--ಇಲ್ಲಿ ಜಾಹೀರಾತು--

ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ

On: January 30, 2026 2:20 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೇರಳ ಮೂಲದ, 57 ವರ್ಷದ ಸಿಜೆ ರಾವ್ ಅವರು ಕಾನ್ಫಿಡೆಂಟ್ ಗ್ರೂಪ್ ಎಂಬ ಪ್ರಮುಖ ರಿಯಲ್ ಎಸ್ಟೇಟ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕಂಪನಿಯ ಸಂಸ್ಥಾಪಕರಾಗಿದ್ದರು.
ಇಂದು ಸಂಜೆ ಬೆಂಗಳೂರಿನ ಆನೇಪಾಳ್ಯದಲ್ಲಿರೋ ತಮ್ಮ ಕಚೇರಿಯಲ್ಲಿ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಸ್ಥಳಕ್ಕೆ ಅಶೋಕನಗರ ಠಾಣೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.
ತಮ್ಮ ಕುಟುಂಬದ ಮೇಲೆ ಪದೇ ಪದೆ ಆದಾಯ ತೆರಿಗೆ ಇಲಾಖೆ ನಡೆಸುತ್ತಿದ್ದ ದಾಳಿಗೆ ಹೆದರಿ ಸಿಜೆ ರಾಯ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಸಹ ಐಟಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ಈ ವೇಳೆ ಪಿಸ್ತೂಲ್ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now