ವಿವಿಧ ಬೇಡಿಕೆಗಳ ಈಡೇರಿಕೆಗೆ ಆಶಾ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
ಬೆಂಗಳೂರು: ಗೌರವ ಧನ ಹೆಚ್ಚಳ ಮಾಡಬೇಕು ಹಾಗೂ ಕೆಲಸದಿಂದ ವಜಾಗೊಳಿಸುವ ನಿರ್ಧಾರವನ್ನು ಕೂಡಲೇ ಕೈಬಿಡುವಂತೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಶುಕ್ರವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು. ಆರೋಗ್ಯ ಇಲಾಖೆಯ ಬೆನ್ನೆಲುಬಾಗಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಆರೋಗ್ಯ ಸೇವೆಗಳನ್ನು ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಆದರೆ, … Read more






