
ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಆರೋಪಿಗಳಾಗಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಮತ್ತು ತರುಣ್ ಕೊಂಡೂರು ರಾಜು ಬಂಧನ ಕಾನೂನು ಬಾಹಿರ ಎಂದು ಕೋರಿ ಸಲ್ಲಿಸಿದ ಅರ್ಜಿಗಳ ಬಗ್ಗೆ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ.
ಇವರನ್ನು ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳ ಸಾಗಣೆ ಚಟುವಟಿಕೆ ತಡೆ ಕಾಯ್ದೆ (ಕಾಫಿಪೋಸಾ) ಅಡಿ ಬಂಧಿಸಿರುವುದು ಕಾನೂನು ಬಾಹಿರ ಎಂದು ಘೋಷಿಸುವಂತೆ ಅರ್ಜಿ ಸಲ್ಲಿಸಲಾಗಿತ್ತು. ರನ್ಯಾ ಮಲತಾಯಿ ರೋಹಿಣಿ ಮತ್ತು ತರುಣ್ ತಾಯಿ ರಮಾ ರಾಜು ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ ಅರ್ಜಿಗಳ ವಿಚಾರಣೆಯನ್ನು ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ವಿಚಾರಣೆ ಪೂರ್ಣಗೊಳಿಸಿದ ನ್ಯಾಯಪೀಠ ಆದೇಶ ಕಾಯ್ದಿರಿಸಿತು.
ರನ್ಯಾ ರಾವ್ ಅರ್ಜಿ ವಿಚಾರಣೆ- ಕಾಯ್ದಿರಿಸಿದ ಆದೇಶ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


