
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡಗೆ ಮತ್ತೆ ನಿರಾಸೆಯಾಗಿದ್ದು, ಅವರ ಮಧ್ಯಂತರ ಜಾಮೀನು ಅರ್ಜಿ ವಜಾ ಆಗಿದೆ.
ಮಗಳಿಗೆ ಪರೀಕ್ಷೆ ಸಮೀಪಿಸಿದ್ದರಿಂದ ಮಧ್ಯಂತರ ಜಾಮೀನು ನೀಡಬೇಕು ಎಂದು ಪವಿತ್ರಾ ಅವರು ಕೋರ್ಟ್ನಲ್ಲಿ ಕೋರಿದ್ದರು. ಆದರೆ, 57ನೇ ಸೆಷ್ಸ್ ಕೋರ್ಟ್ ಈ ಮನವಿ ತಿರಸ್ಕರಿಸಿದೆ.
ಈ ಮೊದಲು ಪವಿತ್ರಾ ಅವರು ಮನೆ ಊಟಕ್ಕೆ ಬೇಡಿಕೆ ಇಟ್ಟಿದ್ದರು. ಜೈಲು ಊಟದಿಂದ ಆರೋಗ್ಯ ಸಮಸ್ಯೆ ಆಗುತ್ತಿದೆ ಎಂದು ಹೇಳಿದ್ದರು. ಕೆಲ ದಿನ ಇದಕ್ಕೆ ಅವಕಾಶ ಇತ್ತು, ನಂತರ ಅದನ್ನು ರದ್ದು ಮಾಡಲಾಗಿತ್ತು.
ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


