--ಇಲ್ಲಿ ಜಾಹೀರಾತು--

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು

On: January 26, 2026 3:01 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ತುಮಕೂರು: ತುಮಕೂರು ತಾಲೂಕಿನ ನೆಲಹಾಳ್ ಸಮೀಪ ಇಂದು ಸೋಮವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತರೆಲ್ಲರೂ ಬೆಂಗಳೂರು ಮೂಲದ ನಿವಾಸಿಗಳಾಗಿದ್ದಾರೆ.
ಅಪಘಾತದಲ್ಲಿ ಮಾರುತಿ ಎರ್ಟಿಗಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ಇನ್ನಿಬ್ಬರು ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪ್ರವಾಸ ಮುಗಿಸಿ ವಾಪಸ್ ಬರುವಾಗ ದುರಂತ
ಮೃತರು ಗೋಕರ್ಣ, ಮುರುಡೇಶ್ವರ ಹಾಗೂ ಉಡುಪಿ ಕಡೆ ಪ್ರವಾಸಕ್ಕೆ ತೆರಳಿ ಪ್ರವಾಸ ಮುಗಿಸಿ ಇಂದು ಬೆಂಗಳೂರಿಗೆ ವಾಪಸ್ ಆಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆವಿ ಹಾಗೂ ಕೋರಾ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now