ನ್ಯಾಯಾಲಯ ಸ್ಫೋಟಿಸುವ ಬೆದರಿಕೆ ಕರೆ

ಮಂಡ್ಯ: ಮಂಡ್ಯ ಜಿಲ್ಲಾ ನ್ಯಾಯಾಲಯ ಸ್ಫೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಧಿಕಾರಿಗಳು ತೀವ್ರ ಪರಿಶೀಲನೆ ನಡೆಸಿದರು. ಮಂಡ್ಯ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಕರೆ ಬಂದಿದ್ದು, ಅಲರ್ಟ್ ಆದ ಪೊಲೀಸರು ತಕ್ಷಣವೇ ಎಲ್ಲರನ್ನೂ ಹೊರ ಕಳುಹಿಸಿ ಪರಿಶೀಲನೆ ನಡೆಸಿದರು. ಸದ್ಯ ಪೊಲೀಸರು ಹಾಗು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಪರಿಶೀಲನೆ ನಡೆಸಿದ್ದು ಯಾವುದೇ ಸ್ಪೋಟಕ ವಸ್ತುಗಳು ಪತ್ತೆಯಾಗಲಿಲ್ಲ, ಕೋರ್ಟ್ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಕ್ಷುಲ್ಲಕ ಕಾರಣ ಮಾರಣಾಂತಿಕ ಹಲ್ಲೆ

ಗುಬ್ಬಿ: ತಾಲ್ಲೂಕಿನ ಅಮ್ಮನಘಟ್ಟ ಗ್ರಾಮದಲ್ಲಿ ಕ್ಷುಲ್ಲಕ ಕಾರಣವೊಂದಕ್ಕೆ ನಡೆದ ಭೀಕರ ದಾಳಿ ಜನತೆಯನ್ನು ಬೆಚ್ಚಿಬೀಳಿಸಿದೆ. ಬೈಕ್ ನಿಲ್ಲಿಸುವ ವಿಚಾರದಲ್ಲಿ ಶುರುವಾದ ಮಾತಿನ ಚಕಮಕಿ ಕೊನೆಗೆ ರಕ್ತಪಾತದಲ್ಲಿ ಅಂತ್ಯವಾಗಿದ್ದು, ಒಂದೇ ಕುಟುಂಬದ ಆರು ಮಂದಿ ಮಾರಣಾಂತಿಕ ಹಲ್ಲೆಗೊಳಗಾಗಿದ್ದಾರೆ. ಅಮ್ಮನಘಟ್ಟದ ಮಾರುತಿನಗರ ಬಡಾವಣೆಯ ನಿವಾಸಿ ದಿಲೀಪ್ ಸಂಜೆ ಗುಬ್ಬಿಯಿಂದ ಮನೆಗೆ ಹಿಂದಿರುಗಿದಾಗ ರಸ್ತೆ ಬದಿಯಲ್ಲಿ ಬೈಕ್ ನಿಲ್ಲಿಸಿದ್ದರು. ಇದನ್ನೇ ನೆಪವಾಗಿಸಿಕೊಂಡ ನೆರೆಮನೆಯ ಎಂಟು ಮಂದಿ ಏಕಾಏಕಿ ಅಶ್ಲೀಲ ಪದಗಳಿಂದ ನಿಂದಿಸಲು ಆರಂಭಿಸಿದರು. ದಿಲೀಪ್ ಬೈಕ್ ತೆಗೆಯುವ ಮೊದಲೇ ದೊಣ್ಣೆ, ಗುದ್ದಲಿ … Read more

ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡಗೆ ಮತ್ತೆ ನಿರಾಸೆಯಾಗಿದ್ದು, ಅವರ ಮಧ್ಯಂತರ ಜಾಮೀನು ಅರ್ಜಿ ವಜಾ ಆಗಿದೆ. ಮಗಳಿಗೆ ಪರೀಕ್ಷೆ ಸಮೀಪಿಸಿದ್ದರಿಂದ ಮಧ್ಯಂತರ ಜಾಮೀನು ನೀಡಬೇಕು ಎಂದು ಪವಿತ್ರಾ ಅವರು ಕೋರ್ಟ್ನಲ್ಲಿ ಕೋರಿದ್ದರು. ಆದರೆ, 57ನೇ ಸೆಷ್ಸ್ ಕೋರ್ಟ್ ಈ ಮನವಿ ತಿರಸ್ಕರಿಸಿದೆ. ಈ ಮೊದಲು ಪವಿತ್ರಾ ಅವರು ಮನೆ ಊಟಕ್ಕೆ ಬೇಡಿಕೆ ಇಟ್ಟಿದ್ದರು. ಜೈಲು ಊಟದಿಂದ ಆರೋಗ್ಯ ಸಮಸ್ಯೆ ಆಗುತ್ತಿದೆ ಎಂದು ಹೇಳಿದ್ದರು. ಕೆಲ ದಿನ ಇದಕ್ಕೆ ಅವಕಾಶ ಇತ್ತು, ನಂತರ … Read more

ನಂದಿಬೆಟ್ಟಕ್ಕೆ ಹೋಗಬೇಕು ಎಂದುಕೊಂಡ ಪ್ರೇಮಿಗಳಿಗೆ ಬೇಸರ

ಫೆ.14 ರಂದು ನಂದಿಬೆಟ್ಟ ಬಂದ್ ಚಿಕ್ಕಬಳ್ಳಾಪುರ: ವಿಶ್ವ ಪ್ರೇಮಿಗಳ ದಿನಾಚರಣೆಗೆ ನಂದಿಬೆಟ್ಟಕ್ಕೆ (ನಂದಿಹಿಲ್ಸ್) ಹೋಗಬೇಕು ಎಂದುಕೊಂಡವರಿಗೆ ಬೇಸರದ ಸಂಗತಿ. ಫೆ.14 ರಂದು ನಂದಿಬೆಟ್ಟಕ್ಕೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ನೊಂದಿಗೆ ಮಾತನಾಡಿದ ಉಪ ಆಯುಕ್ತ ಜಿ ಪ್ರಭು, ಜನಪ್ರಿಯ ಪ್ರವಾಸಿ ತಾಣದಲ್ಲಿ ಶಾಂತಿ ಮತ್ತು ನೆಮ್ಮದಿಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದೃಢಪಡಿಸಿದರು. ಹಿಂದೆ ಪ್ರೇಮಿಗಳ ದಿನದಂದು ವರದಿಯಾದ ಆತ್ಮಹತ್ಯೆ ಪ್ರಕರಣ ಪರಿಗಣಿಸಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ … Read more

ಭೀಕರ ಸರಣಿ ಅಪಘಾತ: 7 ಜನ ದುರ್ಮರಣ

ದೇವನಹಳ್ಳಿ: ಹೊಸಕೋಟೆ-ದಾಬಸ್ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಸರಣಿ ಅಪಘಾತದಲ್ಲಿ 7 ಜನ ದುರ್ಮರಣ ಹೊಂದಿದ್ದು, ಅಪಘಾತದಲ್ಲಿ ಬದುಕುಳಿದ ಕ್ಯಾಂಟರ್ ಚಾಲಕ ಘಟನೆಯ ಕುರಿತು ವಿವರಿಸಿದ್ದಾರೆ. ಮಾಲೂರು ಕಡೆಯಿಂದ ತುಮಕೂರಿಗೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ವಾಹನ ಕ್ಯಾಂಟರ್ ಗೆ ಗುದ್ದಿದೆ. ಇದರಿಂದ ಕ್ಯಾಂಟರ್ ಪಲ್ಟಿಯಾಗಿದ್ದು, ಸ್ಥಳೀಯರು ಸಹಾಯಕ್ಕೆ ಬಂದು ತನ್ನನ್ನು ಮೇಲೆತ್ತಿದ್ದಾರೆ. ಬಳಿಕ ಸ್ಥಳೀಯರ ಸಹಾಯದಿಂದ ಸ್ನೇಹಿತರಿಗೆ ಕರೆ ಮಾಡಿ, ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ತಿಳಿಸಿದ್ದಾರೆ.

