
ತುಮಕೂರು: ತಾಲ್ಲೂಕಿನ ನಾಗವಲ್ಲಿ ಸಮೀಪದ ರಂಗಾಪುರ ಬಳಿಯ ಸೋಪನಹಳ್ಳಿ ಗೇಟ್ನಲ್ಲಿ ಶನಿವಾರ ಅರಳೀ ಮರಕ್ಕೆ ಲಾರಿ ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿದ್ದಾರೆ. ಕೇರಳದ ರಷೀದ್ ಅಲಿ (25), ಅಮೀನ್ (23) ಮೃತಪಟ್ಟವರು.
ಆಂಧ್ರಪ್ರದೇಶದಿAದ ಕೇರಳಕ್ಕೆ ಲಾರಿಯಲ್ಲಿ ಕಡಪ ಕಲ್ಲು ಸಾಗಿಸುತ್ತಿದ್ದರು. ಚಾಲಕನ ನಿಯಂತ್ರಣದ ತಪ್ಪಿದ ಲಾರಿ ಮರಕ್ಕೆ ಡಿಕ್ಕಿ ಹೊಡೆದಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ನಂತರ ಕುಣಿಗಲ್ – ತುಮಕೂರು ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿತ್ತು. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಣಿಗಲ್ ರಸ್ತೆಯಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ಇದಕ್ಕೆ ಕಡಿವಾಣ ಹಾಕಬೇಕು. ಅದೃಷ್ಟವಶಾತ್ ಇವತ್ತು ಅರಳಿ ಮರದ ಕೆಳಗಡೆ ಯಾರೂ ಇರಲಿಲ್ಲ. ಇದ್ದಿದ್ದರೆ ಸಾವು-ನೋವು ಜಾಸ್ತಿಯಾಗುತ್ತಿತ್ತು. ಸಂಬAಧಪಟ್ಟ ಅಧಿಕಾರಿಗಳು ಹೆದ್ದಾರಿಯಲ್ಲಿ ಹಂಪ್ಸ್ ಅಳವಡಿಸಬೇಕು. ಅಪಘಾತ ನಿಯಂತ್ರಣಕ್ಕೆ ಅಗತ್ಯ ಕ್ರಮ ವಹಿಸಬೇಕು ಎಂದು ಸುತ್ತಲಿನ ಗ್ರಾಮಸ್ಥರು ಆಗ್ರಹಿಸಿದರು.
ಅರಳೀ ಮರಕ್ಕೆ ಲಾರಿ ಡಿಕ್ಕಿ: ಚಾಲಕ ಸೇರಿ ಇಬ್ಬರು ಸಾವು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


