
ಬೆಂಗಳೂರು: ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ’ನಂದಿನಿ’ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ.
ಈ ಬಗ್ಗೆ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ. ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ ಪ್ರಮುಖ ಭಾಗವಾದ ಬೆಂಗಳೂರು ಹಾಲು ಒಕ್ಕೂಟ ನಟಿ ಸುಧಾರಾಣಿ ಅವರನ್ನು ನಂದಿನಿ ಉತ್ಪನ್ನಗಳ ನೂತನ ಪ್ರಚಾರದ ರಾಯಭಾರಿಯನ್ನಾಗಿ ನೇಮಿಸಲಾದ ಬಗ್ಗೆ ಅಧಿಕೃತವಾಗಿ ಘೋಷಿಸಿದೆ.
ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ಶ್ರೀಮತಿ ಸುಧಾ ರಾಣಿ ಅವರು ಆಯ್ಕೆಯಾಗಿದ್ದು, ಬಮೂಲ್ ಕುಟುಂಬಕ್ಕೆ ಅವರನ್ನು ಪ್ರೀತಿಯಿಂದ ಸ್ವಾಗತಿಸುತ್ತೇವೆ ಎಂದು ಡಿಕೆ ಸುರೇಶ್ ಅವರು ಬರೆದುಕೊಂಡಿದ್ದಾರೆ.
ನಂದಿನಿ ಬ್ರ್ಯಾಂಡ್ನ ಮೌಲ್ಯಗಳನ್ನು ಜನರಿಗೆ ತಲುಪಿಸಲು ಸುಧಾರಾಣಿ ಅವರಂತಹ ವಿಶ್ವಾಸಾರ್ಹ ವ್ಯಕ್ತಿತ್ವದ ಅಗತ್ಯವಿತ್ತು. ಅವರ ಸರಳತೆ ಮತ್ತು ಕೌಟುಂಬಿಕ ಗೌರವ ನಂದಿನಿ ಉತ್ಪನ್ನಗಳ ಗುಣಮಟ್ಟಕ್ಕೆ ಹೊಸ ಮೆರುಗು ನೀಡಲಿದೆ ಎಂದಿದ್ದಾರೆ. ತಲೆಮಾರುಗಳಿಂದ ಪ್ರತಿಯೊಬ್ಬ ಕನ್ನಡಿಗನ ನಂಬಿಕೆಯ ಪ್ರತೀಕ ನಂದಿನಿ. ರೈತರ ಸಹಕಾರಿ ಸಂಸ್ಥೆಯಾದ ಬಮುಲ್ ನಂದಿನಿ ಜೊತೆ ಒಡಗೂಡುವ ಅವಕಾಶ ನನಗೆ ಅತ್ಯಂತ ಗೌರವದ ವಿಷಯ
’ನಂದಿನಿ’ ಬ್ರ್ಯಾಂಡ್ ಗೆ ನಟಿ ಸುಧಾರಾಣಿ ರಾಯಭಾರಿ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


