
ದೇವನಹಳ್ಳಿ: ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ 7 ಜನ ದುರ್ಮರಣ ಹೊಂದಿದ್ದು, ಅಪಘಾತದಲ್ಲಿ ಬದುಕುಳಿದ ಕ್ಯಾಂಟರ್ ಚಾಲಕ ಘಟನೆಯ ಕುರಿತು ವಿವರಿಸಿದ್ದಾರೆ. ಮಾಲೂರು ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ವಾಹನ ಕ್ಯಾಂಟರ್ ಗೆ ಗುದ್ದಿದೆ. ಇದರಿಂದ ಕ್ಯಾಂಟರ್ ಪಲ್ಟಿಯಾಗಿದ್ದು, ಸ್ಥಳೀಯರು ಸಹಾಯಕ್ಕೆ ಬಂದು ತನ್ನನ್ನು ಮೇಲೆತ್ತಿದ್ದಾರೆ. ಬಳಿಕ ಸ್ಥಳೀಯರ ಸಹಾಯದಿಂದ ಸ್ನೇಹಿತರಿಗೆ ಕರೆ ಮಾಡಿ, ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ.
ಭೀಕರ ಸರಣಿ ಅಪಘಾತ: 7 ಜನ ದುರ್ಮರಣ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


