
ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿ ಆರ್ ಪಿಸಿ ಸೆಕ್ಷನ್ 294 ಅಡಿ ಅರ್ಜಿ ಸಲ್ಲಿಕೆ ಮಾಡಲಾಗುತ್ತಿದ್ದು, ಬೆಂಗಳೂರಿನ 57ನೇ ಇಇಏ ಕೋರ್ಟಿಗೆ ಪ್ರಾಸಿಕ್ಯೂಷನ್ ಅರ್ಜಿ ಸಲ್ಲಿಸಲಿದ್ದಾರೆ.
ಈ ವೇಳೆ ವೀಡಿಯೋ ಕಾನ್ಫರ್ಸ್ ಮೂಲಕ ಕೊಲೆ ಆರೋಪಿ ದರ್ಶನ್ ಹಾಜರಾಗಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಆರ್ಪಿಸಿ ಸೆಕ್ಷನ್ 294 ಅಡಿ ಸಹಾಯಕ ಎಸ್ ಪಿ ಪಿ ಸಚಿನ್ ಅರ್ಜಿ ಸಲ್ಲಿಸಿದ್ದಾರೆ.
ಈ ಹಿನ್ನೆಲೆ ವಿಡಿಯೋ ಕಾನ್ಫರ್ಸ್ ಮೂಲಕ ಕೊಲೆ ಆರೋಪಿ ನಟ ದರ್ಶನ್ ಹಾಜರಾಗಿದ್ದಾರೆ. ಮರುನ್ ಬಣ್ಣದ ಟಿ-ಶರ್ಟ್ ಹಾಗೂ ಹಣೆಗೆ ಕುಂಕುಮ ಹಚ್ಚಿ ದರ್ಶನ್ ಹಾಜರಾಗಿದ್ದಾರೆ.ಅರ್ಜಿ ಬಗ್ಗೆ ಪ್ರತಿಕ್ರಿಯೆ ನೀಡಲು ದರ್ಶನ್ ಸೇರಿದಂತೆ ಆರೋಪಿಗಳ ಪರ ವಕೀಲರು ಕಾಲಾವಕಾಶ ಕೋರಿದರು. 5000ಕ್ಕೂ ಹೆಚ್ಚಿನ ದಾಖಲೆಗಳು ಇರುವುದರಿಂದ 15 ದಿನ ಸಮಯಕ್ಕೆ ಮನವಿ ಮಾಡಿದರು. ಬಳಿಕ 57ನೇ ಇಇಏ ಕೋರ್ಟ್ ವಿಚಾರಣೆಯನ್ನು ನವೆಂಬರ್ 19ಕ್ಕೆ ಮುಂದೂಡಿತು.
ವಿಡಿಯೋ ಕಾನ್ಫರ್ಸ್ ಮೂಲಕ ನಟ ದರ್ಶನ್ ಹಾಜರು
ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


