
ಮಡಿಕೇರಿ: ಹಾಡಹಗಲೇ ಕಾಡಾನೆ ದಾಳಿ ಪರಿಣಾಮ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣ ಗ್ರಾಮ ಪಂಚಾಯತಿ ವ್ಯಾಪ್ತಿಯ ಬಾಳೆಗುಂಡಿ ಗಿರಿಜನ ಹಾಡಿಯಲ್ಲಿ ನಡೆದಿದೆ.
ಗ್ರಾಮ ಪಂಚಾಯತಿ ಮಾಜಿ ಸದಸ್ಯೆ ಹಾಡಿಯ ನಿವಾಸಿ ಜಲಜಾಕ್ಷಿ ಮೃತ ದುರ್ದೈವಿ. ಸೋಮವಾರ ಬೆಳಗ್ಗೆ 10 ಗಂಟೆ ಸಮಯದಲ್ಲಿ ಅರಣ್ಯ ಉತ್ಪನ್ನಗಳ ಸಂಗ್ರಹಕ್ಕೆ ತಮ್ಮ ಮನೆಯಂಗಳದ ಆಸುಪಾಸಿನ ಅರಣ್ಯಕ್ಕೆ ತೆರಳಿ ಸೀಗೆ ಹೆರಕುತ್ತಿದ್ದಾಗ ಧಾವಿಸಿದ ಕಾಡಾನೆ ಒಂದೇ ಸಮನೆ ದಾಳಿ ನಡೆಸಿದೆ ಎನ್ನಲಾಗಿದೆ. ಸ್ಥಳಕ್ಕೆ ಕುಶಾಲನಗರ ಅರಣ್ಯಾಧಿಕಾರಿಗಳು ಧಾವಿಸಿ ಮಹಜರು ನಡೆಸಿದ್ದಾರೆ.
ಘಟನೆ ಸಂಬAಧಿಸಿದAತೆ ಗ್ರಾಮೀಣ ಭಾಗದ ಜನರು ಅರಣ್ಯ ಇಲಾಖೆಯ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಭಾಗದಲ್ಲಿ ದಿನನಿತ್ಯ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಮನೆಯಿಂದ ಯಾರೂ ಹೊರಗೆ ಬರಲಾಗದ ವಾತಾವರಣ ನಿರ್ಮಾಣವಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕಾಡಾನೆಗಳನ್ನು ಓಡಿಸಲು ಮುಂದಾಗುವುದಿಲ್ಲ. ಹೀಗಾಗಿ ದಿನನಿತ್ಯ ಪ್ರಾಣಭಯದಲ್ಲೇ ಓಡಾಟ ನಡೆಸುವ ಅನಿವಾರ್ಯತೆ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕಾಡಾನೆ ದಾಳಿಯಿಂದ ಹಾಡಿ ಮಹಿಳೆ ಸಾವು

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು


