿಂದ ಬಂದಿದ್ದು, ಆ ಮಗುವಿನ ಮೇಲೆ ಕಾರು ಹರಿದಿದೆ ಎಂದು ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ … Read more

ರಾಜ್ಯದಲ್ಲೂ ಕೆಮ್ಮಿನ ಸಿರಪ್ ಗಳ ಪರಿಶೀಲನೆ

ಬೆಂಗಳೂರು: ಕೆಮ್ಮಿನ ಸಿರಪ್ ನಿಂದಾಗಿ 12 ಮಕ್ಕಳು ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ಎರಡು ವರ್ಷಗಳೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡದಂತೆ ಸೂಚನೆ ನೀಡಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ಸಿರಪ್ ಗಳ ಪರಿಶೀಲನೆಗೆ ಮುಂದಾಗಿದೆ.ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದು, ಕೋಡ್ರಿಫ್ ಸಿರಪ್ ನಿಂದಾಗಿ ಮಧ್ಯಪ್ರದೇಶ ಹಾಗೂ ರಾಜಸ್ಥಾನ ರಾಜ್ಯಗಳಲ್ಲಿ ಮಕ್ಕಳು ಸಾವನ್ನಪ್ಪಿರುವ ವರದಿಯಾಗಿದೆ. ಕರ್ನಾಟಕದಲ್ಲಿ ಈ ಸಿರಪ್ ವಿತರಣೆಯಾಗಿಲ್ಲ. ಆದಾಗ್ಯೂ ಪರಿಶೀಲನೆ ನಡೆಸಲಾಗುತ್ತಿದೆ … Read more

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವು

ರಾಮನಗರ: ವಿದ್ಯುತ್ ಸ್ಪರ್ಶದಿಂದ ಕಾಡಾನೆ ಸಾವನ್ನಪ್ಪಿರುವ ಘಟನೆ ಚನ್ನಪಟ್ಟಣ ತಾಲೂಕಿನ ಚಿಕ್ಕವಿಠಲೇನ ಹಳ್ಳಿ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಜಮೀನೊಂದರಲ್ಲಿ ತೆಂಗಿನಮರದ ಸುಳಿಯನ್ನು ಕಿತ್ತು ತಿನ್ನಲು ಯತ್ನಿಸಿದಾಗ ತೆಂಗಿನ ವುರದ ಗರಿ 11ಕೆವಿ ವಿದ್ಯುತ್ ತಂತಿಗೆ ತಗುಲಿದ್ದರಿಂದ ಸ್ಥಳದಲ್ಲೇ ಕಾಡಾನೆ ಸಾವಿಗೀಡಾಗಿದೆ. ಸುಮಾರು 40 ವರ್ಷದ ಹೆಣ್ಣು ಆನೆಯಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಮಕೃಷ್ಣಪ್ಪ ಸಾಗರ್ ತಿಳಿಸಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿನೀಡಿ ಪರಿಶೀಲನೆ ಪಶು ವೈದ್ಯರನ್ನು ಸ್ಥಳಕ್ಕೆ ಕರೆಸಿ ಮೃತ ಆನೆಯ ಮರಣೋತ್ತರ ಪರೀಕ್ಷೆ … Read more

ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗೆ ಆಹುತಿ

ನೆಲಮಂಗಲ: ಬೆಂಗಳೂರಿನ ಹೊರವಲಯ ನೆಲಮಂಗಲ ತಾಲ್ಲೂಕಿನ ಬೂದಿಹಾಳ್ ಗೇಟ್ ಬಳಿ ಶನಿವಾರ ಬೆಳಗ್ಗೆ ಈರುಳ್ಳಿ ತುಂಬಿದ್ದ ಲಾರಿ ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಚಿತ್ರದುರ್ಗದಿಂದ ದಾಸನಪುರ ಎಪಿಎಂಸಿಗೆ ಸಾಗುತ್ತಿದ್ದಾಗ ಮಾರ್ಗ ಮಧ್ಯೆ ಲಾರಿಯ ಇಂಜಿನ್ ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾದುದರಿಂದ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆದ ಪರಿಣಾಮ ಲಕ್ಷಾಂತರ ರೂಪಾಯಿಯ ಈರುಳ್ಳಿ ನಾಶವಾಗಿದೆ. ಲಾರಿಯ ಚಾಲಕ ಮತ್ತು ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲಮಂಗಲ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ … Read more

ಜೈಲಲ್ಲೇ ರೌಡಿಶೀಟರ್ ಗುಬ್ಬಚ್ಚಿ ಸೀನಾ ಬರ್ತಡೇ

ಬೆಂಗಳೂರು : ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಈ ಮೊದಲು ಪರಪ್ಪನ ಅಗ್ರಹಾರ ಜೈಲು ಸೇರಿದಾಗ ಅಲ್ಲಿನ ರೌಡಿ ಶೀಟರ್ ಗಳ ಜೊತೆ ಕುಳಿತು ಹರಟೆ ಹೊರೆಡೆಯುವುದು ಸಿಗರೇಟ್ ಸಿರುವುದು ಭಾರಿ ಚರ್ಚೆಯಾಗಿತ್ತು. ಇದಕ್ಕೆ ಬ್ರೇಕ್ ಹಾಕಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದರು ಕೂಡ ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜ್ಯಾತಿಥ್ಯ ಮುಂದುವರೆದಿದೆ. ಜೈಲಿನಲ್ಲಿ ಕೈದಿಗಳ ಕಳ್ಳಾಟ ಇನ್ನೂ ನಿಂತಿಲ್ಲ, ವಿಚಾರಣಾಧೀನ ಕೈದಿಗಳ ಕಳ್ಳಾಟಕ್ಕೆ ಬ್ರೇಕ್ ಇಲ್ಲ ಎಂಬಂತಾಗಿದೆ. ನಟೋರಿಯಸ್ ರೌಡಿಶೀಟರ್ ಶೀನಿವಾಸ್ ಅಲಿಯಾಸ್ … Read more

ನಕಲಿ ವೈದ್ಯನ ಚಿಕಿತ್ಸೆಯಿಂದ ಬಾಲಕಿ ಸಾವು?

ಕೋಲಾರ: ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ನಕಲಿ ವೈದ್ಯರ ಕಾಟ ಹೆಚ್ಚುತ್ತಿದೆ. ಯಾವುದೇ ವೈದ್ಯಕೀಯ ಪದವಿಯಿಲ್ಲದೆ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇದರಿಂದ ಜನರ ಜೀವಕ್ಕೇ ಕುತ್ತು ಬಂದಿದೆ, ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕು ದೊಡ್ಡಿಗ್ಗಲೂರು ಗ್ರಾಮದಲ್ಲೊಂದು ದುರ್ಘಟನೆ ನಡೆದಿದೆ. ಅನಾರೋಗ್ಯದಿಂದ ಆಸ್ಪತ್ರೆಗೆ ಹೋದ ಬಾಕಿಯೊಬ್ಬಳು ವೈದ್ಯರ ಚಿಕಿತ್ಸೆಯಿಂದಲೇ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ, ಆಕೆಗೆ ಚಿಕಿತ್ಸೆ ನೀಡಿದವರು ನಕಲಿ ವೈದ್ಯರೆಂದು ಹೇಳಲಾಗುತ್ತಿದೆ. ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೊಡ್ಡಿಗಲ್ಲೂರು ಗ್ರಾಮದ 8 ವರ್ಷದ ಬಾಲಕಿಯೊಬ್ಬಳು ಜ್ವರದಿಂದ ಬಳಲುತ್ತಿದ್ದಾಗ ಪೋಷಕರು … Read more