--ಇಲ್ಲಿ ಜಾಹೀರಾತು--

ಖಾಸಗಿ ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾವು

On: December 2, 2025 2:17 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಕೋಲಾರ: ಖಾಸಗಿ ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಂಚಿನೀಳ್ಳಕೋಟೆ ಗ್ರಾಮದ ಬಳಿ ಮುಂಜಾನೆ ನಸುಕಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಹರಿತ ಟ್ರಾವೆಲ್ಸ್ ನ ಖಾಸಗಿ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ರಭಸಕ್ಕೆ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಪೊದುಟೂರು ಮೂಲದ ಅನಿತಾ (58) ಮೃತ ಮಹಿಳೆ. ಅಪಘಾತದಲ್ಲಿ ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.
ಖಾಸಗಿ ಬಸ್ ಆಂದ್ರಪ್ರದೇಶದ ಬದ್ವೆಲ್ ನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ಡಿವೈಡರ್ ಗೆ ಡಿಕ್ಕಿಯಾಗಿದೆ. ಗಾಯಾಳುಗಳನ್ನು ಆಂಧ್ರಪ್ರದೇಶದ ಮದನಪಲ್ಲಿ ಹಾಗೂ ಶ್ರೀನಿವಾಸಪುರ, ಕೋಲಾರ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now