
ಉಡುಪಿ: ಸರಣಿ ಅಪಘಾತದ ವೇಳೆ ಪಾದಚಾರಿಮೇಲೆ ಕ್ಯಾಂಟರ್ ಮಗುಚಿ ಬಿದ್ದ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದಲ್ಲಿ ನಡೆದಿದೆ. ಲಾರಿ ಮತ್ತು ಕ್ಯಾಂಟರ್ ನಡುವೆ ಮೊದಲು ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಕ್ಯಾಂಟರ್ ಪಲ್ಟಿಯಾಗಿದೆ. ಈ ವೇಳೆ ಹಿಂಬದಿಯಲ್ಲಿ ಬರುತ್ತಿದ್ದ ಮತ್ತೊಂದು ಕಾರು ಕೂಡ ಜಖಂ ಆಗಿದೆ. ಕ್ಯಾಂಟರ್ ದಾವಣಗೆರೆಯಿಂದ ಮಂಗಳೂರಿಗೆ ಮೊಟ್ಟೆ ಸಾಗಿಸುತ್ತಿದ್ದರೆ, ಕಾರು ಬೆಳ್ಮಣ್ ನಿಂದ ಕಾರ್ಕಳ ಕಡೆಗೆ ಬರುತ್ತಿತ್ತು. ಅಪಘಾತದಲ್ಲಿ ಪಾದಚಾರಿ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಪಾದಚಾರಿಮೇಲೆ ಬಿದ್ದ ಕ್ಯಾಂಟರ್

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


