ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ಬಾಂಬ್ ಬೆದರಿಕೆ ಬಿಗಿ ಭದ್ರತೆಯಲ್ಲಿ ಶೋಧ ಕಾರ್ಯ

ತುಮಕೂರು: ಜಿಲ್ಲಾಧಿಕಾರಿಗಳ ಕಚೇರಿಗೆ ಮಂಗಳ ಬೆಳಗ್ಗೆ ಬಂದ ಬಾಂಬ್ ಬೆದರಿಕೆ ಇ-ಮೇಲ್ ನಿಂದಾಗಿ ಇಡೀ ಜಿಲ್ಲಾಡಳಿತ ಕಚೇರಿಯಲ್ಲಿ ಕೆಲಕಾಲ ತೀವ್ರ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಬೆಳಗ್ಗೆ ಸುಮಾರು 7 ಗಂಟೆಗೆ ಡಿಸಿ ಅವರ ಅಧಿಕೃತ ಇ-ಮೇಲ್ ವಿಳಾಸಕ್ಕೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಸಂದೇಶ ಬಂದಿತ್ತು. ವಿಷಯ ತಿಳಿಯುತ್ತಿದ್ದಂತೆ, ಜಿಲ್ಲಾಡಳಿತ ಕಚೇರಿಗೆ ಶ್ವಾನ ದಳ, ಬಾಂಬ್ ನಿಷ್ಕ್ರಿಯ ದಳ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳ ತಂಡ ಧಾವಿಸಿತು. ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ನೇತೃತ್ವದಲ್ಲಿ ಇಡೀ ಡಿಸಿ ಕಚೇರಿ ಸಂಕೀರ್ಣ … Read more

ಲೈಂಗಿಕ ದೌರ್ಜನ್ಯ- ಯುವತಿ ಆತ್ಮಹತ್ಯೆ

ರಾಮನಗರ: ಪ್ರೀತಿ ಹೆಸರಲ್ಲಿ ಸಲುಗೆಯಿಂದ ವರ್ತಿಸಿ, ನಂತರ ನನ್ನ ಖಾಸಗಿ ಫೋಟೋಗಳನ್ನು ತೋರಿಸಿ, ಹೆದರಿಸಿ ಲೈಂಗಿಕವಾಗಿ ಬಳಸಿಕೊಂಡು ವಂಚಿಸಿದ ಹಿನ್ನಲೆ ಯುವತಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದ ವಿಭೂತಿಕೆರೆ ಗ್ರಾಮದ ಯುವತಿ 22 ವರ್ಷದ ವರ್ಷಿಣಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ತುಮಕೂರಿನ ಕುಣಿಗಲ್ ಮೂಲದ ಅಭಿ ಎಂಬಾತನ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ವರ್ಷಿಣಿ ಮೈಸೂರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಸಾಯುವ ಮುನ್ನ ವರ್ಷಿಣಿ ಡೆತ್ … Read more

ಮಗನಿಗೆ ವಿಷ ಕುಡಿಸಿ ತಾಯಿ, ಅಜ್ಜಿ ಆತ್ಮಹತ್ಯೆ

ಬೆಂಗಳೂರು: ಸಾಲಕ್ಕೆ ಹೆದರಿ ಮಗನಿಗೆ ವಿಷ ಕುಡಿಸಿ ನಂತರ ತಾಯಿ ಮತ್ತು ಅಜ್ಜಿ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋರಮಂಗಲದ ತಾವರೆಕೆರೆ ಬಳಿಯ ಎಸ್.ಜಿ ಪಾಳ್ಯದಲ್ಲಿ ಈ ಘಟನೆ ನಡೆದಿದೆ. 14 ವರ್ಷದ ಮಗ ಮೌನೀಶ್ ಗೆ ವಿಷವುಣಿಸಿದ ನಂತರ ತಾಯಿ ಸುಧಾ, ಅಜ್ಜಿ ಮುದ್ದಮ್ಮ ತಾವು ವಿಷ ಸೇವಿಸಿ ಆತ್ಮಹತ್ಯೆ ಮಾಡಿದ್ದಾರೆ. ಎಸ್.ಜಿ ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಗಂಡನಿಂದ ಬೇರೆಯಾಗಿದ್ದ ಸುಧಾ ಬಿರಿಯಾನಿ ಮಾರಾಟ ಮಾಡಿ ಜೀವನ ನಡೆಸುತ್ತಿದ್ದರು. … Read more