ಕೆಎಸ್ಆರ್ ಟಿಸಿ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ

20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ ಚಾಮರಾಜನಗರ: ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಒಂದು ಭೀಕರ ಅಪಘಾತ ನಡೆದಿದೆ. ಕೆಎಸ್ಆರ್ ಟಿಸಿ ಬಸ್ ಮತ್ತು ಖಾಸಗಿ ಬಸ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಜಿಲ್ಲೆಯ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ 4ನೇ ತಿರುವಿನಲ್ಲಿ ಈ ಘಟನೆ ನಡೆದಿದೆ. ಮೈಸೂರಿನಿಂದ ಮಹದೇಶ್ವರ ಬೆಟ್ಟಕ್ಕೆ ಬರ್ತಿದ್ದ ಸರ್ಕಾರಿ ಬಸ್ ಮುಂದೆಯಿಂದ ಬಂದ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲು … Read more

ಹೆತ್ತ ಮಗಳಿಂದಲೇ ತಾಯಿ ಹತ್ಯೆ. ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ.

ತುಮಕೂರು: ತುಮಕೂರು ನಗರದ ಬಂಡೇಪಾಳ್ಯ ಬಳಿಯ ಶ್ರೀನಗರ ನಿವಾಸಿ ಪುಷ್ಪಲತಾ ಸ್ವಂತ ಸೂರು ಕಟ್ಟಿಕೊಂಡು ಮಗಳು ಸುಚಿತ್ರಾ ಹಾಗೂ ಆಳಿಯನ ಜೊತೆ ವಾಸವಿದ್ದರು. ಕಳೆದ ಕೆಲ ದಿನಗಳಿಂದ ಮಂಡಿನೋವು ಎಂದು ಹಾಸಿಗೆ ಹಿಡಿದಿದ್ದರು. ಫೆಬ್ರವರಿ 11 ರಂದು ರಾತ್ರಿ ನಿಗೂಢವಾಗಿ ಸಾವನಪ್ಪಿದ್ದಾರೆ. ಆಕೆಯ ಜೊತೆಗೆ ವಾಸವಿದ್ದ ಮಗಳು ಹೃದಯಾಘಾತ ಎಂದು ಅಂತ್ಯಕ್ರಿಯೆ ಮಾಡಲು ಮುಂದಾಗಿದ್ದಳು. ಆದರೆ, ಅದೇ ಸಮಯಕ್ಕೆ, ಕೆಲವು ಮಂದಿ ಸ್ಥಳೀಯರು ಅನುಮಾನದಿಂದ ನೀಡಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಬಂದ ಪೊಲೀಸರು ಸಾವಿನ ಹಿಂದಿನ ಅಸಲಿ … Read more

