![]()
ನೆಲಮಂಗಲ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಮತ್ತು ಮಗ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಹೆಸರಘಟ್ಟ-ರಾಜಾನುಕಂಟೆ ರಸ್ತೆಯ ತೋಟಗೆರೆ ಬಳಿ ಶುಕ್ರವಾರ ಸಂಭವಿಸಿದೆ.
ಅಪಘಾತದಲ್ಲಿ ಸಾಪ್ಟ್ ವೇರ್ ಇಂಜಿನಿಯರ್ ಹರೀಶ್ (39) ಹಾಗೂ ಅವರ ತಂದೆ ವೀರಭದ್ರ (80) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ, ಹರೀಶ್ ಅವರ ತಾಯಿ ಗೌರಮ್ಮ (62), ಪತ್ನಿ ಮೈತ್ರಿ (32), ಮಗಳು ಸಿರಿ (10) ಹಾಗೂ ಚಿಕ್ಕಮ್ಮನ ಮಗಳು ವಂದನ (8) ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಕ್ರಿಸ್ ಮಸ್ ಹಬ್ಬದ ಹಿನ್ನೆಲೆಯಲ್ಲಿ, ರಜೆ ಇದ್ದ ಕಾರಣ ಹರೀಶ್ ಕುಟುಂಬ ಸಮೇತರಾಗಿ ಗೌರಿಬಿದನೂರಿಗೆ ತೆರಳಿದ್ದರು. ಗೌರಿಬಿದನೂರಿನಲ್ಲಿ ಜಮೀನು ನೋಡಿಕೊಂಡು ವಾಪಸ್ ಆಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.
ರೈಲ್ವೆ ಗೊಲ್ಲಹಳ್ಳಿಯಿಂದ ಹೆಸರಘಟ್ಟ ಮಾರ್ಗವಾಗಿ ದಾಸರಹಳ್ಳಿಗೆ ತೆರಳುತ್ತಿದ್ದ ವೇಳೆ ತೋಟಗೆರೆ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಗುದ್ದಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಇಬ್ಬರ ಸಾ*
ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


