--ಇಲ್ಲಿ ಜಾಹೀರಾತು--

ಚಿನ್ನದ ಸರ ಕಸಿದ ಕಳ್ಳನ ಬಂಧನ

On: February 17, 2026 2:29 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಬೆಂಗಳೂರು: ನಗರದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಕಸಿದು ಓಡುತ್ತಿದ್ದ ಕಳ್ಳನನ್ನು ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಸಿಬ್ಬಂದಿ ಧೈರ್ಯವಾಗಿ ಬೆನ್ನಟ್ಟಿ ಹಿಡಿದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕರ್ತವ್ಯ ಸಮಯ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲೇ ಪೇದೆ ಹನುಮಂತ ಪುಟಾಣಿ ಈ ಸಾಹಸ ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಫೆಬ್ರವರಿ 5 ರಂದು ದಾಕ್ಷಾಯಣಿ ಎಂಬ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಲು ಯತ್ನಿಸುತ್ತಿದ್ದ ಸೈಯದ್ ಜಾಫರ್ ಎಂಬಾತನನ್ನು ಅವರು ಗಮನಿಸಿದ್ದರು. ಕೂಡಲೇ ಪ್ರತಿಕ್ರಿಯಿಸಿದ ಹನುಮಂತ ಪುಟಾಣಿ ಸುಮಾರು ಒಂದು ಕಿಲೋಮೀಟರ್ ದೂರ ಓಡಿ ಆರೋಪಿಯನ್ನು ಬೆನ್ನಟ್ಟಿ ಹಿಡಿದು ಪೊಲೀಸರಿಗೆ ಒಪ್ಪಿಸಿದರು. ಅವರ ತಕ್ಷಣದ ಕ್ರಮದಿಂದ ಕಳ್ಳತನ ನಡೆದ ಕೆಲವೇ ಕ್ಷಣಗಳಲ್ಲಿ ಆರೋಪಿಯನ್ನು ಬಂಧಿಸಲು ಸಾಧ್ಯವಾಯಿತು.
ಬಂಧಿತನಿಂದ ಸುಮಾರು 40 ಗ್ರಾಂ ತೂಕದ, ಅಂದಾಜು 6 ಲಕ್ಷ ರೂಪಾಯಿ ಮೌಲ್ಯದ ಚಿನ್ನದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಕುರಿತು ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.
ಪೋಲೀಸ್ ಆಯುಕ್ತರು ಹನುಮಂತ ಪುಟಾಣಿಯ ಕರ್ತವ್ಯ ನಿಷ್ಠೆ ಮತ್ತು ಧೈರ್ಯವನ್ನು ಪ್ರಶಂಸಿಸಿದ್ದು, ಸರ ಕಳೆದುಕೊಂಡ ಮಹಿಳೆಯೂ ಅವರ ಸಮಯೋಚಿತ ನೆರವಿಗೆ ಸಂತೋಷ ವ್ಯಕ್ತಪಡಿಸಿದ್ದಾರೆ.

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now