--ಇಲ್ಲಿ ಜಾಹೀರಾತು--

ಮಗುವಿನ ಕತ್ತು ಹಿಸುಕಿ ದಂಪತಿ ನೇಣಿಗೆ ಶರಣು

On: March 9, 2026 2:39 PM
Follow Us
--ಇಲ್ಲಿ ಜಾಹೀರಾತು--

Whatsapp Channel

Join Now

Telegram Group

Join Now


ಮಂಡ್ಯ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲ 2 ವರ್ಷದ ಮಗುವಿನ ಕತ್ತು ಹಿಸುಕಿ, ಬಳಿಕ ದಂಪತಿ ನೇಣು ಶರಣಾಗಿದ್ದಾರೆ. ಆದರೆ ಅಸ್ವಸ್ಥಗೊಂಡಿದ್ದ ಮಗು ಅದೃಷ್ಟವಶಾತ್ ಬದುಕುಳಿದಿರುವ ಘಟನೆ ಮಂಡ್ಯದ ಕೆ.ಆರ್.ಪೇಟೆಯಲ್ಲಿ ನಡೆದಿದೆ.
ಹೊಸಕೋಟೆ ಗ್ರಾಮದ ದರ್ಶನ್, ದಿವ್ಯಶ್ರೀ ನೇಣಿಗೆ ಶರಣಾದ ದಂಪತಿ. ತಮ್ಮ ಎರಡು ವರ್ಷದ ಮಗುವನ್ನು ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ್ದಾರೆ. ಮಗು ಸತ್ತಿದೆ ಎಂದು ಭಾವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.
ದಂಪತಿ ಕಳೆದ ಮೂರು ವರ್ಷದ ಹಿಂದೆ ವಿವಾಹವಾಗಿದ್ದರು. ದಂಪತಿಗೆ ಎರಡು ವರ್ಷದ ಮಗುವಿತ್ತು. ಕೆ.ಆರ್.ಪೇಟೆ ಜಯನಗರ ಬಡಾವಣೆ ಮನೆಯೊಂದರಲ್ಲಿ ದಂಪತಿ ಬಾಡಿಗೆಗೆ ಇದ್ದರು. ಸೋಮವಾರ ಬೆಳಿಗ್ಗೆ ಕೌಟುಂಬಿಕ ಕಲಹದಿಂದಾಗಿ ತಮ್ಮ ಮಗುವನ್ನು ಕತ್ತು ಹಿಸುಕಿ ಕೊಲೆಗೆ ಮುಂದಾಗಿದ್ದಾರೆ. ಈ ವೇಳೆ ಮಗು ಅಸ್ವಸ್ಥಗೊಂಡಿದೆ. ಬಳಿಕ ದಂಪತಿ ನೇಣಿಗೆ ಶರಣಾಗಿದ್ದಾರೆ. ಅಸ್ವಸ್ಥಗೊಂಡಿದ್ದ ಮಗು ಬದುಕುಳಿದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕೆ.ಆರ್.ಪೇಟೆ ಟೌನ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Author

Editor TumkurVarthe

ತುಮಕೂರು ವಾರ್ತೆ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರು

WhatsApp

Join Now

Telegram

Join Now

Instagram

Join Now