--ಇಲ್ಲಿ ಜಾಹೀರಾತು--

ರಸ್ತೆ ಅಪಘಾತ: ಮೂವರು ಸಾವು

On: February 11, 2026 2:15 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ರಾಯಚೂರು: ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಓರ್ವ ಗರ್ಭಿಣಿ ಸೇರಿದಂತೆ ಒಟ್ಟು ಮೂವರು ಮೃತಪಟ್ಟು, 12 ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ದೇವದುರ್ಗ ತಾಲೂಕಿನ ಕರಿಗುಡ್ಡ ಗ್ರಾಮದ ಬಳಿ ಟಂಟಂ ಆಟೋ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ಸೇರಿದ ಬಸ್ ನಡುವೆ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಗರ್ಭಿಣಿ ಮೊನ್ನಮ್ಮ(30) ಹಾಗೂ ಕರಿಗುಡ್ಡ ಗ್ರಾಮದ ಮಲ್ಲಪ್ಪ(47) ಎಂಬುವರು ಮೃತಪಟ್ಟಿದ್ದಾರೆ.
ಗಂಭೀರ ಗಾಯಗೊಂಡಿದ್ದ ಮಲ್ಲಪ್ಪ ಸ್ಥಳದಲ್ಲೇ ಮೃತಪಟ್ಟರೆ, ಮೊನ್ನಮ್ಮ ಚಿಕಿತ್ಸೆ ಫಲಕಾರಿಯಾಗದೇ ಸ್ಥಳೀಯ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಮಾಹಿತಿ ಲಭ್ಯವಾಗಿದೆ. ಗಾಯಗೊಂಡ 12ಕ್ಕೂ ಹೆಚ್ಚು ಜನ ಜಿಲ್ಲಾಸ್ಪತ್ರೆ ರಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ದೇವದುರ್ಗ-ರಾಯಚೂರು ಮಾರ್ಗವಾಗಿ ಸಂಚರಿಸುವ ಸಾರಿಗೆ ಬಸ್, ಟಂಟಂ ಓರ್ವ ಟೇಕ್ ಮಾಡಲು ಹೋದಾಗ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ವೇಳೆ ಟಂಟಂ ಪಲ್ಟಿಯಾಗಿ ಈ ಅಪಘಾತ ಸಂಭವಿಸಿದೆ ಎಂದು ದೇವದುರ್ಗ ಪೊಲೀಸರು ತಿಳಿಸಿದ್ದಾರೆ. ಮೃತರಿಬ್ಬರು ಟಂಟಂ ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ದೇವದುರ್ಗ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಈ ಬಗ್ಗೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now