--ಇಲ್ಲಿ ಜಾಹೀರಾತು--

ರೂಪಾಯಿ ಮೌಲ್ಯ ಕುಸಿತ

On: March 9, 2026 2:30 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ನವದೆಹಲಿ: ಕಚ್ಚಾ ತೈಲ ಬೆಲೆಯಲ್ಲಿ ತೀವ್ರ ಏರಿಕೆ ಮತ್ತು ಡಾಲರ್ಗೆ ಬೇಡಿಕೆ ಹೆಚ್ಚಳದಿಂದಾಗಿ ಸೋಮವಾರ ಅಮೆರಿಕದ ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದಿದೆ.
ಡಾಲರ್ ಎದುರು ರೂಪಾಯಿ ಮೌಲ್ಯ 92.20ಕ್ಕೆ ಆರಂಭವಾಗಿ, ಆರಂಭಿಕ ವಹಿವಾಟಿನಲ್ಲಿ ಪ್ರತಿ ಯುಎಸ್ ಡಾಲರ್ಗೆ 92.528 ರೂ.ಗೆ ಮತ್ತಷ್ಟು ದುರ್ಬಲಗೊಂಡಿದೆ. ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದಿಂದ ಕಚ್ಚಾ ತೈಲವನ್ನು ಬ್ಯಾರೆಲ್ಗೆ 118 ಡಾಲರ್ಗೆ ಏರಿದೆ. ಇದು ರೂಪಾಯಿ ಮೇಲೆ ಒತ್ತಡ ಹೇರಿದೆ ಎಂದು ವಿಶ್ಲೇಷಿಸಲಾಗಿದೆ.
ಕಚ್ಚಾ ತೈಲ ಬೆಲೆಯ ತೀವ್ರ ಏರಿಕೆಯಿಂದ ದೇಶೀಯ ಕರೆನ್ಸಿ ಒತ್ತಡವನ್ನು ಎದುರಿಸುತ್ತಿದೆ ಎಂದು ಕರೆನ್ಸಿ ತಜ್ಞರು ತಿಳಿಸಿದ್ದಾರೆ. ಸೋಮವಾರ ಕಚ್ಚಾ ತೈಲ ಬೆಲೆ ಶೇ.25ರಷ್ಟು ಏರಿಕೆಯಾಗಿ ಪ್ರತಿ ಬ್ಯಾರೆಲ್ಗೆ 116 ಡಾಲರ್ಗಳಿಗೆ ತಲುಪಿದೆ. ಕಚ್ಚಾ ತೈಲದ ಬೆಲೆ ಏರಿಕೆಯಿಂದಾಗಿ ಡಾಲರ್ಗೆ ಬೇಡಿಕೆ ಹೆಚ್ಚಾಗಿದೆ. ಇದರಿಂದಾಗಿ ರೂಪಾಯಿ ಮೇಲೆ ಒತ್ತಡ ಹೇರಲಾಗಿದೆ ಎನ್ನಲಾಗಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now