ಮೈಸೂರು ಸ್ಯಾಂಡಲ್ ಕೇವಲ ಸಾಬೂನಲ್ಲ; ಭಾವನೆ, ಬಾಲ್ಯ ಮತ್ತು ಸುಮಧುರ ನೆನಪು: ತಮನ್ನಾ ಭಾಟಿಯಾ

ಬೆಂಗಳೂರು: ನಾಡಿನ ಐಕಾನಿಕ್ ಉತ್ಪನ್ನವಾದ ಮೈಸೂರು ಸ್ಯಾಂಡಲ್ ಸೋಪ್ ಪ್ರಚಾರ ರಾಯಭಾರಿಯಾಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಮಂಗಳವಾರ ಅಧಿಕೃತವಾಗಿ ಕಾರ್ಯಾರಂಭಿಸಿದರು. ಶತಮಾನಕ್ಕೂ ಹೆಚ್ಚಿನ ಇತಿಹಾಸವಿರುವ ಕೆಎಸ್ಡಿಎಲ್ ಸಂಸ್ಥೆಯ ಪ್ರಚಾರ ರಾಯಭಾರಿಯಾಗಿ ಹೊಸ ಅಧ್ಯಾಯ ಆರಂಭಿಸಿದರು. ಇದಕ್ಕೆ ವೇದಿಕೆಯಾಗಿದ್ದು ತಾಜ್ ವೆಸ್ಟ್ ಎಂಡ್ ಹೋಟೆಲಿನ ಝಗಮಗಿಸುವ ಸಭಾಂಗಣ. 57 ಉತ್ಪನ್ನಗಳ ಬಿಡುಗಡೆ: ಹೌದು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹಾಗೂ ಅಧ್ಯಕ್ಷ ಸಿ.ಎಸ್.ಅಪ್ಪಾಜಿ ನಾಡಗೌಡ ಅವರ ನೇತೃತ್ವದಲ್ಲಿ ಕೆಎಸ್ಡಿಎಲ್, ಹೊಸ ಯುಗಕ್ಕೆ ಕಾಲಿಟ್ಟಿದೆ. ಇದಕ್ಕೆ … Read more

ರಸ್ತೆ ಅಪಘಾತ: ಮೂವರು ಸಾವು

ರಾಯಚೂರು: ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಓರ್ವ ಗರ್ಭಿಣಿ ಸೇರಿದಂತೆ ಒಟ್ಟು ಮೂವರು ಮೃತಪಟ್ಟು, 12 ಜನರು ಗಾಯಗೊಂಡಿರುವ ಘಟನೆ ನಡೆದಿದೆ. ದೇವದುರ್ಗ ತಾಲೂಕಿನ ಕರಿಗುಡ್ಡ ಗ್ರಾಮದ ಬಳಿ ಟಂಟಂ ಆಟೋ ಹಾಗೂ ಕಲ್ಯಾಣ ಕರ್ನಾಟಕ ಸಾರಿಗೆ ಸೇರಿದ ಬಸ್ ನಡುವೆ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಗರ್ಭಿಣಿ ಮೊನ್ನಮ್ಮ(30) ಹಾಗೂ ಕರಿಗುಡ್ಡ ಗ್ರಾಮದ ಮಲ್ಲಪ್ಪ(47) ಎಂಬುವರು ಮೃತಪಟ್ಟಿದ್ದಾರೆ. ಗಂಭೀರ ಗಾಯಗೊಂಡಿದ್ದ ಮಲ್ಲಪ್ಪ ಸ್ಥಳದಲ್ಲೇ ಮೃತಪಟ್ಟರೆ, ಮೊನ್ನಮ್ಮ ಚಿಕಿತ್ಸೆ ಫಲಕಾರಿಯಾಗದೇ ಸ್ಥಳೀಯ ಆಸ್ಪತ್ರೆಯಲ್ಲಿ … Read more

’ನಂದಿನಿ’ ಬ್ರ್ಯಾಂಡ್ ಗೆ ನಟಿ ಸುಧಾರಾಣಿ ರಾಯಭಾರಿ

ಬೆಂಗಳೂರು: ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ’ನಂದಿನಿ’ ಉತ್ಪನ್ನಗಳ ನೂತನ ಪ್ರಚಾರ ರಾಯಭಾರಿಯನ್ನಾಗಿ ಹಿರಿಯ ನಟಿ ಸುಧಾರಾಣಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ನೀಡಿದ್ದಾರೆ. ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟದ ಪ್ರಮುಖ ಭಾಗವಾದ ಬೆಂಗಳೂರು ಹಾಲು ಒಕ್ಕೂಟ ನಟಿ ಸುಧಾರಾಣಿ ಅವರನ್ನು ನಂದಿನಿ ಉತ್ಪನ್ನಗಳ ನೂತನ ಪ್ರಚಾರದ ರಾಯಭಾರಿಯನ್ನಾಗಿ ನೇಮಿಸಲಾದ ಬಗ್ಗೆ ಅಧಿಕೃತವಾಗಿ ಘೋಷಿಸಿದೆ. ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ಶ್ರೀಮತಿ ಸುಧಾ ರಾಣಿ ಅವರು ಆಯ್ಕೆಯಾಗಿದ್ದು, … Read more