ಸರ್ಕಾರದ ಆಡಳಿತ ಜನರಿಗೆ ಅಸಹ್ಯ ಹುಟ್ಟಿಸಿದೆ

ಶಿರಸಿ: ಕಾಂಗ್ರೆಸ್ ಸರ್ಕಾರದ ಆಡಳಿತ ಜನರಿಗೆ ಅಸಹ್ಯ ಹುಟ್ಟಿಸಿದೆ ಎಂದು ಕೇಂದ್ರ ರೇಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಶ್ರೀಮಾರಿಕಾಂಬಾ ದೇವಸ್ಥಾನಕ್ಕೆ ಭೇಟಿ ನೀಡಿ ದರುಶನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಆಡಳಿತ ಪಕ್ಷದಲ್ಲಿ 140 ಶಾಸಕರಿದ್ದರೂ ಸಹ ಸಮಾಧಾನದಿಂದ ಆಡಳಿತ ಮಾಡಲು ಸಾಧ್ಯವಾಗುತ್ತಿಲ್ಲ. ಜನಾದೇಶವಿದ್ದರೂ ಅದನ್ನು ಸರಿಯಾಗಿ ಉಪಯೋಗಿಸಿಕೊಳ್ಳಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಅಪ್ಪ ಒಂದು ಕಡೆ, ಅಮ್ಮ ಒಂದು ಕಡೆ, ಈ ನಡುವೆ ಕೂಸು ಬಡವಾಯಿತು ಎಂಬ ದಾಸಯ್ಯನ ಕಥೆಯಂತೆ ರಾಜ್ಯದ ಸ್ಥಿತಿ ಅಷ್ಟೊಂದು … Read more

ನಟ ದರ್ಶನ್ಗೆ ಮತ್ತೊಂದು ಶಾಕ್ ಕೊಟ್ಟ ಕೋರ್ಟ್!

ಬೆಂಗಳೂರು: ದರ್ಶನ್ ನಿವಾಸದಲ್ಲಿ ಪತ್ತೆಯಾಗಿರುವ 82 ಲಕ್ಷ ರೂ. ಹಣವನ್ನು ಆದಾಯ ತೆರಿಗೆ ಇಲಾಖೆಯಲ್ಲೇ ಇರಲಿ ಎಂದು 57ನೇ ಸಿಸಿಎಚ್ ಕೋರ್ಟ್ ಆದೇಶಿಸಿದೆ. ತನಿಖೆ ಸಂದರ್ಭದಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ದರ್ಶನ್ ಮನೆ ಮತ್ತು ಪ್ರದೋಷ್ ಮನೆಯಲ್ಲಿ ಹಣ ವಶಕ್ಕೆ ಪಡೆದು ಆದಾಯ ತೆರಿಗೆ ಇಲಾಖೆಗೆ ವರ್ಗಾವಣೆ ಮಾಡಿದ್ದರು. ತನಿಖೆ ನಡೆಸಿದ ಐಟಿ ಇನ್ನೂ ಸ್ಪಷ್ಟ ಮಾಹಿತಿ ನೀಡಿರಲಿಲ್ಲ. ಈ ಸಂದರ್ಭದಲ್ಲಿ ದರ್ಶನ್ 83 ಲಕ್ಷ ಹಣ ವಾಪಸ್ ನೀಡಲು ಕೋರ್ಟ್ಗೆ ಮನವಿ ಮಾಡಿದ್ದರು. ದರ್ಶನ್ ಅರ್ಜಿಗೆ ಆಕ್ಷೇಪಣೆ … Read more

ಖಾಸಗಿ ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿ: ಮಹಿಳೆ ಸ್ಥಳದಲ್ಲೇ ಸಾವು

ಕೋಲಾರ: ಖಾಸಗಿ ಬಸ್ ಡಿವೈಡರ್ ಗೆ ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಂಚಿನೀಳ್ಳಕೋಟೆ ಗ್ರಾಮದ ಬಳಿ ಮುಂಜಾನೆ ನಸುಕಿನ ಜಾವ ಸುಮಾರು 3 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಹರಿತ ಟ್ರಾವೆಲ್ಸ್ ನ ಖಾಸಗಿ ಬಸ್ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ರಭಸಕ್ಕೆ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಪೊದುಟೂರು ಮೂಲದ ಅನಿತಾ (58) ಮೃತ ಮಹಿಳೆ. ಅಪಘಾತದಲ್ಲಿ ಹಲವು ಪ್ರಯಾಣಿಕರಿಗೆ ಗಂಭೀರ … Read more

ರನ್ಯಾ ರಾವ್ ಅರ್ಜಿ ವಿಚಾರಣೆ- ಕಾಯ್ದಿರಿಸಿದ ಆದೇಶ

ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಆರೋಪಿಗಳಾಗಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಮತ್ತು ತರುಣ್ ಕೊಂಡೂರು ರಾಜು ಬಂಧನ ಕಾನೂನು ಬಾಹಿರ ಎಂದು ಕೋರಿ ಸಲ್ಲಿಸಿದ ಅರ್ಜಿಗಳ ಬಗ್ಗೆ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ. ಇವರನ್ನು ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳ ಸಾಗಣೆ ಚಟುವಟಿಕೆ ತಡೆ ಕಾಯ್ದೆ (ಕಾಫಿಪೋಸಾ) ಅಡಿ ಬಂಧಿಸಿರುವುದು ಕಾನೂನು ಬಾಹಿರ ಎಂದು ಘೋಷಿಸುವಂತೆ ಅರ್ಜಿ ಸಲ್ಲಿಸಲಾಗಿತ್ತು. ರನ್ಯಾ ಮಲತಾಯಿ ರೋಹಿಣಿ ಮತ್ತು ತರುಣ್ ತಾಯಿ ರಮಾ ರಾಜು ಸಲ್ಲಿಸಿರುವ ಹೇಬಿಯಸ್ ಕಾರ್ಪಸ್ … Read more

ಮಹಿಳೆಯ ಕತ್ತು ಸೀಳಿ ಬರ್ಬರ ಹತ್ಯೆ

ತುಮಕೂರು: ಮಹಿಳೆಯ ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಸಿಎಸ್ ಪುರದ ಹಿಂಡಸ್ ಗೆರೆಯ ತೋಟದ ಮನೆಯಲ್ಲಿ ನಡೆದಿದೆ. ಮಂಜುಳ (38) ಕೊಲೆಯಾದ ಮಹಿಳೆ, ಮಂಜುಳ ತನ್ನ ಗಂಡ ಕಾಲವಾದ ಬಳಿಕ ಮಗನ ಜೊತೆ ತೋಟದ ಮನೆಯಲ್ಲಿ ವಾಸವಾಗಿದ್ದಳು. ತೋಟ ನೋಡಿಕೊಂಡು ಜೀವನ ಮಾಡುತಿದ್ದ ಮಂಜುಳ, ಇತ್ತೀಚಿಗೆ ಮಗನಿಗೆ ಮದುವೆ ಕೂಡ ಮಾಡಿದ್ದಳು. ಇದೀಗ ಮಗ ತನ್ನ ಹೆಂಡತಿ ಮನೆಗೆ ಹೊಗಿದ್ದಾಗ ಹಂತಕ ಕೃತ್ಯ ಎಸಗಿ ಪರಾರಿಯಾಗಿದ್ದಾನೆ. ಮಂಜುಳನ ಗಂಡನ ಸಹೋದರ … Read more

ಮಾಜಿ ಶಾಸಕ ಆರ್.ವಿ.ದೇವರಾಜ್ ನಿಧನ

ಬೆಂಗಳೂರು: ಮಾಜಿ ಶಾಸಕ ಆರ್.ವಿ.ದೇವರಾಜ್ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ರಾಜ್ಯದ ಹಲವು ಹಿರಿಯ ರಾಜಕಾರಣಿಗಳು ಆರ್ ವಿಡಿ ಎಂದೇ ಹೆಸರಾಗಿದ್ದ ಆರ್.ವಿ.ದೇವರಾಜ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಚಿಕ್ಕಪೇಟೆಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನ್ಕಕೆ ಸಿದ್ದತೆ ಮಾಡಲಾಗಿದ್ದು, ಬುಧವಾರ ಅವರ ಹುಟ್ಟುಹಬ್ಬದ ದಿನವೇ ಹುಟ್ಟೂರಾದ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ರಾಜಕಾರಣಿಗಳು ಆರ್ ವಿ ನಿಧನಕ್ಕೆ ವಿಷಾದ ವ್ಯಕ್ತಪಡಿಸಿದ್ದು ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.